Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿ. ಟಿ ರವಿ ಪ್ರಕರಣ ಸಿಐಡಿಗೆ ಕೊಟ್ಟಿದಕ್ಕೆ ಸಭಾಪತಿ ಆಕ್ಷೇಪ

Advertisement
ಬೆಂಗಳೂರು : ಕಳೆದ ವರ್ಷದ ಕೊನೆಯಲ್ಲಿ ನಡೆದಿದ್ದ ಚಳಿಗಾಲದ ಅಧಿವೇಶನದ ವೇಳೆ ಪರಿಷತ್​​​​ನಲ್ಲಿ ಬಿಜೆಪಿ ಎಂಎಲ್​​ಸಿ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಅವಾಚ್ಯ ಪದ ಬಳಕೆ ಆರೋಪ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವರ್ಗಾಯಿಸಿದೆ.

ಈ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ಸಭಾಪತಿ ಬಸವರಾಜ ಹೊರಟ್ಟಿ ಅವರು, ಗೃಹ ಸಚಿವ ಜಿ.ಪರಮೇಶ್ವರ್ ಅವರಿಗೆ ಪತ್ರ ಬರೆದು ಅಸಮಾಧಾನ ಹೊರಹಾಕಿದ್ದಾರೆ.

ಸಿಐಡಿ ತನಿಖೆಗೆ ವಹಿಸಿರುವ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ ಎಂದಿರುವ ಹೊರಟ್ಟಿಯವರು, ಯಾವ ಕಾರಣಕ್ಕೆ CIDಗೆ ಪ್ರಕರಣದ ತನಿಖೆಗೆ ವಹಿಸಿದ್ದಾರೆಂದು ತಿಳಿದಿಲ್ಲ ಎಂದಿದ್ದಾರೆ.

ಸದನದಲ್ಲಿ ನಡೆದ ಘಟನೆ ಬಗ್ಗೆ ಚರ್ಚಿಸುವುದು, ತೀರ್ಮಾನಿಸುವುದರಲ್ಲಿ ಸದನಕ್ಕೆ ಅಧಿಕಾರ ಇರುತ್ತದೆ. ಘಟನೆಗೆ ಸಂಬಂಧಿಸಿ ಪರಾಮರ್ಶಿಸಿ ಪೀಠದಿಂದ ತೀರ್ಪು ನೀಡಲಾಗಿದೆ. ಸದನದ ಆವರಣದ ಒಳಗೆ ಶಿಸ್ತು ಕಾಪಾಡುವುದು, ನಿಯಂತ್ರಿಸುವ ಅಧಿಕಾರ ಸಭಾಪತಿಗೆ ಪ್ರದತ್ತವಾಗಿದೆ.

ಹೀಗಾಗಿ ಸಭಾಪತಿಗಳ ತೀರ್ಪು ಈ ಪ್ರಕರಣದಲ್ಲಿ ಅಂತಿಮವಾಗಿರುತ್ತದೆ. ಗೌರವದೊಂದಿಗೆ ನಮ್ಮ ಕರ್ತವ್ಯ ನಿರ್ವಹಿಸಬೇಕಿದೆ. ಸಿಐಡಿಗೆ ವಹಿಸಿರುವ ಈ ಪ್ರಕರಣವನ್ನು ನಿರ್ವಹಿಸುತ್ತೀರಿ ಎಂದು ನಂಬಿರುವುದಾಗಿ ಪತ್ರದ ಮೂಲಕ ಹೊರಟ್ಟಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ