LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕಾಂಗ್ರೆಸ್ ಸರ್ಕಾರ ಪತನ ಸನ್ನಿಹಿತ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

Advertisement
ಕಾರವಾರ: ರಾಜ್ಯದ ಕಾಂಗ್ರೆಸ್ ಸರ್ಕಾರ ಯಾವುದೇ ಕ್ಷಣದಲ್ಲೂ ಪತನವಾಗಬಹುದು. ಬಿಜೆಪಿ ಅಧಿಕಾರ ಹಿಡಿಯುವುದು ನಿಶ್ಚಿತ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಇಲ್ಲಿನ ಪ್ರೀಮಿಯರ್ ಹೋಟೆಲ್ ಸಭಾಂಗಣದಲ್ಲಿ ಮಂಗಳವಾರ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಮೋದಿ ಸರ್ಕಾರಕ್ಕೆ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕಾರ್ಯಚಟುವಟಿಕೆ ಕುರಿತು ಚರ್ಚೆಗೆ ಹಮ್ಮಿಕೊಂಡಿದ್ದ ಜಿಲ್ಲಾ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

'ಹಿಂದುತ್ವದ ಪರ ಕೆಲಸ ಮಾಡುತ್ತಿರುವ ಕಾರ್ಯಕರ್ತರಿಗೆ ಕಿರುಕುಳ ನೀಡುವ ಕೆಲಸ ಕಾಂಗ್ರೆಸ್‌ ಸರ್ಕಾರದಿಂದ ನಡೆಯುತ್ತಿದೆ. ಹಿಂದೂ ಸಂಘಟನೆಗಳ ಕಾರ್ಯಕರ್ತರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಆದರೆ, ಹಿಂದುತ್ವ ವಿಚಾರಧಾರ ಕುಗ್ಗಿಸಲು ಸರ್ಕಾರ ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದೆ' ಎಂದು ಆರೋಪಿಸಿದರು.'

ಆಡಳಿತದಲ್ಲಿ ಸಮನ್ವಯತೆ ಇಲ್ಲ, ದುರಾಡಳಿತ ಉತ್ತುಂಗ ತಲುಪಿದ ಎಂಬುದಕ್ಕೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ದುರಂತವೇ ಕಾರಣ, ಈ ದುರ್ಘಟನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವಿನ ಮುಸುಕಿನ ಗುದ್ದಾಟದ ಅಡ್ಡ ಪರಿಣಾಮ ಎಂಬುದು ಜನರಿಗೂ ಅರಿವಿಗೆ ಬರುತ್ತಿದೆ' ಎಂದರು.

'ಕೇಂದ್ರದ ಯೋಜನೆಗಳ ಯಶಸ್ವಿ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಅಡ್ಡಿಪಡಿಸುತ್ತಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ, ಮೊಬೈಲ್ ಟವರ್ ಸ್ಥಾಪನೆ, ನೌಕಾನೆಲೆ ಯೋಜನ ನಿರಾಶ್ರಿತರಿಗೆ ಹೆಚ್ಚುವರಿ ಪರಿಹಾರ
ವಿತರಣೆಗೆ ಅಡ್ಡಿಪಡಿಸುವ ಕೆಲಸ ನಿರಂತರವಾಗಿ ರಾಜ್ಯ ಸರ್ಕಾರದಿಂದ ಮುಂದುವರಿದಿದೆ' ಎಂದು ದೂರಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್ಯಲ್ಲಮ್ಮನ ಗುಡ್ಡದಲ್ಲಿ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ : ನಕಲಿ ಮಾತ್ರೆ, ಎಕ್ಸ್‌ಪೈರಿ ಪಾನೀಯ ಪತ್ತೆಗೋಣಿತುಮಕೂರು ಪಿಎಸಿಎಸ್ ಗೆ 1.12 ಲಕ್ಷ ರೂ ನಿವ್ವಳ ಲಾಭ /  ನವೀಕೃತ ಗೋದಾಮು ಕಟ್ಟಡ ಉದ್ಘಾಟನೆ ಆಸ್ಟ್ರೇಲಿಯಾ ಕ್ರಿಕೆಟ್ ತಂಡಕ್ಕೆ 3-0 ಸರಣಿ ಜಯವಿಧಾನಸಭೆಯಲ್ಲೂ 'ವಂದೇ ಮಾತರಂ' 2 ಚರಣ ಹಾಡಿದ ಕಾಂಗ್ರೆಸ್ : ವಿಪಕ್ಷಗಳಿಂದ ಗದ್ದಲ ಕೋಲಾಹಲಬೆಳಗಾವಿಯಲ್ಲಿ ಬಸ್‌ನಲ್ಲಿ ಸೀಟಿಗಾಗಿ ಮಹಿಳೆಯರ ನಡುವೆ ಹೊಡೆದಾಟಸಿವಿಲ್ ಹಾಗೂ ಜೆಎಂಎಫ್‌ಸಿ ಸಂಚಾರಿ ನ್ಯಾಯಾಲಯ ಉದ್ಘಾಟನೆ ಚೈತನ್ಯ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ!15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ರದ್ದು : ಕಲಬುರಗಿ ಪೀಠ ಆದೇಶ ರಾಜ್ಯದಲ್ಲಿ ಐದು ದಿನ ಭಾರಿ ಮಳೆ : ಬೆಳಗಾವಿ ಸೇರಿ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್