LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಮಹದಾಯಿ ಯೋಜನೆಗೆ ಅನುಮತಿ ಇಲ್ಲವೆಂದ ಕೇಂದ್ರ : ರಾಜ್ಯದ ಜನತೆಗೆ ಬಗೆಯುವ ದ್ರೋಹವೆಂದ ಸಿಎಂ

Advertisement

ಬೆಂಗಳೂರು: ಮಹದಾಯಿ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂಬ ಕೇಂದ್ರ ಸರ್ಕಾರದ ನಿರ್ಧಾರ ಕರ್ನಾಟಕದ ಜನತೆಗೆ ಬಗೆಯುವ ದ್ರೋಹವಾಗಿದ್ದು, ಇದನ್ನು ಕರ್ನಾಟಕ ಸರ್ಕಾರ ಅತ್ಯುಗ್ರವಾಗಿ ಖಂಡಿಸುವುದು ಮಾತ್ರವಲ್ಲ ಈ ಅನ್ಯಾಯದ ವಿರುದ್ಧ ಸಮಸ್ತ ಕನ್ನಡಿಗರೊಂದಿಗೆ ಹೋರಾಟ ನಡೆಸಲಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.


ಮಹದಾಯಿ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂದು ಕೇಂದ್ರ ಪರಿಸರ ಮತ್ತು ಅರಣ್ಯ ಖಾತೆ ಸಚಿವ ಭೂಪೇಂದ್ರ ಯಾದವ್‍ ಅವರೇ ನನಗೆ ತಿಳಿಸಿದ್ದಾರೆ ಎಂದು ಸಾವಂತ್ ಅವರು ಇಂದು ವಿಧಾನಸಭೆಯಲ್ಲಿ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಈ ನಿರ್ಧಾರ ಕರ್ನಾಟಕದ ಹಿತಾಸಕ್ತಿ ಮೇಲಿನ ಇನ್ನೊಂದು ಪ್ರಹಾರವಾಗಿದೆ. 2018ರಲ್ಲಿ ಮಹದಾಯಿ ಜಲವಿವಾದ ನ್ಯಾಯಮಂಡಳಿ 13.42 ಟಿಎಂಸಿ ನೀರನ್ನು ನಮ್ಮ ರಾಜ್ಯಕ್ಕೆ ನಿಗದಿಪಡಿಸಿ ಐತೀರ್ಪು ನೀಡಿದ್ದರೂ ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯಿಂದಾಗಿ ಯೋಜನೆಯ ಅನುಷ್ಠಾನ ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಗದಗ, ಬಾಗಲಕೋಟೆ ಪ್ರದೇಶದ ಜನತೆಯ ಕುಡಿಯುವ ನೀರಿಗಾಗಿ 40 ಟಿಎಂಸಿ ನೀರನ್ನು ಬಳಸಿಕೊಳ್ಳುವ ಕಳಸಾ-ಬಂಡೂರಿ ಯೋಜನೆ ಈಗಾಗಲೇ ಅನುಷ್ಠಾನಕ್ಕೆ ಸಿದ್ದಗೊಂಡಿದ್ದು, ಗೋವಾದ ಬಿಜೆಪಿ ಸರ್ಕಾರದ ಜೊತೆ ಷಾಮೀಲಾಗಿ ಕೇಂದ್ರ ಸರ್ಕಾರ ನಿರಂತರವಾಗಿ ಅಡ್ಡಗಾಲು ಹಾಕುತ್ತಿದೆ ಎಂದು ದೂರಿದ್ದಾರೆ.

ರಾಜ್ಯದ ಬಿಜೆಪಿ ನಾಯಕರಾಗಲಿ, ಕನ್ನಡಿಗರಿಂದಲೇ ಆರಿಸಿ ಹೋಗಿರುವ ಬಿಜೆಪಿ ಮತ್ತು ಜೆಡಿಎಸ್ ಸಂಸದರಾಗಲಿ ಈ ಅನ್ಯಾಯದ ವಿರುದ್ಧ ದನಿ ಎತ್ತಲಾಗದಷ್ಟು ನಿರ್ವಿರ್ಯರಾಗಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ತಿರಸ್ಕರಿಸಿದ ಕರ್ನಾಟಕದ ಜನತೆಯ ವಿರುದ್ಧ ಸೇಡು ತೀರಿಸಿಕೊಳ್ಳುವ ದುರುದ್ದೇಶದಿಂದಲೇ ಮಹದಾಯಿ ಯೋಜನೆಗೆ ಪರಿಸರ ಖಾತೆಯ ಅನುಮತಿಯನ್ನು ನಿರಾಕರಿಸಿರುವುದು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.

ತೆರಿಗೆ ಹಂಚಿಕೆ, ಕೇಂದ್ರ ಪ್ರಾಯೋಜಿತ ಯೋಜನೆಗಳಲ್ಲಿ ಅನುದಾನ ಕಡಿತವೂ ಸೇರಿದಂತೆ ನೆಲ-ಜಲ-ಭಾಷೆಯ ವಿಚಾರದಲ್ಲಿ ಕೇಂದ್ರ ಸರ್ಕಾರ ಕರ್ನಾಟಕದ ವಿಚಾರದಲ್ಲಿ ನಿರಂತರವಾಗಿ ಅನ್ಯಾಯ ಎಸಗುತ್ತಿದೆ. ಕೇಂದ್ರ ಸರ್ಕಾರದ ಈ ಮಲತಾಯಿ ಧೋರಣೆ ವಿರುದ್ಧ ನಾಡಿನ ಸಮಸ್ತ ಕನ್ನಡಿಗರನ್ನು ಜೊತೆಯಲ್ಲಿ ಕಟ್ಟಿಕೊಂಡು ಹೋರಾಟ ನಡೆಸುತ್ತೇವೆ ಎಂದು ಸಿಎಂ ತಿಳಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐರ್ಯಲೆಂಡ್‌ಗೆ ೩೦೦ ರನ್‌ಗಳ ಗೆಲುವಿನ ಗುರಿಶ್ರೀಲಂಕಾ ಇಲೆವೆನ್ ಉತ್ತಮ ಮೊತ್ತಕಳಸಕೊಪ್ಪ ಸೇರಿದಂತೆ 8 ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮ: ಜೆ ಟಿ ಪಾಟೀಲಹೆಚ್ಚಿನ ಬಡ್ಡಿ ಆಮಿಷವೊಡ್ಡಿ ಕೋಟಿ ಕೋಟಿ ಹಣ ವಂಚನೆ ಕೇಸ್ : ಶಿವಾನಂದ ನೀಲಣ್ಣವರ ಇಡಿ ರೇಡ್ಹಾಡ ಹಾಗಲೇ ಗುಂಡಿಕ್ಕಿ ಕಾಂಗ್ರೆಸ್ ಮುಖಂಡ ಬರ್ಬರ ಹತ್ಯೆ ಆಗಸ್ಟ್ 15ವರೆಗೆ ಖಾತೆ ಹಂಚಿಕೆಗೆ ಕಾಲಾವಕಾಶ ಇದೆ : ಡಿ.ಕೆ.ಶಿವಕುಮಾರ್ಆಗಸ್ಟ್ 13 ರಂದು ಅಧಿವೇಶನ,14 ರಂದು ನೂತನ ಉಪಸಭಾಪತಿಗಳ ಆಯ್ಕೆ : ಡಿ.ಕೆ.ಶಿವಕುಮಾರ್ಹುತಾತ್ಮ ಯೋಧ ಅಂಗಡಿ ಮಂಜುನಾಥ ನಾಯಕ ಸಾದಾಪುರ ಪುಣ್ಯ ಸ್ಮರಣೆ​ಶ್ರೀ ಕ್ಷೇತ್ರ ಪರಕನಹಟ್ಟಿಯಿಂದ ಹುಬ್ಬಳ್ಳಿಗೆ ಪ್ರಥಮ ವರ್ಷದ ಸಿದ್ಧಾರೂಢ ಪಾದಯಾತ್ರೆ: ಭಕ್ತಿಪರವಶತೆಯಿಂದ ಚಾಲನೆಶ್ರೀ ಮಹರ್ಷಿ ವಾಲ್ಮೀಕಿ ವೃತ್ತ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ  : ಶಾಸಕ ಜಿ.ಹಂಪಯ್ಯ ನಾಯಕ ಸಾಹುಕಾರ