Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಿಡಗುಂದಿ ಶಾಲಾ ಆವರಣಕ್ಕೆ ಬಂದ ನಾಗರಹಾವು: ಉರಗ ರಕ್ಷಕ ರವಿ ಮಾದರರಿಂದ ಸುರಕ್ಷಿತ ರಕ್ಷಣೆ

Advertisement

ನಿಡಗುಂದಿ: ತಾಲೂಕಿನ ಕಮದಾಳ ಪ್ರೌಢಶಾಲೆಯ ಆವರಣದಲ್ಲಿ ನಾಗರಹಾವೊಂದು ಕಾಣಿಸಿಕೊಂಡು  ಘಟನೆ ನಡೆದಿದೆ.
ಶಾಲಾ ಸಮಯ ಮುಗಿದು ವಿದ್ಯಾರ್ಥಿಗಳು ಮನೆಗಳಿಗೆ ತೆರಳಿದ ಬಳಿಕ ಶಾಲೆಯ ಮೈದಾನದಲ್ಲಿ ಹೆಡೆಯೆತ್ತಿ ನಿಂತಿದ್ದ ನಾಗರಹಾವನ್ನು ಸ್ಥಳೀಯರು ಗಮನಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಉರಗ ರಕ್ಷಕ ರವಿ ಯಮನಪ್ಪ ಮಾದರ ಸ್ಥಳಕ್ಕೆ ಧಾವಿಸಿ ಅತ್ಯಂತ ಜಾಗರೂಕತೆಯಿಂದ ಹಾವನ್ನು ಹಿಡಿದಿದ್ದಾರೆ.

ಪ್ರಸ್ತುತ ಶಾಲೆಗಳು ಆರಂಭಗೊಂಡಿದ್ದು, ಮಕ್ಕಳು ಶಾಲೆಗೆ ಆಗಮಿಸುತ್ತಿರುವ ಸಮಯದಲ್ಲಿ ಈ ಘಟನೆ ನಡೆದಿರುವುದು ಆತಂಕಕ್ಕೆ ಕಾರಣವಾಗಿತ್ತು. ಅದೃಷ್ಟವಶಾತ್ ಘಟನೆ ಸಂಭವಿಸಿದ ವೇಳೆ ಯಾವುದೇ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ಇರಲಿಲ್ಲ. ಹಾವನ್ನು ಸುರಕ್ಷಿತವಾಗಿ ರಕ್ಷಿಸಿದ ರವಿ ಮಾದರ ಅವರು ಬಳಿಕ ಅದನ್ನು ಅರಣ್ಯ ಪ್ರದೇಶದಲ್ಲಿ ಬಿಟ್ಟಿದ್ದಾರೆ. ಜನವಸತಿ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುವ ಹಾವುಗಳನ್ನು ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ಬಿಡುವ ಕಾರ್ಯವನ್ನು ಅವರು ಹಲವು ವರ್ಷಗಳಿಂದ ಮಾಡುತ್ತಿದ್ದು, ಅವರ ಸೇವೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಸ್ಥಳೀಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ರವಿ ಮಾದರ ಅವರ ಕಾರ್ಯವನ್ನು ಶ್ಲಾಘಿಸಿದ್ದು, ಪರಿಸರ ಹಾಗೂ ವನ್ಯಜೀವಿ ಸಂರಕ್ಷಣೆಗೆ ಅವರ ಕೊಡುಗೆ ಶ್ಲಾಘನೀಯವಾಗಿದೆ.

 

 

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಂಪೂರ್ಣ ಮೌನಕ್ಕೆ ಶರಣಾದ ನಟ ದರ್ಶನ್, ಇತ್ತ ಆತ್ಮಚರಿತ್ರೆ ಬರೆಯುತ್ತಿರುವ ಪವಿತ್ರಾ ಗೌಡ ತೆಂಗಿನಕಾಯಿ ತಲೆಯ ಮೇಲೆ ಬಿದ್ದು ಬಾಲಕ ಸಾವು ನಿಡಗುಂದಿ ಶಾಲಾ ಆವರಣಕ್ಕೆ ಬಂದ ನಾಗರಹಾವು: ಉರಗ ರಕ್ಷಕ ರವಿ ಮಾದರರಿಂದ ಸುರಕ್ಷಿತ ರಕ್ಷಣೆರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ  ಕರವೇ ರಾಜ್ಯಾಧ್ಯಕ್ಷರಾದ ನಾರಾಯಣ ಗೌಡರ ಹುಟ್ಟು ಹಬ್ಬದ ನಿಮಿತ್ತವಾಗಿ ಹಣ್ಣು ವಿತರಣೆ ಕರವೇ ರಾಜ್ಯಾಧ್ಯಕ್ಷರಾದ ನಾರಾಯಣ ಗೌಡರ ಹುಟ್ಟು ಹಬ್ಬದ ನಿಮಿತ್ತವಾಗಿ ಹಣ್ಣು ವಿತರಣೆಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ : 1 ಲಕ್ಷ 12 ಸಾವಿರಕ್ಕೂ ಅಧಿಕ ಅನರ್ಹರು ಪತ್ತೆಸರ್ಕಾರಿ ನೌಕರನ ವೈಯಕ್ತಿಕ ಮಾಹಿತಿಯನ್ನು RTI ಅಡಿ ಬಹಿರಂಗಪಡಿಸಲು ಸಾಧ್ಯವಿಲ್ಲ : ಹೈಕೋರ್ಟ್ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ ಜೈಲು ಪಾಲಾಗಿ ಇಂದಿಗೆ ಎರಡು ವರ್ಷ ದೀರ್ಘಕಾಲದ ಚುನಾಯಿತ ಪ್ರಧಾನಿಯಾಗಿ ದಾಖಲೆ : ಸಂಪುಟ ಸಭೆಯಲ್ಲಿ ಎದ್ದು ನಿಂತ ಗೌರವ