Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆಜಿ, ಯುಕೆಜಿ ಪ್ರಾರಂಭಿಸಲು ಸಿಎಂ ಸೂಚನೆ : ಸಚಿವೆ ಹೆಬ್ಬಾಳ್ಕರ್ 

Advertisement
ಬೆಂಗಳೂರು : ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಇನ್ನುಳಿದಂತೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿಯನ್ನು ರಚಿಸಲು ಸಿಎಂ ಸೂಚಿಸಿದ್ದಾರೆ ಎಂದು ಸಚಿವರು ಹೇಳಿದರು.

ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ತೀರ್ಮಾನಿಸಲಾಗಿದ್ದು, ಗುಣಮಟ್ಟದ ಶಿಕ್ಷಣ ಹಾಗೂ ಪೌಷ್ಠಿಕ ಆಹಾರ ನೀಡುವುದೇ ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿಯವರು ಸಹಮತ ವ್ಯಕ್ತಪಡಿಸಿದ್ದಾರೆ.

ಮಕ್ಕಳಿಗೆ ಇಲಾಖೆಯ ಮೂಲಕವೇ ಸಮವಸ್ತ್ರ, ಪುಸ್ತಕ, ಬ್ಯಾಗ್ ನೀಡಲು ತೀರ್ಮಾನಿಸಲಾಗಿದೆ. ಜೊತೆಗೆ ಶಾಲೆಗಳ ಮಾದರಿಯಲ್ಲೆ ವರ್ಗಾವಣೆ ಪತ್ರ (ಟಿಸಿ) ನೀಡಲು ಕ್ರಮವಹಿಸಲಾಗುವುದು.

ಮುಖ್ಯಮಂತ್ರಿಗಳೊಂದಿಗೆ ನಡೆದ ಸಭೆಯಲ್ಲಿ ಶಾಲಾ ಮತ್ತು ಪ್ರಾಥಮಿಕ ಶಿಕ್ಷಣದ ಸಚಿವ ಮಧು ಬಂಗಾರಪ್ಪ‌, ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

 

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್