Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿಯ ಆರು ಕಾರ್ಯಕರ್ತೆಯರಿಗೆ ಷರತ್ತುಬದ್ಧ ಜಾಮೀನು

Advertisement

ಬೆಳಗಾವಿ: ಕಾಂಗ್ರೆಸ್ ಪ್ರತಿಭಟನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣಕ್ಕೆ ಅಡ್ಡಿಪಡಿಸಿ ಕಪ್ಪುಬಟ್ಟೆ ಪ್ರದರ್ಶನ ಮಾಡಿದ ಬಿಜೆಪಿಯ ಆರು ಮಹಿಳಾ ಕಾರ್ಯಕರ್ತೆಯರ ವಿರುದ್ಧ ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಕಪ್ಪು ಬಟ್ಟೆ ಪ್ರದರ್ಶಿಸಿದ್ದು ಅಲ್ಲದೇ ಸಮಾವೇಶದ ವೇದಿಕೆಯತ್ತ ನುಗ್ಗಲು ಯತ್ನಿಸಿದ ಬಿಜೆಪಿಯ ಶಿಲ್ಪಾ ಕೇಕರೆ, ಪವಿತ್ರಾ ಹಿರೇಮಠ, ರೇಷ್ಮಾ ಬರಮೂಚೆ, ಮಂಜುಳಾ ಹಣ್ಣೀಕೇರಿ, ಅನ್ನಪೂರ್ಣಾ ಹವಳ ಮತ್ತು ಸುಮಿತ್ರಾ ಜಾಲಗಾರ ವಿರುದ್ಧ ಬಿಎನ್‌ಎಸ್ 189(1)(C), ಬಿಎನ್ಎಸ್ 352 ಅಡಿ ಪ್ರಕರಣ ದಾಖಲಾಗಿತ್ತು.


ಸಮಾವೇಶದಲ್ಲಿ ಗೊಂದಲದ ವಾತಾವರಣ ಸೃಷ್ಟಿಸಿದ್ದರಿಂದ ತಕ್ಷಣವೇ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ನಂತರ ವಂಟಮೂರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಕೀಯ ತಪಾಸಣೆ ನಡೆಸಲು ಅವರನ್ನು ಕರೆ ತಂದಿದ್ದರು. ಇಲ್ಲಿಯ ವೈದ್ಯರು ತಪಾಸಣೆ ನಡೆಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಆರೋಪಿಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ‌ ಮಾಡಲಾಯಿತು.


ಪ್ರಕರಣ ದಾಖಲಾಗುತ್ತಿದ್ದಂತೆ ಬಿಜೆಪಿ ನಾಯಕರು ಜಾಮೀನಿಗೆ ಅರ್ಜಿ ಸಲ್ಲಿಸಿದರು. ಬೆಳಗಾವಿಯ ಐದನೇ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆ ಸ್ಪರ್ಷಾ ಡಿಸೋಜಾ ಅವರು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತೆಯರ ಪರ ವಿನೋದ್​ ಕುಮಾರ್​ ಪಾಟೀಲ್​, ಧನ್ಯಕುಮಾರ್ ಪಾಟೀಲ್​ ವಕಾಲತ್ತು ವಹಿಸಿದ್ದರು.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ