LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಸೋಮವಾರದಿಂದ ಸಿಎಂ ಡಿ.ಕೆ ಶಿವಕುಮಾರ್ ಜಪಾನ್ ಪ್ರವಾಸ

Advertisement

ಬೆಂಗಳೂರು : ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಕರ್ನಾಟಕ ಸರ್ಕಾರದ ಉನ್ನತ ಮಟ್ಟದ ನಿಯೋಗವು ನವೆಂಬರ್ 23 ರಿಂದ 25 ರವರೆಗೆ ಜಪಾನ್ ಪ್ರವಾಸ ಕೈಗೊಳ್ಳಲಿದೆ.

ನವೆಂಬರ್ 23 ರಂದು ನಗೋಯಾ, ನವೆಂಬರ್ 24 ರಂದು ಒಸಾಕಾ ಹಾಗೂ ನವೆಂಬರ್ 25 ರಂದು ಟೋಕಿಯೊದಲ್ಲಿ ಮುಖ್ಯಮಂತ್ರಿಗಳು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಈ ಪ್ರವಾಸವು ಎರಡು ಪ್ರಮುಖ ಆದ್ಯತೆಗಳನ್ನು ಹೊಂದಿದೆ: ರಾಜ್ಯದಲ್ಲಿ ಜಪಾನ್ ಹೂಡಿಕೆಯನ್ನು ಮತ್ತಷ್ಟು ಬಲಪಡಿಸಲು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸಹಯೋಗದಲ್ಲಿ ಉದ್ಯಮಿಗಳೊಂದಿಗೆ ಸಭೆ ನಡೆಸುವುದು, ಹಾಗೂ ಜಾಗತಿಕ ಮಟ್ಟದಲ್ಲಿ ಮಾದರಿಯಾಗಿರುವ ಜಪಾನ್‌ನ ನಗರ ನಿರ್ಮಾಣ ಪದ್ಧತಿಗಳನ್ನು ಅಧ್ಯಯನ ಮಾಡಲು ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ತಂಡದೊಂದಿಗೆ ನಗರಾಭಿವೃದ್ಧಿ ಯೋಜನೆಗಳಿಗೆ ಭೇಟಿ ನೀಡುವುದು.

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವರಾದ ಶ್ರೀ ಎಂ. ಬಿ. ಪಾಟೀಲ್ ಅವರು ಮುಖ್ಯಮಂತ್ರಿಗಳಿಗೆ ಸಾಥ್ ನೀಡಲಿದ್ದು, ಕೈಗಾರಿಕಾ ಸಂವಾದಗಳನ್ನು ಮುನ್ನಡೆಸಲಿದ್ದಾರೆ. ಅಲ್ಲದೆ, ಜಪಾನ್ ಮತ್ತು ದಕ್ಷಿಣ ಕೊರಿಯಾದಲ್ಲಿ (ರಿಪಬ್ಲಿಕ್ ಆಫ್ ಕೊರಿಯಾ) ರಾಜ್ಯದ ಹೂಡಿಕೆ ಪ್ರಚಾರ ಕಾರ್ಯಕ್ರಮಗಳ ನೇತೃತ್ವವನ್ನೂ ವಹಿಸಲಿದ್ದಾರೆ.

ಈ ನಿಯೋಗದಲ್ಲಿ ಹಿರಿಯ ಅಧಿಕಾರಿಗಳ ತಂಡ ಇರಲಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಎಂ. ಮಹೇಶ್ವರ್ ರಾವ್ (ಭಾ.ಆ.ಸೇ), ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಡಾ. ಎಸ್. ಸೆಲ್ವಕುಮಾರ್ (ಭಾ.ಆ.ಸೇ), ಕೈಗಾರಿಕಾ ಅಭಿವೃದ್ಧಿ ಆಯುಕ್ತರು ಹಾಗೂ ಇನ್ವೆಸ್ಟ್ ಕರ್ನಾಟಕ ಫೋರಂನ ಸಿಇಒ ಖುಷ್ಬೂ ಗೋಯೆಲ್ ಚೌಧರಿ (ಭಾ.ಆ.ಸೇ), ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಡಾ. ರಾಜೇಂದ್ರ ಪ್ರಸಾದ್ (ಭಾ.ಆ.ಸೇ) ಮತ್ತು ಮುಖ್ಯಮಂತ್ರಿಗಳ ಉಪ ಕಾರ್ಯದರ್ಶಿ-1 ಯತೀಶ್ ಆರ್ (ಭಾ.ಆ.ಸೇ) ಸೇರಿದಂತೆ ಮುಖ್ಯಮಂತ್ರಿಗಳ ಕಚೇರಿ, ಜಿಬಿಎ ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಜಪಾನ್ ಉದ್ಯಮಗಳೊಂದಿಗೆ ಬಾಂಧವ್ಯ ವೃದ್ಧಿ ಮುಖ್ಯಮಂತ್ರಿಗಳು ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ನಿಯೋಗವು ಜಪಾನ್‌ನ ಪ್ರಮುಖ ಕಂಪನಿಗಳ ಉನ್ನತ ನಾಯಕರನ್ನು ಭೇಟಿ ಮಾಡಿ, ಅವರ ಮುಂದಿನ ಹೂಡಿಕೆ ಯೋಜನೆಗಳ ಕುರಿತು ಚರ್ಚಿಸುವುದರ ಜೊತೆಗೆ ಕರ್ನಾಟಕದಲ್ಲಿರುವ ವಿಪುಲ ಹೂಡಿಕೆ ಅವಕಾಶಗಳನ್ನು ಮನವರಿಕೆ ಮಾಡಿಕೊಡಲಿದೆ.

ನವೆಂಬರ್ 27 ರವರೆಗೆ ನಡೆಯಲಿರುವ ಈ ಕೈಗಾರಿಕಾ ಸಭೆಗಳಲ್ಲಿ, 2027ರ ಏಪ್ರಿಲ್ 20 ರಿಂದ 22 ರವರೆಗೆ ಬೆಂಗಳೂರು ಅರಮನೆಯಲ್ಲಿ ಇನ್ವೆಸ್ಟ್ ಕರ್ನಾಟಕ ವತಿಯಿಂದ ಆಯೋಜಿಸಲಾಗಿರುವ 'ಜಾಗತಿಕ ಹೂಡಿಕೆದಾರರ ಸಮಾವೇಶ 2027' ಕ್ಕೆ ಪ್ರತಿ ಕಂಪನಿಗೂ ಅಧಿಕೃತ ಆಹ್ವಾನ ನೀಡಲಾಗುವುದು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೈಲಹೊಂಗಲದಲ್ಲಿ ‘ಜೀವನ ಚೈತನ್ಯ ಕ್ರಿಕೆಟ್ ಟ್ರೋಫಿ’ಗೆ ಅದ್ಧೂರಿ ಚಾಲನೆಬಸವ ಮಂಟಪ ಪುಸ್ತಕದಲ್ಲಿ ಬಸವಣ್ಣನವರ ಕುರಿತು ಅವಹೇಳನಕಾರಿ ಬರಹ ಆರೋಪ; ಲೇಖಕ, ಪ್ರಕಾಶಕರ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆಪ್ರಜಾಸೇವೆ ಕಾರ್ಯಕ್ರಮಕ್ಕೆ ಜನಪ್ರತಿನಿಧಿಗಳು ಅಧಿಕಾರಿಗಳ ಗೈರು ಸಾರ್ವಜನಿಕರ ಆಕ್ರೋಶಬಸವ ಮಂಟಪ ಲೇಖಕನ ಹತ್ಯೆಗೈದರೇ 5 ಲಕ್ಷ ರೂ. ಬಹುಮಾನ : ಲಿಂಗಾಯತ ಮುಖಂಡದ. ಆಪ್ರಿಕಾ- ಬಾಂಗ್ಲಾದೇಶ ದ್ವಿತೀಯ ಟೆಸ್ಟ್ 23 ರಿಂದ ಆರಂಭಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ ತಂಡಕ್ಕೆ 3 ವಿಕೆಟ್ ಗಳ ಗೆಲುವು ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ಪತ್ರ: ಈಶ್ವರ ಖಂಡ್ರೆ ಪ್ರತಿ ಹಿಂದೂ ಮನೆಯಲ್ಲೂ ಬಂದೂಕು ಇರಬೇಕು : ಬಿಜೆಪಿ ಶಾಸಕಶಿಕ್ಷಣ ಸಂಸ್ಥೆಗಳು ಮಾನವೀಯ ಮೌಲ್ಯಗಳನ್ನು ಬಿತ್ತುವ ಕೇಂದ್ರಗಳಾಗಬೇಕು : ತಹಸೀಲ್ದಾರ್ ಭೀಮರಾಯ ಬಿ. ರಾಮಸಮುದ್ರವೆಲ್ಲಿಂಗಟನ್ ಟೆಸ್ಟ್: ಭಾರತ ತಂಡಕ್ಕೆ ಇನ್ನಿಂಗ್ಸ್ ಮುನ್ನಡೆ