LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಗಿಲ್ಲೆಸುಗೂರು ಕ್ಯಾಂಪ್‌ನಲ್ಲಿ ದೇವಸ್ಥಾನ ಹಾಗೂ ಚರ್ಚ್ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ 

Advertisement

ರಾಯಚೂರು : ತಾಲ್ಲೂಕಿನ ಗಿಲ್ಲೆಸುಗೂರು ಕ್ಯಾಂಪ್‌ನಲ್ಲಿ ದೇವಸ್ಥಾನ ಹಾಗೂ ಚರ್ಚ್ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ಪುನರ್ವಸತಿ ಸ್ಥಳದಲ್ಲಿ ನಿರ್ಮಿಸಲಾಗಿರುವ ಚರ್ಚ್ ಮತ್ತು ಆಂಜನೇಯ ದೇವಸ್ಥಾನದ ವಿಚಾರವಾಗಿ ಕಳೆದ ಎರಡು ತಿಂಗಳಿಂದ ವಿವಾದ ಮುಂದುವರಿದಿತ್ತು. ಈ ಹಿಂದೆ ಜಿಲ್ಲಾಧಿಕಾರಿ, ತಹಶೀಲ್ದಾರ್ ಹಾಗೂ ಪೊಲೀಸ್ ಇಲಾಖೆಯ ಸಮ್ಮುಖದಲ್ಲಿ ಸಂಧಾನ ನಡೆಸಲಾಗಿತ್ತು. ಆದರೂ ನಿನ್ನೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ಮತ್ತೆ ಅಸಮಾಧಾನ ಸ್ಫೋಟಗೊಂಡಿದೆ.

ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ವೇಳೆ ಪರಸ್ಪರ ಕಲ್ಲು ತೂರಾಟ ಮಾಡಿಕಿಂಡಿದ್ದಾರೆ ಎನ್ನಲಾಗುತ್ತಿದೆ, ಕಲ್ಲು ತೂರಾಟದಲ್ಲಿ ಇಬ್ಬರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ರಾಯಚೂರಿನ ಒಪೆಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಇಡಪನೂರು ಪೊಲೀಸರು ಹಾಗೂ ಎಎಸ್ಪಿ ಸ್ಥಳಕ್ಕೆ ತೆರಳಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಚ್ಚಾಲಿ ಗ್ರಾಮ ಹಾಗೂ ಬಿಚ್ಚಾಲಿ ಕ್ಯಾಂಪ್ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಏಳು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ವರದಿ: ಗಾರಲದಿನ್ನಿ ವೀರನಗೌಡ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಸಚಿವ ಸತೀಶ್ ಜಾರಕಿಹೊಳಿಗೆ ಮನೆ ಮೇಲೆ ಇಡಿ ದಾಳಿ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ : ಕನ್ನಡ ಮಾಧ್ಯಮ ಶಾಲೆಗೆ ಅನುದಾನ ನೀಡುವಂತೆ ಆಗ್ರಹ ಸಿಎಂ ಸಂಪರ್ಕ ಸಲಹೆಗಾರರಾಗಿ ದೀಪಕ್ ತಿಮ್ಮಯ್ಯ ನೇಮಕ ನಾಳೆ ಡಿ. ಕೆ ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ 100 ದಿನ : ಮಹತ್ವದ ಘೋಷಣೆ ಸಾಧ್ಯತೆ ಕಾಸ್ಮೆಟಿಕ್ ಟ್ರೀಟ್‌ಮೆಂಟ್ ಬಳಿಕ ಉದ್ಯಮಿ ದುರ್ಮರಣ :7 ಕೋಟಿ ರೂ. ಚಿನ್ನದ ಶವಪೆಟ್ಟಿಗೆಯಲ್ಲಿ ಅಂತ್ಯಕ್ರಿಯೆ ನಾಳೆಯಿಂದ ಇಂಗ್ಲೆಂಡ್- ಪಾಕಿಸ್ತಾನ ತೃತೀಯ ಟೆಸ್ಟ್ ಶುರು ವಿಜಯೇಂದ್ರ ಏನೇ ಪಾದಯಾತ್ರೆ ಮಾಡಿದ್ರೂ ರಾಜ್ಯಾಧ್ಯಕ್ಷ ಸ್ಥಾನದಿಂದ ಔಟ್ ಫಿಕ್ಸ್ : ಯತ್ನಾಳ್ ಡಿಕೆಶಿ ಸರ್ಕಾರಕ್ಕೆ 100 ದಿನದ ಸಂಭ್ರಮ : ಡಿ. ಕೆ ಶಿವಕುಮಾರ್ ಗೆ ಹೈಕಮಾಂಡ್ ಬುಲಾವ್ಸರ್ವಜನಾಂಗದ ಹಿತಕ್ಕಾಗಿ ಭಗವಂತನೇ ಸೃಷ್ಟಿಸಿದ ಯೋಜನೆ: ಮೃತ್ಯುಂಜಯ ದೇಶೀಕೇಂದ್ರ ಶ್ರೀ ಶ್ಲಾಘನೆಮಾನ್ವಿ ತಾಲೂಕ ಖಾಸಗಿ ಶಿಕ್ಷಣ ಸಂಸ್ಥೆ ಒಕ್ಕೂಟದ ವತಿಯಿಂದ ಶಿಕ್ಷಕರ ದಿನಾಚರಣೆ.  ಶ್ರೀ ರಾಜಾ ಸುಭಾಷ್ ಚಂದ್ರ ನಾಯಕ್