Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ : ಡಿ.ಕೆ. ಶಿವಕುಮಾರ್

Advertisement
ಬೆಳ್ತಂಗಡಿ: "ಜನರ ಆತ್ಮಸಾಕ್ಷಿ ಮತಗಳಿಂದ 2028ರ ಚುನಾವಣೆಯಲ್ಲಿ ದ.ಕನ್ನಡ, ಉಡುಪಿ ಜೆಲ್ಲೆಯಲ್ಲಿ ಕಾಂಗ್ರೆಸ್ 10 ಕ್ಷೇತ್ರಗಳನ್ನು ಗೆಲ್ಲಲಿದೆ. ಆಮೂಲಕ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ಬೆಳ್ತಂಗಡಿ ತಾಲ್ಲೂಕಿನ ಗುರುವಾಯನಕೆರೆಯಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಉದ್ಘಾಟಿಸಿ ಮಾತನಾಡಿದರು.

"ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರು ಈ ವರ್ಷವನ್ನು ಸಂಘಟನೆ ವರ್ಷವೆಂದು ಘೋಷಣೆ ಮಾಡಿದ್ದಾರೆ. ಜೈ ಬಾಪು, ಜೈ ಭೀಮ್ ಹಾಗೂ ಜೈ ಸಂವಿಧಾನ ಸಮಾವೇಶ ಮಾಡಿ, ಗಾಂಧೀಜಿ, ಅಂಬೇಡ್ಕರ್ ತತ್ವ ಸಿದ್ಧಾಂತ ಹಾಗೂ ಸಂವಿಧಾನ ರಕ್ಷಣೆಗೆ ಕರೆ ನೀಡಿದ್ದಾರೆ. ಇವುಗಳನ್ನು ನಾವು ಉಳಿಸಿ, ಬೆಳೆಸಿಕೊಂಡು ಹೋಗಬೇಕು" ಎಂದರು.

"ಕೇಂದ್ರ ಬಿಜೆಪಿ ನಾಯಕರು ಸಂಸತ್ತಿನಲ್ಲಿ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದರು. ಎಲ್ಲಾ ಧರ್ಮಗಳನ್ನು ಒಟ್ಟಾಗಿ ಸೇರಿಸಿಕೊಂಡು ಕೆಲಸ ಮಾಡುವುದೇ ಕಾಂಗ್ರೆಸ್ ಸಿದ್ಧಾಂತ. ಇಂದು ಕ್ರೈಸ್ತ ಬಾಂಧವರ ಈಸ್ಟರ್ ಹಬ್ಬ. ಈ ಸಂದರ್ಭದಲ್ಲಿ ಅವರಿಗೆ ಶುಭ ಕೋರುತ್ತೇನೆ.

ಸಮರ್ಪಣೆ, ಸಂಕಲ್ಪ, ಸಂಘರ್ಷ ಈ ಮೂರು ಅಂಶಗಳನ್ನು ಕಾಂಗ್ರೆಸ್ ಪಕ್ಷ ನಿಮ್ಮ ಮುಂದೆ ಇಟ್ಟಿದೆ. ಪ್ರಚಾರ ಸಮಿತಿ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ಈ ಜವಾಬ್ದಾರಿ ತೆಗೆದುಕೊಳ್ಳುತ್ತಿದ್ದು, ಎಲ್ಲರಿಗೂ ಅಭಿನಂದಿಸುತ್ತೇನೆ. ಇಲ್ಲಿ ಪ್ರತಿ ಬೂತ್ ನಲ್ಲಿ ಇಬ್ಬರು ಡಿಜಿಟಲ್ ಯೂಥ್ ನೇಮಕ ಮಾಡಲಾಗಿದೆ. ನಿಮ್ಮೆಲ್ಲರಿಗೂ ಅಭಿನಂದನೆಗಳು" ಎಂದರು.

"ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗಗಳು ಅಧಿಕಾರಕ್ಕೆ ಬಂದಂತೆ. ನಾವು ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡುದಾಗ ಬಿಜೆಪಿ ನಾಯಕರು ಇದು ಸಾಧ್ಯವೇ ಎಂದು ಪ್ರಶ್ನಿಸಿದರು.

ನಾನು ಹಾಗೂ ಸಿದ್ದರಾಮಯ್ಯ ಅವರು ಪ್ರಿಯಾಂಕ ಗಾಂಧಿ ಅವರ ಸಮ್ಮುಖದಲ್ಲಿ ಗ್ಯಾರಂಟಿ ಚೆಕ್ ಗೆ ಸಹಿ ಹಾಕಿದೆವು. ನಮ್ಮ ಸರ್ಕಾರ ಬಂದ ನಂತರ 1.21 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ತಲುಪಿದೆ. 200 ಯೂನಿಟ್ ವರೆಗೂ ಉಚಿತ ವಿದ್ಯುತ್, 10 ಕೆ.ಜಿ ಅಕ್ಕಿ, ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ನಿರುದ್ಯೋಗ ಯುವಕರಿಗೆ ನಿರುದ್ಯೋಗ ಭತ್ಯೆ ಸಿಗುತ್ತಿದೆ" ಎಂದು ಹೇಳಿದರು.

 

 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ