Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ ಎಫೆಕ್ಟ್ : ದೆಹಲಿಯ 16 ಮೆಟ್ರೋ ನಿಲ್ದಾಣಗಳು ಬಂದ್

Advertisement

ನವದೆಹಲಿ : ಭದ್ರತಾ ಕಾರಣಗಳಿಂದಾಗಿ ರಾಜೀವ್ ಚೌಕ್, ಸೆಂಟ್ರಲ್ ಸೆಕ್ರೆಟೇರಿಯಟ್, ಮಂಡಿ ಹೌಸ್, ಐಟಿಒ, ಖಾನ್ ಮಾರ್ಕೆಟ್ ಸೇರಿದಂತೆ ಒಟ್ಟು 16 ಮೆಟ್ರೋ ನಿಲ್ದಾಣಗಳನ್ನು ಗುರುವಾರ ಬೆಳಿಗ್ಗೆ ತಾತ್ಕಾಲಿಕವಾಗಿ ಮುಚ್ಚಲಾಗಿದೆ ಎಂದು ದೆಹಲಿ ಮೆಟ್ರೋ ರೈಲು ನಿಗಮ (DMRC) ತಿಳಿಸಿದೆ.

 ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಪ್ರತಿಭಟನೆ ಹಿನ್ನೆಲೆಯಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಿರುವ ದೆಹಲಿ ಮೆಟ್ರೋ ರೈಲು ನಿಗಮ (DMRC), ರಾಜೀವ್ ಚೌಕ್, ಸೆಂಟ್ರಲ್ ಸೆಕ್ರೆಟೇರಿಯಟ್, ಮಂಡಿ ಹೌಸ್ ಸೇರಿದಂತೆ ಒಟ್ಟು 16 ಮೆಟ್ರೋ ನಿಲ್ದಾಣಗಳನ್ನು ಗುರುವಾರ ಬೆಳಿಗ್ಗೆ ತಾತ್ಕಾಲಿಕವಾಗಿ ಮುಚ್ಚಿದೆ. ಆದರೆ ಪ್ರಮುಖ ಮೂರು ನಿಲ್ದಾಣಗಳಲ್ಲಿ ಇಂಟರ್‌ಚೇಂಜ್ ಸೇವೆ ಎಂದಿನಂತೆ ಮುಂದುವರಿಯಲಿದೆ ಎಂದು ಡಿಎಂಆರ್‌ಸಿ ತಿಳಿಸಿದೆ.

ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ ಪ್ರತಿಭಟನೆಗೆ ಭಾರೀ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಆದರೆ ರಾಜೀವ್ ಚೌಕ್, ಮಂಡಿ ಹೌಸ್ ಹಾಗೂ ಸೆಂಟ್ರಲ್ ಸೆಕ್ರೆಟೇರಿಯಟ್ ಮೆಟ್ರೋ ನಿಲ್ದಾಣಗಳಲ್ಲಿ ಇಂಟರ್‌ಚೇಂಜ್ (ಮಾರ್ಗ ಬದಲಾವಣೆ) ಸೇವೆ ಎಂದಿನಂತೆ ಲಭ್ಯವಿರಲಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ತಾತ್ಕಾಲಿಕವಾಗಿ ಮುಚ್ಚಲಾದ ಇತರೆ ಮೆಟ್ರೋ ನಿಲ್ದಾಣಗಳ ಪಟ್ಟಿಯಲ್ಲಿ ಲೋಕ್ ಕಲ್ಯಾಣ್ ಮಾರ್ಗ್, ಪಟೇಲ್ ಚೌಕ್, ರಾಮಕೃಷ್ಣ ಆಶ್ರಮ ಮಾರ್ಗ್, ಬರಾಖಂಬಾ ರಸ್ತೆ, ಸುಪ್ರೀಂ ಕೋರ್ಟ್, ಸೇವಾ ತೀರ್ಥ್, ಜನಪಥ್, ದೆಹಲಿ ಗೇಟ್, ಇಂದ್ರಪ್ರಸ್ಥ, ಜೋರ್ ಬಾಗ್ ಹಾಗೂ ಶಿವಾಜಿ ಸ್ಟೇಡಿಯಂ ಸೇರಿವೆ. ಈ ಕುರಿತು ಡಿಎಂಆರ್‌ಸಿ ತನ್ನ ಅಧಿಕೃತ ‘ಎಕ್ಸ್’ (ಹಿಂದಿನ ಟ್ವಿಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST