Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

10 ಕೋಟಿ ರೂ. ವಂಚನೆ ಆರೋಪ : ಗಾಯಕಿ ಮಂಗ್ಲಿ ಸೇರಿ ಐವರು ವಿರುದ್ಧ ದೂರು

Advertisement
ಹೈದರಾಬಾದ್: ಜನಪ್ರಿಯ ಗಾಯಕಿ ಮಂಗ್ಲಿ ಅಲಿಯಾಸ್ ಸತ್ಯವತಿ ಅವರಿಗೆ ಸಂಕಷ್ಟ ಎದುರಾಗಿದೆ. ವ್ಯವಹಾರದಲ್ಲಿ ಹೂಡಿಕೆ ಮಾಡುವ ಹೆಸರಿನಲ್ಲಿ ಸುಮಾರು 10 ಕೋಟಿ ರೂಪಾಯಿ ವಂಚಿಸಿದ್ದಾರೆ ಎಂಬ ಆರೋಪದ ಮೇಲೆ ಪಂಜಾಗುಟ್ಟಾ ಪೊಲೀಸರು ಮಂಗ್ಲಿ, ಅವರ ಸಹೋದರ ಶಿವ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಮೈಕ್ರೋ ಫೈನಾನ್ಸ್ ಮತ್ತು ವಿವಿಧ ವ್ಯವಹಾರಗಳಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿ ಸುಮಾರು 100ಕ್ಕೂ ಹೆಚ್ಚು ಮಂದಿಯಿಂದ 10 ಕೋಟಿ ರೂಪಾಯಿಗೂ ಅಧಿಕ ಹಣ ವಸೂಲಿ ಮಾಡಿ ವಂಚಿಸಲಾಗಿದೆ ಎಂಬುದು ಪ್ರಮುಖ ಆರೋಪವಾಗಿದೆ. ಹಣ ನೀಡಿ ವರ್ಷಗಳೇ ಕಳೆದರೂ ಲಾಭ ನೀಡಿಲ್ಲ, ಕನಿಷ್ಠ ಹೂಡಿಕೆ ಮಾಡಿದ ಅಸಲು ಹಣವನ್ನೂ ಹಿಂತಿರುಗಿಸಿಲ್ಲ ಎಂದು ಸಂತ್ರಸ್ತರು ಆಕ್ರೋಶ ಹೊರಹಾಕಿದ್ದಾರೆ.


ಮಂಗ್ಲಿ ತಂಡದಿಂದ ಬೆದರಿಕೆ?


ಸಂತ್ರಸ್ತರ ಪರವಾಗಿ ಹಣ ಹಿಂತಿರುಗಿಸುವಂತೆ ಕೇಳಿದ ವಕೀಲ ಸುಬ್ಬಾರಾವ್ ಅವರಿಗೆ ಮಂಗ್ಲಿ ತಂಡವು ಬೆದರಿಕೆ ಹಾಕಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮಂಗ್ಲಿ, ಆಕೆಯ ಸಹೋದರ ಶಿವ ಮತ್ತು ಇತರರು ತನಗೆ ಫೋನ್ ಮಾಡಿ ತೀವ್ರವಾಗಿ ಎಚ್ಚರಿಕೆ ನೀಡಿದ್ದಾರೆ ಹಾಗೂ ರಸ್ತೆ ಅಪಘಾತದಲ್ಲಿ ನಿನ್ನನ್ನು ಕೊಲ್ಲುತ್ತೇವೆ ಎಂದು ಬೆದರಿಸಿದ್ದಾರೆ ಎಂದು ಸುಬ್ಬಾರಾವ್ ಪೊಲೀಸರಿಗೆ ತಿಳಿಸಿದ್ದಾರೆ. ಇವರಿಂದ ತನಗೆ ಪ್ರಾಣಾಪಾಯವಿದೆ ಎಂದು ಅವರು ದೂರಿನಲ್ಲಿ ವಿವರಿಸಿದ್ದಾರೆ.


ವಕೀಲರ ದೂರಿನ ಮೇರೆಗೆ ಪಂಜಾಗುಟ್ಟಾ ಪೊಲೀಸರು ಮಂಗ್ಲಿ (A5), ಶಿವ ಮತ್ತು ಇತರ ಮೂವರ ವಿರುದ್ಧ ಬಿಎನ್‌ಎಸ್ (BNS) ಸೆಕ್ಷನ್ 351(2) ಮತ್ತು 352 ರ ಅಡಿಯಲ್ಲಿ ಕೇಸ್ ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ನಿರ್ದೇಶಕ ವೇಣು ಉಡುಗುಲ ಅವರ ಹೆಸರೂ ಕೇಳಿಬರುತ್ತಿದ್ದು, ಪೊಲೀಸರು ಈ ವಂಚನೆಯ ಜಾಲದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.


ಡ್ರಗ್ಸ್ ಪಾರ್ಟಿ ವಿವಾದ


ಇತ್ತೀಚೆಗಷ್ಟೇ ಹೈದರಾಬಾದ್ ಸಮೀಪದ ಚೇವೆಳ್ಳಾದ ಖಾಸಗಿ ರೆಸಾರ್ಟ್‌ವೊಂದರಲ್ಲಿ ಮಂಗ್ಲಿ ತನ್ನ ಆಪ್ತರಿಗೆ ನೀಡಿದ್ದ ಜನ್ಮದಿನದ ಪಾರ್ಟಿ ಕೂಡ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಪೊಲೀಸರು ಈ ಪಾರ್ಟಿಯ ಮೇಲೆ ದಾಳಿ ನಡೆಸಿದಾಗ ವಿದೇಶಿ ಮದ್ಯ ಮತ್ತು ಗಾಂಜಾದಂತಹ ನಿಷೇಧಿತ ವಸ್ತುಗಳು ಪತ್ತೆಯಾಗಿದ್ದವು. ಪಾರ್ಟಿಯಲ್ಲಿದ್ದ ಕೆಲವರಿಗೆ ಡ್ರಗ್ಸ್ ಪರೀಕ್ಷೆ ನಡೆಸಿದಾಗ ಪಾಸಿಟಿವ್ ವರದಿ ಬಂದಿರುವುದು ಸಂಚಲನ ಮೂಡಿಸಿತ್ತು.


ಕಳೆದ ಕೆಲವು ಸಮಯದಿಂದ ಮಂಗ್ಲಿ ಹೆಸರು ಒಂದಲ್ಲ ಒಂದು ವಿವಾದದಲ್ಲಿ ಸಿಲುಕುತ್ತಿದೆ. ಒಂದು ಕಡೆ ಆರ್ಥಿಕ ವಂಚನೆಯ ಆರೋಪ, ಇನ್ನೊಂದೆಡೆ ಡ್ರಗ್ಸ್ ಪಾರ್ಟಿ ಪ್ರಕರಣಗಳು ಅವರ ವೃತ್ತಿಜೀವನದ ಮೇಲೆ ಕರಿನೆರಳು ಬೀರುವ ಸಾಧ್ಯತೆ ಇದೆ. ಗಾಯಕಿಯಾಗಿ ಉತ್ತಮ ಫಾರ್ಮ್‌ನಲ್ಲಿರುವಾಗ ಇಂತಹ ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುವುದು ಅವರ ಅಭಿಮಾನಿಗಳಿಗೆ ಆಘಾತ ತಂದಿದೆ. ಪೊಲೀಸರು ಮುಂದಿನ ದಿನಗಳಲ್ಲಿ ಯಾವ ರೀತಿಯ ಕ್ರಮ ಕೈಗೊಳ್ಳಲಿದ್ದಾರೆ ಎಂಬುದು ಈಗ ಕುತೂಹಲ ಮೂಡಿಸಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚೆನ್ನೆöÊ ಸೂಪರ್ ಕಿಂಗ್ಸ್ಗೆ ೨೩೦ ರನ್‌ಗಳ ಗೆಲುವಿನ ಗುರಿನಾಳೆ ಆರ್‌ಸಿಬಿ- ಎಸ್‌ಆರ್‌ಎಚ್ ಪಂದ್ಯಜೂನ್ ೧೧ ರಿಂದ ವಿಶ್ವಕಪ್ ಫುಟ್‌ಬಾಲ್ ಪಂದ್ಯಾವಳಿರಾಜ್ಯ ಜೆಡಿಎಸ್ ಹಿಂದುಳಿದ ವರ್ಗದ ರಾಜ್ಯಾಧ್ಯಕ್ಷರಾಗಿ ಶಿವಕುಮಾರ್ ನಾಟೀಕಾರ ನೇಮಕಒಂದನೇ ತರಗತಿ ದಾಖಲಾತಿಗೆ ವಯೋಮಿತಿ ಆದೇಶವ ಮರುಪರಿಶೀಲಿಸುವಂತೆ ಹೈಕೋರ್ಟ್ ತಾಕೀತು ಗುಜರಾತ್ ಟೈಟನ್ಸ್ಗೆ ಮೊದಲೆರಡು ಸ್ಥಾನದಲ್ಲೇ ಅಭಿಯಾನ ಮುಗಿಸುವ ಗುರಿಧರ್ಮಸ್ಥಳ ಗ್ರಾಮದ 'ಬುರುಡೆ ರಹಸ್ಯ : ಬಂಗ್ಲೆಗುಡ್ಡೆ ಅರಣ್ಯದಲ್ಲಿ SIT ತೀವ್ರ ತನಿಖೆ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಂದ 8,67,590/- ರೂ. ದಂಡ ವಸೂಲಿಅಪರಿಚಿತನಿಂದ ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ ಹಮ್ಜಾ ಬುರ್ಹಾನ್ ಹತ್ಯೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವುದಿಲ್ಲ : ಸಿದ್ದರಾಮಯ್ಯ