ಪಂಚೂರ್ (ಉತ್ತರಾಖಂಡ):ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶನಿವಾರ ತಮ್ಮ ತಾಯಿ ಸಾವಿತ್ರಿ ದೇವಿ ಅವರ ಪಾರ್ಥಿವ ಶರೀರಕ್ಕೆ ಹೆಗಲು ನೀಡು ವ ಮೂಲಕ ಅಂತಿಮ ನಮನ ಸಲ್ಲಿಸಿದರು. ಉತ್ತರಾಖಂಡದ ಪೌರಿ ಗಢ್ವಾಲ್ ಜಿಲ್ಲೆಯ ಪೂರ್ವಜರ ಗ್ರಾಮವಾದ ಪಂಚೂರಿನಲ್ಲಿ ಅಂತ್ಯಕ್ರಿಯೆ ನಡೆಯಿತು.
91 ವರ್ಷದ ಸಾವಿತ್ರಿ ದೇವಿ ಅವರು ಶುಕ್ರವಾರ ಬೆಳಗ್ಗೆ ವಯೋಸಹಜ ಅನಾರೋಗ್ಯದಿಂದ ನಿಧನ ಹೊಂದಿದ್ದರು. ತಾಯಿಯ ಅಂತಿಮ ದರ್ಶನ ಪಡೆದ ಯೋಗಿ ಆದಿತ್ಯನಾಥ್ ಅವರು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ವೇಳೆ ಅವರು ಭಾವುಕರಾಗಿ ಕಣ್ಣೀರಿಟ್ಟರು.
ತಾಯಿಯ ನಿಧನದ ಬಳಿಕ ಯೋಗಿ ಆದಿತ್ಯನಾಥ್ ಅವರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸಂಕ್ಷಿಪ್ತವಾಗಿ ಸಂತಾಪ ಸೂಚಿಸಿದ್ದರು. 'ಮಾ... ಓಂ ಶಾಂತಿ' ಎಂದು ಬರೆದುಕೊಂಡಿದ್ದರು.
ಸಾವಿತ್ರಿ ದೇವಿ ಅವರ ನಿಧನದಿಂದ ಪಂಚೂರು ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಶೋಕದ ವಾತಾವರಣ ಆವರಿಸಿದೆ.


