Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಲ್ಲು ಗಣಿಗಾರಿಕೆ ನಡೆಸಲು ಲೈಸೆನ್ಸ್ ನೀಡಲು ಒಪ್ಪಿಗೆ

Advertisement
ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅಧ್ಯಕ್ಷತೆಯಲ್ಲಿ ಬುಧವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಟಾಸ್ಕ್ ಫೋರ್ಸ್ (ಗಣಿ) ಹಾಗೂ ಜಿಲ್ಲಾ ಕಲ್ಲು ಪುಡಿ ಘಟಕಗಳ ಲೈಸನ್ಸ್ ನೀಡಿಕೆ ನಿಯಂತ್ರಣ ಪ್ರಾಧಿಕಾರದ ಸಭೆಯಲ್ಲಿ ಕಲಬುರಗಿ, ಕಾಳಗಿ, ಕಮಲಾಪೂರ ತಾಲೂಕಿನಲ್ಲಿ ತಲಾ ಒಂದರಂತೆ ಕಲ್ಲು ಗಣಿಗಾರಿಕೆ ನಡೆಸಲು ಲೈಸೆನ್ಸ್ ನೀಡಲು ಒಪ್ಪಿಗೆ ಸೂಚಿಸಲಾಗಿದೆ.

ಕಲಬುರಗಿ ತಾಲೂಕಿನ ಭೀಮಳ್ಳಿ ಮತ್ತು ಕಮಲಾಪುರ ತಾಲೂಕಿನ ಜೀವಣಗಿಯಲ್ಲಿ ಕಟ್ಟಡ ಕಲ್ಲು ಗಣಿಗಾರಿಕೆಗೆ ಮತ್ತು ಕಾಳಗಿ ತಾಲೂಕಿನ ಹುಲುಸಗೂಡನಲ್ಲಿ ಸವಳು ಮಣ್ಣು ರಫ್ತು(ಫುಲರ್ಸ್) ಗಣಿಗಾರಿಕೆ ನಡೆಸಲು ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಗಳು-1994ರಂತೆ ಟಾಸ್ಕ್ ಪೋರ್ಸ್ ಸಮಿತಿ ಒಪ್ಪಿಗೆ ಸೂಚಿಸಿದೆ.

ಇದೇ‌ ಸಂದರ್ಭದಲ್ಲಿ ನಡೆದ ಜಿಲ್ಲಾ ಕಲ್ಲು ಪುಡಿ ಘಟಕ ನಿಯಂತ್ರಣ ಸಮಿತಿ ಸಭೆಯಲ್ಲಿ ಕಾಳಗಿ ಮತ್ತು ಕಲಬುರಗಿ ತಾಲೂಕಿನಲ್ಲಿ ತಲಾ ಒಂದು ಕ್ರಶರ್ ಯೂನಿಟ್ ಘಟಕ ಕಾರ್ಯಾರಂಭಕ್ಕೂ ಫಾರ್ಮ್-ಸಿ ಪರವಾನಿಗೆ ನೀಡಲು ಸಭೆ ಅನುಮೋದನೆ ನೀಡಿದೆ.

ಅಕ್ರಮ ಗಣಿಗಾರಿಕೆಗೆ 53.31 ಲಕ್ಷ‌ ರೂ. ದಂಡ‌ : ಸಭೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕ ಸೋಮಶೇಖರ ಮಾತನಾಡಿ, ಪ್ರಸಕ್ತ 2025-26ನೇ ಸಾಲಿನಲ್ಲಿ ಏಪ್ರಿಲ್ ನಿಂದ ಇಲ್ಲಿಯವರೆಗೆ ಅನಧಿಕೃತ ಗಣಿಗಾರಿಕೆ, ಸಾಗಾಣಿಕೆ ಮತ್ತು ದಾಸ್ತಾನು ಮಾಡಿಕೊಂಡಿದಕ್ಕಾಗಿ 139 ಪ್ರಕರಣಗಳಲ್ಲಿ 53.31 ಲಕ್ಷ‌ ರೂ. ದಂಡ‌ ವಿಧಿಸಿದೆ. ಇದರಲ್ಲಿ 81 ಎಫ್.ಐ.ಆರ್ ದಾಖಲಿಸಿದ್ದು, 6 ಪ್ರಕರಣಗಳಲ್ಲಿ ಇಲಾಖೆಯ ಪಿ.ಸಿ.ಆರ್ ವರದಿ ತಯಾರಿಸಿ ಸಂಬಂಧಿಸಿದ ಜೆ.ಎಂ.ಎಪ್‌.ಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದೆ. ನಿಗದಿತ ಮಾರ್ಗದಲ್ಲಿ ಸಾಗಾಣಿಕೆ ಮಾಡದೆ ನಿಯಮಾವಳಿ ಉಲ್ಲಂಘಿಸಿದಕ್ಕಾಗಿ 10 ವಾಹನಗಳನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿದೆ ಎಂದು ಸಭೆಯ ಗಮನಕ್ಕೆ ತಂದರು.

ಸಭೆಯಲ್ಲಿ ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಡಿ.ಸಿ.ಪಿ ಕನಿಕಾ ಸಿಕ್ರಿವಾಲ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮಿತ್ ಪಾಟೀಲ, ಸಹಾಯಕ ಆಯುಕ್ತ ಪ್ರಭುರೆಡ್ಡಿ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಪರಿಸರ ಅಧಿಕಾರಿಗಳು ಸೇರಿದಂತೆ ತಾಲೂಕಿನ ತಹಶೀಲ್ದಾರರು, ಪೊಲೀಸ್ ಅಧಿಕಾರಿಗಳು ಮತ್ತಿತರರು ಹಾಜರಿದ್ದರು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್