Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾನ್ಸ್‌ಟೇಬಲ್ ಪರೀಕ್ಷೆಯಲ್ಲಿ ಗೊಂದಲ ,ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ : ಆರ್. ಅಶೋಕ್ 

Advertisement

ಬೆಂಗಳೂರು: ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಗೊಂದಲ, ಅಭ್ಯರ್ಥಿಗಳು ಪರೀಕ್ಷೆಯಿಂದ ಹೊರಗುಳಿಯುವಂತಾಗಿದ್ದು, ವೈಫಲ್ಯದ ಹೊಣೆ ಹೊತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕೆಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಒತ್ತಾಯಿಸಿದ್ದಾರೆ.

ಮತ್ತೊಂದು ನೇಮಕಾತಿ ಪರೀಕ್ಷೆ, ಮತ್ತೊಮ್ಮೆ ಕಾಂಗ್ರೆಸ್ ಸರ್ಕಾರದ ವೈಫಲ್ಯ.ಮಗದೊಮ್ಮೆ ರಾಜ್ಯದ ಯುವಕರ ಭವಿಷ್ಯದೊಂದಿಗೆ ಚೆಲ್ಲಾಟ ಆಡಿದ ರಾಜ್ಯ ಕಾಂಗ್ರೆಸ್ ಸರ್ಕಾರ ಎಂದು ಟೀಕಿಸಿದ್ದಾರೆ.

ವಿಜಯಪುರದಲ್ಲಿ ನಡೆದ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ವಿತರಣೆಯಲ್ಲಿ ವಿಳಂಬ, OMR ಶೀಟ್‌ಗಳ ಗೊಂದಲ ಹಾಗೂ ಅಭ್ಯರ್ಥಿಗಳು ಪರೀಕ್ಷೆಯಿಂದ ಹೊರನಡೆಯುವಂತಾದ ಘಟನೆ ಆಡಳಿತದ ಸಂಪೂರ್ಣ ವೈಫಲ್ಯ ಮತ್ತು ಕ್ಷಮಿಸಲಾಗದ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿ. ಸಾವಿರಾರು ಅಭ್ಯರ್ಥಿಗಳು ವರ್ಷಗಳ ಕಾಲ ಶ್ರಮಪಟ್ಟು ಈ ಪರೀಕ್ಷೆಗೆ ಸಿದ್ಧತೆ ನಡೆಸಿದ್ದರು. ಆದರೆ ಕಾಂಗ್ರೆಸ್ ಸರ್ಕಾರ ಅವರಿಗೆ ನೀಡಿದ್ದು ಗೊಂದಲ, ಅಸಮರ್ಥ ಆಡಳಿತ ಮತ್ತು ಭಗ್ನಗೊಂಡ ಕನಸುಗಳ ಗುಚ್ಛವನ್ನ ಎಂದು ದೂರಿದ್ದಾರೆ.

ಈ ವೈಫಲ್ಯದ ನೈತಿಕ ಹೊಣೆ ಹೊತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ತಕ್ಷಣವೇ ರಾಜೀನಾಮೆ ನೀಡಬೇಕು. ಗೊಂದಲವಾದ ಪರೀಕ್ಷೆಯನ್ನು ಸಂಬಂಧಿತ ಕೇಂದ್ರದಲ್ಲಿ ರದ್ದುಗೊಳಿಸಿ ಮರುಪರೀಕ್ಷೆ ನಡೆಸಬೇಕು. ಜೊತೆಗೆ ಸ್ವತಂತ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. “ಯುವಕರ ಭವಿಷ್ಯ ಹಾಳು ಮಾಡಿದ ಸರ್ಕಾರಕ್ಕೆ ಉತ್ತರದಾಯಿತ್ವ ಯಾರು?” ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಗೃಹ ಸಚಿವರಿಂದ ತಕ್ಷಣವೇ ರಾಜೀನಾಮೆ ಪಡೆಯಿರಿ ಎಂದು ಆಗ್ರಹಿಸಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾನ್ಸ್‌ಟೇಬಲ್ ಪರೀಕ್ಷೆಯಲ್ಲಿ ಗೊಂದಲ ,ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ : ಆರ್. ಅಶೋಕ್ ನಾಳೆಯೇ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ.: ಪ್ರಿಯಾಂಕ್ ಖರ್ಗೆ ಅಮ್ಮನಿಲ್ಲದ ಕಂದನ ಅಳು, ಪೊಲೀಸರ ಮಡಿಲಲ್ಲಿ ಲಾಲಿ : ಕಾನ್ಸ್‌ಟೇಬಲ್ ಪರೀಕ್ಷೆಯಲ್ಲಿ ಮಾನವೀಯತೆ ಕರ್ನಾಟಕ ಬಂದ್​ ಮಾಡೇ ಮಾಡ್ತೀವಿ, ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ : ವಾಟಾಳ್ ನಾಗರಾಜ್ ಕುರೆ ಕುರೆಯೊಳಗಿನ ಸಣ್ಣ ಬಾಲ್ ನುಗ್ಗಿ 5 ವರ್ಷದ ಮಗು ಸಾವು ರಾಜಕೀಯಕ್ಕಿಂತ ರಾಜ್ಯದ ರೈತರ,‌ ಜನರ ಹಿತ ಮುಖ್ಯ : ಡಿ. ಕೆ ಶಿವಕುಮಾರ್ ಕಡೆಯ ದಿನ ಮತ್ತಷ್ಟು ಪದಕ ಪಡೆಯಲು ಭಾರತ ಸ್ಪರ್ಧಿಗಳ ಯತ್ನಲಂಕಾ ವಿರುದ್ಧದ ಸರಣಿಗೆ ಬೂಮ್ರಾ ಗೈರುರಾಜುರವರನ್ನ ಉಚ್ಚಟನೆ ಮಾಡಿರುವ ಬಿಜೆಪಿ ಪಕ್ಷದ ವಿರುದ್ಧ ಮದ್ದೂರು ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಆಕ್ರೋಶಖಡಕಲಾಟ ಪೊಲೀಸರಿಂದ ಮೋಟರ್ ಸೈಕಲ್‌ ಕಳ್ಳರ ಬಂಧನ