LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಹಿರಿಯ ಪತ್ರಕರ್ತ, ಮಾಜಿ ಸದಸ್ಯ ಪಿ.ರಾಮಯ್ಯ ನಿಧನ : ಸಿಎಂ ಸಂತಾಪ 

Advertisement
ಬೆಂಗಳೂರು : ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಪಿ.ರಾಮಯ್ಯ ಅವರ ನಿಧನದಿಂದ ದು:ಖಿತನಾಗಿದ್ದೇನೆ.'ದಿ ಹಿಂದೂ' ಪತ್ರಿಕೆಯಲ್ಲಿ ಐದು ದಶಕಗಳಿಗಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದ ರಾಮಯ್ಯ ಅವರು ನನ್ನ ಹಿತಚಿಂತಕರಾಗಿದ್ದರು.

ಪತ್ರಕರ್ತರಾಗಿ ಸದಾ ರಾಜ್ಯದ ಹಿತಕ್ಕಾಗಿ ಕೆಲಸ ಮಾಡಿದ್ದ ರಾಮಯ್ಯ ಅವರಲ್ಲಿದ್ದ ರಾಜಕೀಯ, ಇತಿಹಾಸ, ಸಂಸ್ಕೃತಿ ಮತ್ತು ಸಾಮಾಜಿಕ ವಿದ್ಯಮಾನಗಳ ಜ್ಞಾನ-ಅನುಭವ ಬೆರಗುಗೊಳಿಸುತಿತ್ತು.

ವಿಧಾನ ಪರಿಷತ್ ಸದಸ್ಯರಾಗಿಯೂ ಅವರು ಪರಿಣಾಮಕಾರಿಯಾಗಿ ಕೆಲಸ ಮಾಡಿದ್ದರು. ಸಣ್ಣ ಪತ್ರಿಕೆಗಳ ಸಮಸ್ಯೆಗಳ ಅಧ್ಯಯನಕ್ಕಾಗಿ ರಚಿಸಲಾಗಿದ್ದ ಸಮಿತಿಯ ಅಧ್ಯಕ್ಷರಾಗಿ ಸಣ್ಣ ಪತ್ರಿಕೆಗಳ ಸಮಸ್ಯೆಗೆ ಪರಿಹಾರ ದೊರಕಿಸಿಕೊಡಲು ಶ್ರಮಿಸಿದ್ದರು.ರಾಮಯ್ಯ ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ. ಅವರ ಕುಟುಂಬದ ಸದಸ್ಯರ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಪೋಸ್ಟ್ ಮಾಡಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು