Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸವಿನೆನಪು

Advertisement
ಸುವರ್ಣ ವಿಧಾನಸೌಧ ಆವರಣದಲ್ಲಿ ಜ.21 ರಂದು ಮಹಾತ್ಮಾ ಗಾಂಧೀಜಿ ಪ್ರತಿಮೆ ಅನಾವರಣ

ಬೆಳಗಾವಿ : ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧೀವೇಶನದ ಶತಮಾನೋತ್ಸವದ ಸವಿನೆನಪಿಗಾಗಿ‌ ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಮಹಾತ್ಮಾ ಗಾಂಧೀಜಿಯವರ ಬೃಹತ್ ಪ್ರತಿಮೆಯನ್ನು ಮಂಗಳವಾರ (ಜ.21) ಬೆಳಿಗ್ಗೆ 10.30 ಗಂಟೆಗೆ ಅನಾವರಣಗೊಳಿಸಲಾಗುತ್ತಿದೆ.

ಬೆಳಗಾವಿಯ ಸುವರ್ಣ ವಿಧಾನಸೌಧದ ಉತ್ತರ‌ ಪ್ರವೇಶ ದ್ವಾರದ ಎದುರಿನಲ್ಲಿ ಮಹಾತ್ಮಾ ಗಾಂಧೀಜಿಯವರ ಪ್ರತಿಮೆಯನ್ನು ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಅನಾವರಣಗೊಳಿಸಲಿದ್ದಾರೆ.

ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಕಾರ್ಯಕ್ರಮದ‌ ಘನ ಉಪಸ್ಥಿತಿ‌ ವಹಿಸುವರು. ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಕಾರ್ಯಕ್ರಮದ‌ ಅಧ್ಯಕ್ಷತೆ ವಹಿಸುವರು.

ಕಾರ್ಯಕ್ರಮದ‌ ಮುಖ್ಯ ಅತಿಥಿಗಳಾಗಿ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್,
ಕರ್ನಾಟಕ ವಿಧಾನ‌ಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಪಾಲ್ಗೊಳ್ಳುವರು.

ಪ್ರವಾಸೋದ್ಯಮ ಇಲಾಖೆ ಸಚಿವರಾದ ಎಚ್.ಕೆ.ಪಾಟೀಲ, ಲೊಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ, ಕರ್ನಾಟಕ ವಿಧಾನ ಸಭೆ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ , ಕರ್ನಾಟಕ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಚಲವಾಧಿ ನಾರಾಯಣಸ್ವಾಮಿ, ಸಂಸದರಾದ ಜಗದೀಶ ಶೆಟ್ಟರ್, ವಿಶ್ವೇಶ್ವರ ಹೆಗಡೆ ಕಾಗೇರಿ, ಪ್ರಿಯಾಂಕಾ ಜಾರಕಿಹೊಳಿ ಗೌರವಾನ್ವಿತ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.

ಎಲ್ಲ ಸಂಸದರು, ಶಾಸಕರುಗಳು, ಸ್ವಾತಂತ್ರ್ಯ ಯೋಧರು ಹಾಗೂ ಅವರ‌ ಕುಟುಂಬಸ್ಥರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಗಾಂಧಿ ಭಾರತ ಪುಸ್ತಕ ಬಿಡುಗಡೆ:

ಇದೇ‌ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಪ್ರಕಟಿತ 1924 ರ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದ ಮಹಾತ್ಮಾ ಗಾಂಧೀಜಿಯವರು ಮಾಡಿದ ಭಾಷಣ ಮತ್ತು ನಿರ್ಣಯಗಳಿಂದ ಕೂಡಿದ ಕನ್ನಡ‌ ಹಾಗೂ ಆಂಗ್ಲ‌ ಭಾಷೆಯ "ಗಾಂಧಿ ಭಾರತ-ಮರುನಿರ್ಮಾಣ" ಪುಸ್ತಗಳನ್ನು ಗಣ್ಯರು ಬಿಡುಗಡೆಗೊಳಿಸಲಿದ್ದಾರೆ.

ಮಹಾತ್ಮಾ ಗಾಂಧೀಜಿ ಬೃಹತ ಪ್ರತಿಮೆಯ ವಿವರ:

ಬೆಳಗಾವಿಯ ಸುವರ್ಣ ವಿಧಾನಸೌಧದ ಉತ್ತರ ಪ್ರವೇಶ ದ್ವಾರದ ಬಳಿ ನಿರ್ಮಿಸಲಾದ ಮಹಾತ್ಮಾ ಗಾಂಧೀಜಿಯವರ ಪ್ರತಿಮೆಯು 25 ಅಡಿ ಎತ್ತರ ಮತ್ತು 20 ಟನ್ ತೂಕ ಹೊಂದಿರುತ್ತದೆ.

ಗಾಂಧೀಜಿಯವರ ಪ್ರತಿಮೆಯು ಒಟ್ಟು 4.83 ಕೋಟಿ ರೂಪಾಯಿ ವೆಚ್ಚದಲ್ಲಿ ಪಂಚಲೋಹದಿಂದ ನಿರ್ಮಾಣಗೊಂಡಿರುತ್ತದೆ.
ಮೈಸೂರಿನ ಕಲಾವಿದರಾದ ಅರುಣ ಯೋಗಿರಾಜ ಅವರು ಮಹಾತ್ಮಾ ಗಾಂಧೀಜಿಯವರ ಪ್ರತಿಮೆಯನ್ನು ನಿರ್ಮಿಸಿರುತ್ತಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ