LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

'ಮತ ಚೋರಿ ' ವಿರುದ್ಧ ಹುಬ್ಬಳ್ಳಿಯಲ್ಲಿ ರೊಚ್ಚಿಗೆದ್ದ ಕಾಂಗ್ರೆಸ್ 

ಪಾಲಿಕೆ ಬಳಿ ಮೋದಿ,ಶಾ ಪ್ರತಿಕೃತಿ ದಹನ ಯತ್ನ – ಪ್ರಮುಖರ ಬಂಧನ

Advertisement

ಹುಬ್ಬಳ್ಳಿ: ವೋಟ್ ಚೋರ್ (ಮತಗಳ ಕಳವು) ಪ್ರಕರಣಕ್ಕೆ ಸಂಬAಧಿಸಿದAತೆ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡುತ್ತಿರುವ ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ತಕ್ಷಣವೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ, ವಿದ್ಯಾನಗರ ಹಾಗೂ ಉಣಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿಯನ್ನು ಆಯೋಜಿಸಲಾಗಿತ್ತು.
news_1791794277_0_411.webp

 

ನಗರದ ಡಾ. ಬಿ. ಆರ್. ಅಂಬೇಡ್ಕರ್ ವೃತ್ತದಿಂದ ಆರಂಭಗೊAಡ ಈ ಬೃಹತ್ ಪ್ರತಿಭಟನಾ ರ‍್ಯಾಲಿಗೆ ಸಂವಿಧಾನದ ೩೨೬ನೇ ವಿಧಿಯನ್ನು ಬಹಿರಂಗವಾಗಿ ಓದುವ ಮೂಲಕ ಚಾಲನೆ ನೀಡಲಾಯಿತು. ರ‍್ಯಾಲಿಯು ಮಹಾನಗರ ಪಾಲಿಕೆ ಕಚೇರಿ ಆವರಣಕ್ಕೆ ತಲುಪುತ್ತಿದ್ದಂತೆ, ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಪ್ರತಿಕೃತಿ ದಹನಕ್ಕೆ ಯತ್ನಿಸಿದರು. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ತೂರಾಟ ನಡೆದು ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಪ್ರತಿಭಟನಾ ನಿರತ ಕಾರ್ಯಕರ್ತರನ್ನು ವಶಕ್ಕೆ ಪಡೆದರು.
ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸದಾನಂದ  ಡಂಗನವರ್,ವಿದ್ಯಾನಗರ ಬ್ಲಾಕ್ ಅಧ್ಯಕ್ಷ , ಗ್ಯಾರಂಟಿ ಸಮಿತಿ ಅಧ್ಯಕ್ಷ ರಜತ ಉಳ್ಳಾಗಡ್ಡಿಮಠ, ಉಣಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಷರೀಫ್ ಗರಗದ  ಮಾಜಿ ಸಂಸದ ಪ್ರೋ. ಐಜಿ ಸನದಿ, ಕೆಪಿಸಿಸಿ ಸದಸ್ಯ ಸತೀಶ್ ಮೆಹರವಾಡೆ ಮುಂತಾದವರು ಪ್ರತಿಭಟನೆ ನೇತೃತ್ವ ವಹಸಿದ್ದರು. 
. 
ಮಾತನಾಡಿದ ಪ್ರಮುಖರು  ಶೋಷಿತ ಮತ್ತು ತುಳಿತಕ್ಕೊಳಗಾದ ಸಮುದಾಯಗಳ ಪವಿತ್ರವಾದ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಸಂಚು ರೂಪಿಸುತ್ತಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸಲು ಇದು ಫ್ಯಾಸಿಸ್ಟ್ ಆರ್‌ಎಸ್‌ಎಸ್ ವಿರುದ್ಧದ ಎರಡನೇ ಸ್ವಾತಂತ್ರ‍್ಯ ಸಂಗ್ರಾಮವಾಗಿದೆ" ಎಂದು ಕೇಂದ್ರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
news_1791794289_0_239.webp

 

ಮುಖಂಡರಾದ ದೊಡ್ಡರಾಮಪ್ಪ ದೊಡ್ಡಮನಿ, , ಶಹಜಮಾನ್ ಮುಜಾಹಿದ್, ಎಂ ಎಸ್ ಪಾಟೀಲ್ , ಅನ್ವರ್ ಮುಧೋಳ, ಪಾಲಿಕೆ ಸದಸ್ಯರಾದ ಸುವರ್ಣ ಕಲ್ಲಕುಂಟ್ಲ, ಸಾದಿಕ್ ಯಕ್ಕುಂಡಿ,  ಇಕ್ಬಾಲ್ ನವಲೂರು, ಸೆಂಥಿಲ್ ಕುಮಾರ್, ಚೇತನ್ ಹಿರೇಕೆರೂರ್, ಪದಾಧಿಕಾರಿಗಳಾದ  ಸಂಗಮೇಶ್ ಗೌರಕ್ಕನವರ್, ಸ್ನೇಹಾ ಜಾಧವ್, ಬಾಳಮ್ಮ ಜಂಗನವರ್, ಪರ್ವೇಜ್ ಕಟ್ಟಿಮನಿ, ಸೈಫ್ ಏರ್ಗಟ್ಟಿ, ಸುನಿಲ್ ಮಠಪತಿ, ಸುನಿತಾ ಹುರಕಡ್ಲಿ, ಅರ್ಜುನ್ ಗುಡ್ಡದ್, ಸಾಗರ್ ಹಿರೇಮನಿ, ಮಹೇಶ್ ದಾಬಡೆ, ಅಬ್ದುಲ್ ಗಣಿ ಸಹಿತ ನೂರಾರು ಕಾರ್ಯಕರ್ತರು ಇದ್ದರು
ವರದಿ: ಸುಧೀರ್ ಕುಲಕರ್ಣಿ 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬರ ಪರಿಹಾರಕ್ಕಾಗಿ ₹22,400 ಕೋಟಿ ಕೊಡಿ : ಕೇಂದ್ರಕ್ಕೆ ಮತ್ತೆ ಪತ್ರ ಬರೆದ ಜಿ. ಪರಮೇಶ್ವರ್ಮೈದಾನದಲ್ಲೇ ದುರಂತ: ಗೋಲ್‌ಕೀಪರ್ ಡಿಕ್ಕಿಯಾಗಿ ಆಟಗಾರ ಸಾವುಮಾನ್ವಿ ತಾಲೂಕಿನಲ್ಲಿ 70ಕ್ಕೂ ಹೆಚ್ಚು ಪಕ್ಷಿ ಪ್ರಭೇದಗಳ ದಾಖಲೆಮಾನ್ವಿ ಪಟ್ಟಣದ ಕುಡಿಯುವ ನೀರಿನ ಕೆರೆ ತುಂಬಿಸಲು ಅಗತ್ಯ ಕ್ರಮ ಕೈಗೊಳ್ಳಿ: ಎನ್.ಎಸ್. ಬೋಸರಾಜುಬಾಪುರ ನರಸಿಂಹ ಶೆಟ್ಟಿ ಕುಟುಂಬಕ್ಕೆ ಆರ್ಯವೈಶ್ಯ ಸಂಘದಿಂದ 2 ಲಕ್ಷ ಸಹಾಯಧನಗೋಕಾಕನಲ್ಲಿ ಮಹಿಳೆ ಕೊಲೆ ಆರೋಪ: ಪ್ರಿಯಕರನ ವಿರುದ್ಧ ಎಫ್‌ಐಆರ್ಸ್ಟಿಂಗ್ ಆಪರೇಷನ್‌ಗೆ ಕರ್ನಾಟಕ ಮಾಡೆಲ್ ಆಗಲಿದೆ:  ಕೆ.ಎನ್.ರಾಜಣ್ಣ ಕೆ. ವಿ. ಅನಿಸ್ ಅಮೋಘ ಶತಕ : ಇನ್ನಿಂಗ್ಸ್ ಗೆಲುವಿನತ್ತ ಕರ್ನಾಟಕ ಚಿತ್ತ ವೈಭವ್ ಸೂರ್ಯವಂಸಿ, ರಜತ ಪಟಿದಾರ್ ಗೆ ಸ್ಥಾನ ರಿಂಗ್ ರೋಡ್ ಬೇಡ, ಪಾಣಂದ್ ರಸ್ತೆಗಳನ್ನು ದುರಸ್ತಿ ಮಾಡಿ - ಸದಲಗಾ ಭಾಗದ ರೈತರ ಏಕಮುಖ ಬೇಡಿಕೆ