Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮಯ್ಯನವರನ್ನೇ ಸಿಎಂ ಮಾಡಿ ಅಂದಿದ್ದು ನಾನೇ : ವೀರಪ್ಪ ಮೊಯ್ಲಿ 

Advertisement
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್‌ ಪರ ಮತ್ತೆ ಬ್ಯಾಟ್‌ ಬೀಸಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನೇ ಸಿಎಂ ಮಾಡಿ ಅಂದಿದ್ದು ನಾನೇ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

2024ರ ಲೋಕಸಭಾ ಚುನಾವಣೆಯ ಟಿಕೆಟ್‌ ವಿಚಾರವಾಗಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ಕೇಂದ್ರ ಚುನಾವಣೆ ಸಮಿತಿಯು ಟಿಕೆಟ್‌ ಕೊಡೋದು.ನನಗೆ ಟಿಕೆಟ್ ಕೊಡಿ ಅಂತ ಸಿದ್ದರಾಮಯ್ಯ ಮುಂದೆ ಕೈ ಚಾಚಿಲ್ಲ. ಆ ದುಸ್ಥಿತಿ ನನಗೆ ಬರಬಾರದು.

ಯಾರೋ ಕಿಡಿಗೇಡಿಗಳು ನನ್ನನ್ನು ಎಂಎಲ್‌ಸಿ ಮಾಡಲಿಲ್ಲ ಅಂತ ಹೇಳಬಹುದು. ಸಿದ್ದರಾಮಯ್ಯ ನನಗೆ ಟೂ ಜೂನಿಯರ್, ನಾನು ಸಚಿವನಾಗಿದ್ದಾಗ ಅವರು ಏನೇನೂ ಅಲ್ಲ. ಹೀಗಿರುವಾಗ ನಾನು ಯಾಕೆ ಅವರ ಬಳಿ ಹೋಗಿ ಟಿಕೆಟ್ ಕೇಳಲಿ ಎಂದಿದ್ದಾರೆ.

ಒಂದು ವೇಳೆ ಅಂದು ನನಗೆ ಟಿಕೆಟ್ ಕೊಟ್ಟಿದ್ರೆ ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಿದ್ದೆ. ಅಷ್ಟರ ಮಟ್ಟಿಗೆ ನಾನು ಅಲ್ಲಿ ವರ್ಚಸ್ಸು ಬೆಳೆಸಿಕೊಂಡಿದ್ದೇನೆ. ನನಗೆ ಯಾರ ಮೇಲೂ ಹಗೆ ಇಲ್ಲ. 2013 ರ ಸರ್ಕಾರದಲ್ಲಿ ಇದೇ ಸಿದ್ದರಾಮಯ್ಯ ಬದಲಾವಣೆ ಅನ್ನೋ ಚರ್ಚೆಗಳು ಬಂದಾಗ ಮುಂದುವರಿಸಿ ಅಂದವನು ನಾನು.

ಈ ಸರ್ಕಾರದಲ್ಲೂ ಸಿದ್ದರಾಮಯ್ಯನವರನ್ನೇ ಸಿಎಂ ಮಾಡಿ ಅಂದಿದ್ದು ನಾನೇ. ಅವರ ಪ್ರಭಾವದಿಂದ ಗಳಿಸಬೇಕಾದದ್ದು ಏನೂ ಇಲ್ಲ ಎಂದು ಮೊಯ್ಲಿ ವಾಗ್ದಾಳಿ ನಡೆಸಿದರು.

ಇದೇ ವೇಳೆ ಡಿಕೆಶಿಯನ್ನು ಹೊಗಳಿದ ಅವರು, ಡಿಕೆಶಿಗೆ ಸಿಎಂ ಆಗುವ ಎಲ್ಲಾ ಅರ್ಹತೆ ಇದೆ. ಕೆಪಿಸಿಸಿ ಅಧ್ಯಕ್ಷರಾಗಿ ಸಮರ್ಥವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್