LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವೆಂಕಟೇಶ್ವರ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕಾರ್ಯಗಾರ

Advertisement

ಮಾನ್ವಿ : ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ನಿರಂತರ ಅಭ್ಯಾಸ, ಸಾಮಾನ್ಯ ಜ್ಞಾನ ಹಾಗೂ ವಿಷಯಗಳ ಆಳವಾದ ಅಧ್ಯಯನ ಅತ್ಯಗತ್ಯ ಎಂದು ಸ್ಪರ್ಧಾತ್ಮಕ ಪರೀಕ್ಷಾ ತರಬೇತುದಾರ ಬಸವರಾಜ ದೇವಿಪುರ ವಿದ್ಯಾರ್ಥಿಗಳಿಗೆ ತಿಳಿಸಿದರು.

ಪಟ್ಟಣದ ಶ್ರೀ ವೆಂಕಟೇಶ್ವರ ಪದವಿ ಮಹಾವಿದ್ಯಾಲಯದಲ್ಲಿ, ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಹಾಗೂ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಬಸವರಾಜ ದೇವಿಪುರ, ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾದಂತೆ ಉದ್ಯೋಗಕ್ಕಾಗಿ ಸ್ಪರ್ಧೆಯೂ ಹೆಚ್ಚುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಕಠಿಣವಾಗಿರುವುದರಿಂದ ವಿದ್ಯಾರ್ಥಿಗಳು ಯೋಜಿತ ರೀತಿಯಲ್ಲಿ ಸಿದ್ಧತೆ ನಡೆಸಬೇಕು. ವಿಜ್ಞಾನ ಮತ್ತು ತಂತ್ರಜ್ಞಾನ, ಭೂಗೋಳಶಾಸ್ತ್ರ, ಇತಿಹಾಸ, ಭಾರತೀಯ ಸಂವಿಧಾನ ಹಾಗೂ ಪ್ರಚಲಿತ ಘಟನೆಗಳ ಬಗ್ಗೆ ಸಮಗ್ರ ಅರಿವು ಬೆಳೆಸಿಕೊಂಡು ನಿರಂತರ ಅಭ್ಯಾಸ ಮಾಡಿದರೆ ಉತ್ತಮ ಸಾಧನೆ ಸಾಧ್ಯ ಎಂದು ಹೇಳಿದರು.

ಕಾರ್ಯಾಗಾರದಲ್ಲಿ ವಿವಿಧ ವಿಷಯಗಳ ಕುರಿತು ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗಿದ್ದು, ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸಿ ಮಾಹಿತಿ ಪಡೆದುಕೊಂಡರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಆಂಜನೇಯ ನಸಲಾಪುರ ಮಾತನಾಡಿ, ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸ್ಪರ್ಧಾತ್ಮಕ ಪರೀಕ್ಷಾ ಸಿದ್ಧತೆಯನ್ನು ಬಲಪಡಿಸುವ ಉದ್ದೇಶದಿಂದ ಎರಡು ದಿನಗಳ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸುವಂತಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಉಪನ್ಯಾಸಕರಾದ ಶರಣಬಸವ ಕರಡಿಗುಡ್ಡ, ಬಂದೇನವಾಜ್, ಅಂಬಣ್ಣ ನಾಯಕ, ಉಮಳಿ ಹೊಸೂರು, ರೇಣುಕಾ, ಆಫ್ರಿನಾ ಬೇಗಂ, ಸಂತೋಷ ಕುಮಾರ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST