ಹುಬ್ಬಳ್ಳಿ:ಉತ್ತರ ಕರ್ನಾಟಕದ ಪ್ರತಿಭಾವಂತ ಬಡವಿದ್ಯಾರ್ಥಿಗಳಿಗೆ ಐಎಎಸ್, ಕೆಎಎಸ್, ಐಪಿಎಸ್, ಯು.ಪಿ.ಎಸ್.ಸಿ, ಬ್ಯಾಂಕಿಂಗ್ ಸೇರಿದಂತೆ ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗೆ ಗುಣಮಟ್ಟದ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆಗೆ ಚಿಂತನೆ ನಡೆಸಲಾಗಿದೆ. ಬಡ ವಿದ್ಯಾರ್ಥಿಗಳಿಗೆ ವಾರ್ಷಿಕ ಒಂದೇ ರೂಪಾಯಿ ಶುಲ್ಕದಲ್ಲಿ ತರಬೇತಿ ನೀಡಲಾಗುತ್ತದೆ ಎಂದು ಕನ್ನೇರಿ ಮಠದ ಶ್ರೀ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ಹೇಳಿದರು.
ಹುಬ್ಬಳ್ಳಿಯಲ್ಲಿಂದು ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಾಕಷ್ಟು ಪ್ರತಿಭೆಗಳು ಪೂರಕ ತರಬೇತಿ ಪಡೆಯಲು ಆರ್ಥಿಕ ಸ್ಥಿತಿ ಅಡ್ಡ ಬರುತ್ತಿದೆ. ಈ ನಿಟ್ಟಿನಲ್ಲಿ ಸುಮಾರು ಎರಡು ಸಾವಿರ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡುವ ವಿಶೇಷ ಮಾದರಿ ಕೋಚಿಂಗ್ ಸೆಂಟರ್ ಆರಂಭಿಸುವ ಬಗ್ಗೆ ಯೋಜನೆ ಸಿದ್ಧಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ವರದಿ:ಸುಧೀರ್ ಕುಲಕರ್ಣಿ


