Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಎಂ ಡಿಕೆಶಿ - ಹರಿಪ್ರಸಾದ್ ಜೋಡೆತ್ತುಗಳಂತೆ ಸಾಗಬೇಕು : ಖರ್ಗೆ ಕಿವಿ ಮಾತು 

Advertisement

ಬೆಂಗಳೂರು: ರಾಜ್ಯ ಕಾಂಗ್ರೆಸ್ ಇತಿಹಾಸದಲ್ಲಿ ಆರೂವರೆ ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿಯಾಗಿ ಚುಕ್ಕಾಣಿ ಹಿಡಿದಿದ್ದ ಡಿ.ಕೆ. ಶಿವಕುಮಾರ್(DK Shivakumar) ಅವರು ಮುಖ್ಯಮಂತ್ರಿಯಾದ ಬಳಿಕ ತಮ್ಮ ಸ್ಥಾನವನ್ನು ಬಿಟ್ಟುಕೊಟ್ಟಿದ್ದಾರೆ.

ಇಂದು ಬೆಂಗಳೂರಿನ(Bengaluru) ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್(BK Hariprasad) ಅವರು ನೂತನ ಅಧ್ಯಕ್ಷರಾಗಿ ಜವಾಬ್ದಾರಿ ಸ್ವೀಕರಿಸಿದರು. ಈ ಐತಿಹಾಸಿಕ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು, ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ರಾಜ್ಯದಲ್ಲಿ ಪಕ್ಷ ಮತ್ತು ಸರ್ಕಾರವನ್ನು ಮುನ್ನಡೆಸಲು ಅತ್ಯಂತ ಮಹತ್ವದ ರಾಜಕೀಯ ಸಲಹೆ ಹಾಗೂ ಕಟ್ಟುನಿಟ್ಟಿನ ಕಿವಿಮಾತುಗಳನ್ನು ಹೇಳಿದರು.

ರಾಜ್ಯದಲ್ಲಿ ಸರ್ಕಾರ ಮತ್ತು ಸಂಘಟನೆ ನಡುವೆ ಸಮನ್ವಯತೆ ಇರಬೇಕು ಎಂದು ಒತ್ತಿಹೇಳಿದ ಖರ್ಗೆ, ಯಾವುದೇ ಒಂದು ಬಂಡಿ ಕೇವಲ ಒಂದೇ ಒಂದು ಗಾಲಿಯಿಂದ ಓಡಲು ಸಾಧ್ಯವಿಲ್ಲ. ಅದಕ್ಕೆ ಎರಡು ಚಕ್ರಗಳು ಬೇಕು. 

ಅದೇ ರೀತಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಇಬ್ಬರೂ ಒಟ್ಟಾಗಿ, ಜೋಡೆತ್ತುಗಳ ಮಾದರಿಯಲ್ಲಿ ಜೊತೆಯಾಗಿ ಹೆಜ್ಜೆ ಇಡಬೇಕು. ಸರ್ಕಾರ ಮತ್ತು ಪಕ್ಷ ಒಟ್ಟಾಗಿ ಸಾಗಿದಾಗ ಮಾತ್ರ ಯಶಸ್ಸು ಸಾಧ್ಯ, ಎಂದು ಸಲಹೆ ನೀಡಿದರು.

ಮಾಧ್ಯಮಗಳ ಮುಂದೆ ಬಹಿರಂಗ ಹೇಳಿಕೆ ನೀಡಬೇಡಿ!

ಪಕ್ಷದ ಆಂತರಿಕ ಶಿಸ್ತು ಕಾಪಾಡುವಂತೆ ಉಭಯ ನಾಯಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ ಖರ್ಗೆ, ನಾಯಕರು ಅಥವಾ ಕಾರ್ಯಕರ್ತರು ಪಕ್ಷದ ಆಂತರಿಕ ವಿಷಯಗಳ ಕುರಿತು ಮಾಧ್ಯಮಗಳ ಮುಂದೆ ಹೋಗಿ ಬಹಿರಂಗವಾಗಿ ಹೇಳಿಕೆಗಳನ್ನು ನೀಡಬಾರದು. ನೀವು ಆಡುವ ಮಾತುಗಳು ಮತ್ತು ಕೊಡುವ ಹೇಳಿಕೆಗಳು ಪಕ್ಷದ ವರ್ಚಸ್ಸಿನ ಮೇಲೆ ಭಾರಿ ದೊಡ್ಡ ಪರಿಣಾಮ ಬೀರುತ್ತವೆ. ಏನೇ ಭಿನ್ನಾಭಿಪ್ರಾಯಗಳಿದ್ದರೂ ಪಕ್ಷದ ವೇದಿಕೆಯಲ್ಲೇ ಚರ್ಚಿಸಿ ಬಗೆಹರಿಸಿಕೊಳ್ಳಬೇಕು, ಎಂದು ಸೂಚಿಸಿದರು.

 

 

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಡಿಕೆಶಿ - ಹರಿಪ್ರಸಾದ್ ಜೋಡೆತ್ತುಗಳಂತೆ ಸಾಗಬೇಕು : ಖರ್ಗೆ ಕಿವಿ ಮಾತು ಅಡ್ಡಮತದಾನ ಮಾಡಿದವರನ್ನು ಈ ಜನ್ಮದಲ್ಲಿ ಚುನಾವಣೆ ನಿಲ್ಲದಂತೆ ಮಾಡುತ್ತೇವೆ : ಆರ್. ಅಶೋಕ್ ಜೈಲಿನಲ್ಲಿ ನಟ ದರ್ಶನ್ ಯೋಗಾಸನ : ಫೋಟೋ ವೈರಲ್ ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅಧಿಕಾರ ಸ್ವೀಕಾರ ೧೧ ಎಸೆತಗಳಲ್ಲಿ ಅರ್ಧ ಶತಕ: ಸೂರ್ಯವಂಶಿ ಇನ್ನೊಂದು ದಾಖಲೆ14,000 ಅಡಿ ಎತ್ತರದಲ್ಲಿ ಐಟಿಬಿಪಿ ಯೋಧರ ಯೋಗಾಸನ ಅಡ್ಡಮತದಾನದಿಂದ ಬಿಜೆಪಿಗೆ ತೀವ್ರ ಮುಖಭಂಗ: ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡಲು ಸಿದ್ಧತೆ ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಏರುಪೇರು : ಖಾಸಗಿ ಆಸ್ಪತ್ರೆಗೆ ದಾಖಲುನಿರ್ಮಾಣ ಹಂತದ ಸಭಾ ಮಂಟಪದ ಚಾವಣಿ ಕುಸಿತ : ಐವರು ಸಾವು, 20ಕ್ಕೂ ಹೆಚ್ಚು ಭಕ್ತರಿಗೆ ಗಾಯ ಇಂದು ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಸ್ವೀಕಾರ