ನವದೆಹಲಿ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಅಕ್ರಮವನ್ನು ವಿರೋಧಿಸಿ ನಿನ್ನೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನಿವಾಸದ ಮುಂದೆ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ರಾಹುಲ್ ಗಾಂಧಿಯವರನ್ನು ಅರೆಸ್ಟ್ ಮಾಡಿದರು.
ಇದೀಗ ದೆಹಲಿಯಲ್ಲಿ ರಾಹುಲ್ ಗಾಂಧಿ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸುದ್ದಿಗೋಷ್ಠಿ ನಡೆಸಿದರು.
ದೆಹಲಿಯ ಎಐಸಿಸಿ ಕಚೇರಿಯಲ್ಲಿ ರಾಹುಲ್ ಗಾಂಧಿ ಸುದ್ದಿಗೋಷ್ಠಿ ನಡೆಸಿದರು. ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯದ ವಿಡಿಯೋ ಪ್ರದರ್ಶನ ಮಾಡಿದರು.
ತೋಳಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ರಾಹುಲ್ ಗಾಂಧಿ ಸುದ್ದಿಗೋಷ್ಠಿ ನಡೆಸಿದರು. ವಿದ್ಯಾರ್ಥಿಗಳು ಪ್ರತಿಭಟನೆ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ಮಾಡಿದರು. ಕೇಂದ್ರ ಸರ್ಕಾರ ನಮ್ಮ ಶಿಕ್ಷಣ ವ್ಯವಸ್ಥೆಯನ್ನು ನಾಶ ಮಾಡಿದೆ. ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.
ಆದರೆ ಭದ್ರತಾ ಪಡೆಗಳು ವಿದ್ಯಾರ್ಥಿಗಳನ್ನು ತೀವ್ರವಾಗಿ ಥಳಿಸಿವೆ. ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಯುವ ಜನತೆ ಒತ್ತಾಯಿಸುತ್ತಿರುವುದರಲ್ಲಿ ನ್ಯಾಯ ಇದೆ.
ಪ್ರಧಾನಿ ಮೋದಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ. ವಿದ್ಯಾರ್ಥಿಗಳ ಬೇಡಿಕೆಗೆ ನಮ್ಮ ಸಂಪೂರ್ಣ ಬೆಂಬಲವಿದೆ.
ವಿದ್ಯಾರ್ಥಿಗಳು ಏನು ತಪ್ಪು ಮಾಡಿದ್ದಾರೆ? ನೀಟ್ ಅಕ್ರಮದಿಂದ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳು ನ್ಯಾಯಯುತವಾದ ಶಿಕ್ಷಣ ವ್ಯವಸ್ಥೆ ಬಗ್ಗೆ ಕೇಳುತ್ತಿದ್ದಾರೆ ಎಂದರು.


