ನವದೆಹಲಿ : ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಹುದ್ದೆಗೆ ಸಂಬಂಧಿಸಿದಂತೆ ಕಳೆದ ಕೆಲವು ದಿನಗಳಿಂದ ಮಾಧ್ಯಮಗಳಲ್ಲಿ ಮತ್ತು ರಾಜಕೀಯ ವಲಯದಲ್ಲಿ ಹರಿದಾಡುತ್ತಿರುವ ಎಲ್ಲಾ ಸುದ್ದಿಗಳು ಕೇವಲ ಊಹಾಪೋಹಗಳಾಗಿದ್ದು, ಇದರಲ್ಲಿ ಯಾವುದೇ ವಾಸ್ತವ ಸತ್ಯವಿಲ್ಲ ಎಂದು ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹೇಳಿದ್ದಾರೆ.
ದೆಹಲಿಯಲ್ಲಿ ನಡೆದ ಮಹತ್ವದ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಇಂದು ನಾವು ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರೊಂದಿಗೆ ಸುದೀರ್ಘ ಹಾಗೂ ವಿವರವಾದ ಸಭೆಯನ್ನು ನಡೆಸಿದ್ದೇವೆ.
ಈ ಸಭೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಹಾಗೂ ನಾನು ಭಾಗಿಯಾಗಿದ್ದೆವು" ಎಂದು ತಿಳಿಸಿದರು.

