Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿಯಿಂದ ಇಡಿ, ಸಿಬಿಐ ದುರ್ಬಳಕೆ; ಕಾಂಗ್ರೆಸ್ ಯುವ ನಾಯಕ ಮೃಣಾಲ್ ಹೆಬ್ಬಾಳಕರ್ ಕಿಡಿ

Advertisement
ಬೆಳಗಾವಿ: ಬಿಜೆಪಿಯವರು ಇಡಿ, ಸಿಬಿಐ, ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ಸಿನ ಕಟ್ಟಾ, ನಿಷ್ಠಾವಂತ ಕಾರ್ಯಕರ್ತರ ಮೇಲೆ ವಿನಾಕಾರಣ ಕೇಸು ದಾಖಲಿಸುತ್ತಿದ್ದು; ಇದು ಅವರಿಗೇ ತಿರುಗುಬಾಣವಾಗುತ್ತಿದೆ ಎಂದು ಯುವ ಕಾಂಗ್ರೆಸ್ ನಾಯಕ ಮೃಣಾಲ್ ಹೆಬ್ಬಾಳಕರ್ ಲೇವಡಿ ಮಾಡಿದ್ದಾರೆ.

ಹಿರೇಬಾಗೇವಾಡಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿಚಾರದಲ್ಲೂ ಇಡಿ, ಸಿಬಿಐಗೆ ಸಿಲುಕಿಸಲು ಯತ್ನಿಸುತ್ತಿದ್ದಾರೆ. ಕಾಂಗ್ರೆಸ್ಸಿನ ಬಲಿಷ್ಠ ನಾಯಕರ್ಯಾರನ್ನೂ ಬಿಡುತ್ತಿಲ್ಲ. ಈ ಹಿಂದೆಯೂ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರ ಮೇಲೂ ಇಡಿ, ಸಿಬಿಐ ದಾಳಿ ಮಾಡಿಸಲಾಗಿತ್ತು. ತಪ್ಪು ಮಾಡದಿದ್ದರೂ ಜೈಲಿಗೆ ಹೋಗುವಂತೆ, ಮಾನಸಿಕವಾಗಿ ತೊಂದರೆ ಕೊಟ್ಟರೆಂದು ಮೃಣಾಲ್ ಕಿಡಿಕಾರಿದರು.

ಸುಭದ್ರ ಸರ್ಕಾರ ಅಭದ್ರತೆಗೊಳಿಸಲು ಸಾಧ್ಯವಿಲ್ಲ
ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ನಮ್ಮ ಸರ್ಕಾರ ಇಡೀ ದೇಶದಲ್ಲೇ ದಕ್ಷ ಹಾಗೂ ಸುಭದ್ರ ಸರ್ಕಾರ. ಆದರೆ, ನಮ್ಮ ಸುಭದ್ರ ಸರ್ಕಾರವನ್ನು ಅಭದ್ರಗೊಳಿಸಲು ಬಿಜೆಪಿಯವರು ಯತ್ನಿಸುತ್ತಿದ್ದಾರೆ. ಆದರೆ, ಬಿಜೆಪಿಯವರ ಕುತಂತ್ರ ನಡೆಯುವುದಿಲ್ಲ. ನಮ್ಮ ಸಿದ್ದರಾಮಯ್ಯನವರನ್ನು ಬಿಜೆಪಿಯವರು ಏನೂ ಮಾಡಲು ಕೂಡ ಆಗುವುದಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು.

ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ; ಯಾರಲ್ಲೂ ಸಹಮತವಿಲ್ಲ; ಬಿಜೆಪಿಯವರೇ ಬಹಿರಂಗವಾಗಿ ಹೇಳಿಕೆಗಳನ್ನು ನೀಡುತ್ತ ತಮ್ಮ ಪಕ್ಷದ ನಾಯಕರ ಮಾನಹಾನಿ ಮಾಡಿಕೊಳ್ಳುತ್ತಿದ್ದಾರೆ. ಈಗಾಗಲೇ ರಾಜ್ಯ ಬಿಜೆಪಿ ಎರಡ್ಮೂರು ಗುಂಪುಗಳಾಗಿದೆ. ಆದರೆ, ತಮ್ಮ ಪಕ್ಷದ ನಡೆಯ ಬಗ್ಗೆ ಗಮನಿಸದೆ ಬಿಜೆಪಿಯವರು, ಕಾಂಗ್ರೆಸ್ಸಿನ ನಾಯಕರ ನಡುವೆ ಒಡಕುಂಟು ಮಾಡಲು ಯತ್ನಿಸುತ್ತಿದ್ದಾರೆ ಎಂದು ಮೃಣಾಲ್ ಹೆಬ್ಬಾಳಕರ್ ಆರೋಪಿಸಿದರು.

ವರದಿ ಪ್ರತೀಕ ಚಿಟಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ