LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರಾಜ್ಯಾಧ್ಯಂತ 'ಹಾಫ್ ಹೆಲ್ಮೆಟ್‌'ಗೆ ಸಂಪೂರ್ಣ ನಿಷೇಧ: ಉಲ್ಲಂಘಿಸಿದರೇ ದಂಡ ಫಿಕ್ಸ್! 

Advertisement

ಬೆಂಗಳೂರು: ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸಲು ಹಾಗೂ ಅಪಘಾತದ ವೇಳೆ ಸಂಭವಿಸುವ ಪ್ರಾಣಾಪಾಯವನ್ನು ತಡೆಗಟ್ಟಲು ಕರ್ನಾಟಕ ಸಾರಿಗೆ ಇಲಾಖೆಯು ಹಾಫ್ ಹೆಲ್ಮೆಟ್‌ಗಳ (Half Helmets) ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ.

ಕೇವಲ ಹೆಸರಿಗಷ್ಟೇ ಎಂಬಂತೆ ಸಣ್ಣ ಹಾಫ್ ಹೆಲ್ಮೆಟ್‌ಗಳನ್ನು ಧರಿಸಿ ಸಂಚರಿಸುವುದನ್ನು ನಿಯಂತ್ರಿಸಲು ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಸವಾರರು ಕಡ್ಡಾಯವಾಗಿ ಬಿಐಎಸ್/ಐಎಸ್‌ಐ (BIS/ISI) ಗುಣಮಟ್ಟದ ಮಾನದಂಡ ಹೊಂದಿರುವ ಹೆಲ್ಮೆಟ್‌ಗಳನ್ನೇ ಧರಿಸಬೇಕು ಎಂದು ಸೂಚಿಸಲಾಗಿದೆ.

ಸವಾರರು ಮಾತ್ರವಲ್ಲದೆ, ಇಂತಹ ಕಳಪೆ ಗುಣಮಟ್ಟದ ಹಾಫ್ ಹೆಲ್ಮೆಟ್‌ಗಳನ್ನು ತಯಾರಿಸುವವರು ಹಾಗೂ ಮಾರಾಟ ಮಾಡುವ ಅಂಗಡಿ ಮಾಲೀಕರ ವಿರುದ್ಧವೂ ಕಾನೂನು ಕ್ರಮ ಜರುಗಿಸುವುದಾಗಿ ಇಲಾಖೆ ಎಚ್ಚರಿಕೆ ನೀಡಿದೆ.

ಹೆಲ್ಮೆಟ್ ರಹಿತ ಚಾಲನೆ ಹಾಗೂ ನಿಯಮ ಉಲ್ಲಂಘನೆಗೆ ದಂಡ ಎಷ್ಟು?

ರಾಜ್ಯದಲ್ಲಿ ಹೆಲ್ಮೆಟ್ ಧರಿಸದೆ ಅಥವಾ ಅಮಾನ್ಯವಾದ ಹಾಫ್ ಹೆಲ್ಮೆಟ್ ಧರಿಸಿ ಬೈಕ್ ಚಲಾಯಿಸಿದರೆ ಸವಾರರಿಗೆ 500 ರೂ. ದಂಡ ವಿಧಿಸಲಾಗುತ್ತದೆ. ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯವಾಗಿದ್ದು, ನಿಯಮ ಮೀರಿದರೆ ಅವರಿಗೂ ಇದೇ ದಂಡ ಅನ್ವಯವಾಗುತ್ತದೆ.

ಸತತವಾಗಿ ನಿಯಮ ಉಲ್ಲಂಘಿಸಿದಲ್ಲಿ ದಂಡದ ಮೊತ್ತ 1,000 ರೂ.ಗೆ ಏರಿಕೆಯಾಗುವುದರ ಜೊತೆಗೆ ಮೂರು ತಿಂಗಳ ಕಾಲ ಚಾಲನಾ ಪರವಾನಗಿ (ಡಿಎಲ್) ಅಮಾನತು ಮಾಡುವ ಅವಕಾಶವೂ ಕಾನೂನಿನಲ್ಲಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಧಾನಸಭೆ ಕಲಾಪದ ಅಣುಕು ಪ್ರದರ್ಶನ ಗಮನ ಸೆಳೆಯಲಿರುವ ವಿದ್ಯಾರ್ಥಿಗಳ ಯುವ ಸಂಸತ್ತುಜಿಪಂ ಚುನಾವಣೆ : 1129 ಜಿಲ್ಲಾ ಪಂಚಾಯತಿ ಸ್ಥಾನಗಳಿಗೆ ಮೀಸಲಾತಿ ಅಧಿಸೂಚನೆ ಪ್ರಕಟ ರಾಜ್ಯಾಧ್ಯಂತ 'ಹಾಫ್ ಹೆಲ್ಮೆಟ್‌'ಗೆ ಸಂಪೂರ್ಣ ನಿಷೇಧ: ಉಲ್ಲಂಘಿಸಿದರೇ ದಂಡ ಫಿಕ್ಸ್! ಮುಂದಿನ ವಾರ ಏಕದಿನ ತಂಡದ ಆಯ್ಕೆ ಸಾಧ್ಯತೆ ರಣಜಿ ತಂಡದಿಂದಲೂ ಸೂರ್ಯಕುಮಾರ್ ಗೆ ಕೊಕ್ ನಾಳೆ ಜಿಪಂ-ತಾಪಂ ಚುನಾವಣೆ ಮೀಸಲಾತಿಯ ಪ್ರಾಥಮಿಕ ಅಧಿಸೂಚನೆ ಬಿಡುಗಡೆ : ಈಶ್ವರ್‌ ಖಂಡ್ರೆ ಸ್ಟಿಂಗ್ ಏಜೆನ್ಸಿಗಳ ಬಗ್ಗೆ ಸಿಎಂ ಸ್ಪಷ್ಟನೆ ನೀಡಲಿ: ಬಿ.ವೈ ವಿಜಯೇಂದ್ರ ಸಚಿವರ ಮೇಲೆ 'ಖಾಸಗಿ ಸ್ಟಿಂಗ್ ಆಪರೇಷನ್' ಬಲೆ: ಕ್ಯಾಬಿನೆಟ್ ಸಭೆಯಲ್ಲಿ ಸಿಎಂ ಎಚ್ಚರಿಕೆದಸರಾ ಹಬ್ಬಕ್ಕೆ ಕರ್ನಾಟಕ ರಾಜ್ಯ ಸರ್ಕಾರ ಆತ್ಮೀಯವಾಗಿ ಶ್ರೀ ಶಿವಕುಮಾರ ಸ್ವಾಮೀಜಿ ಅವರನ್ನು ಆಮಂತ್ರಿಸಿದೆವಿದ್ಯಾರ್ಥಿಗಳು ಓದುವ ಮೂಲಕ ತಮ್ಮ ವ್ಯಕ್ತಿತ್ವವನ್ನು  ಬೆಳೆಸಿಕೊಳ್ಳಬೇಕು : ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಡಾ.ಜೀವನಸಾಬ ಬಿನ್ನಾಳ