ಬೆಂಗಳೂರು : ರಾಜ್ಯದಲ್ಲಿ ಚುನಾವಣೆ ಆಯೋಗವು ಕೈಗೆತ್ತಿಕೊಂಡಿರುವ ವಿಶೇಷ ಮತಪಟ್ಟ ಪರಿಷ್ಕರಣೆ (ಎಸ್‌ಐಆರ್) ವೇಳೆ ವಿಳಾಸ ಬದಲಾವಣೆ ಸೇರಿದಂತೆ ವಿವಿಧ ಕಾರಣಗಳಿಂದ ಸುಮಾರು 63 ಲಕ್ಷ ಮತದಾರರು ಹಕ್ಕು ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.
ಇಂತಹ ಮತದಾರರ ಪರಿಶೀಲನೆ ನಡೆಸಿ ಅವರಿಗೆ ಮತದಾನಕ್ಕೆ ಅವಕಾಶ ಮಾಡಿಕೊಡಲು ಕಾಂಗ್ರೆಸ್ ಪಕ್ಷವು ರಾಜ್ಯಾದ್ಯಂತ ಜಾಗೃತಿ ಅಭಿಯಾನ ಆರಂಭಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡವರು, ಅಲ್ಪಸಂಖ್ಯಾತರು, ಆದಿವಾಸಿಗಳು ಮತ್ತು ಹಿಂದುಳಿದ ವರ್ಗದ ಅನಕ್ಷರಸ್ಥರಲ್ಲಿ ಜಾಗೃತಿ ಮೂಡಿಸಲು ಪಕ್ಷದ ಸಂಯೋಜಕರು ಶ್ರಮಿಸಲಿದ್ದಾರೆ. 63 ಲಕ್ಷ ಮತದಾರರ ಸಂಖ್ಯೆ ದೊಡ್ಡದಾಗಿದ್ದು, ಅರ್ಹ ಮತದಾರರು ತಮ್ಮ ಹಕ್ಕಿನಿಂದ ವಂಚಿತರಾಗದಂತೆ ಕ್ರಮ ವಹಿಸಲಾಗುವುದು ಎಂದರು.


