Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಪ್ರಾಪ್ತ ಮಗಳ ಮೇಲೆ ತಂದೆ ಹಾಗೂ ಆತನ ಸ್ನೇಹಿತನಿಂದಲೇ ನಿರಂತರ ಅತ್ಯಾಚಾರ

Advertisement

ರಾಯಚೂರು: ಕರುಳ ಕುಡಿಯನ್ನು ರಕ್ಷಿಸಬೇಕಾದ ತಂದೆಯೇ ಕಾಮಪಿಶಾಚಿಯಾದ ಘೋರ ಘಟನೆಯೊಂದು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಕಳೆದ ಎರಡು ವರ್ಷಗಳಿಂದ ತನ್ನ ಅಪ್ರಾಪ್ತ ಮಗಳ ಮೇಲೆ ತಂದೆ ಹಾಗೂ ಆತನ ಸ್ನೇಹಿತ ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದು, ಇದೀಗ ಇಬ್ಬರೂ ಕಾಮುಕರು ಪೊಲೀಸರ ಅತಿಥಿಯಾಗಿದ್ದಾರೆ.

ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ತಂದೆ ಹಾಗೂ ಆತನ ಸ್ನೇಹಿತ ಸೇರಿ ಅಪ್ರಾಪ್ತ ಬಾಲಕಿಯ ಮೇಲೆ ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಅತ್ಯಾಚಾರ ಎಸಗಿದ್ದಾರೆ.

ಬಾಲಕಿಯ ತಂದೆ ಅಮರೇಶ್ ಹಾಗೂ ಆತನ ಸ್ನೇಹಿತ ಸೀನು ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯನ್ನು ರಕ್ಷಿಸಿ ಸಾಂತ್ವಾನ ಕೇಂದ್ರಕ್ಕೆ ಕಳುಹಿಸಲಾಗಿದ್ದು, ಅಲ್ಲಿ ಬಾಲಕಿಯು ತನಗೆ ನಡೆದ ದೌರ್ಜನ್ಯದ ಬಗ್ಗೆ ಮಾಹಿತಿ ನೀಡಿದ್ದಾಳೆ.

ಬಾಲಕಿಯ ಹೇಳಿಕೆಯ ಆಧಾರದ ಮೇಲೆ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಮತ್ತು ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇಬ್ಬರೂ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಅವರು ತಿಳಿಸಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ: 65 ವರ್ಷದ ಆರೋಪಿಗೆ ಗಲ್ಲು ಶಿಕ್ಷೆಬೆಂಗಳೂರಿನಲ್ಲಿ ಸಿಸಿಬಿ ಭರ್ಜರಿ ಕಾರ್ಯಾಚರಣೆ : 21 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಮಳೆಗಾಗಿ ಹರಕೆ ಹೊತ್ತ ರೈತ : 101 ಕೆಜಿ ಸಜ್ಜೆ ಚೀಲ ಹೊತ್ತು ರೈತನ ದೇವಸ್ಥಾನಗಳತ್ತ ಹೆಜ್ಜೆ ರಾಮದೇವ್ ಹೋಟೆಲ್ ಬಳಿ ಹೊತ್ತಿ ಉರಿದ ಕಾರುಚಪ್ಪಟೆ ಮೂಗಿನ ಸಮಸ್ಯೆಗೆ ಪ್ಲಾಸ್ಟಿಕ್ ಸರ್ಜರಿ ಹೋಗಿದ್ದ ಯುವಕ ನಿಗೂಢವಾಗಿ ಸಾವು 1.5 ಕೋಟಿ ವೆಚ್ಚದಲ್ಲಿ  ಕಲ್ಯಾಣ ಮಂಟಪಕ್ಕೆ ಭೂಮಿ ಪೂಜೆ,: ಟ್ರಸ್ಟ್ ಅಧ್ಯಕ್ಷ ಎಚ್.ಚಿತ್ತರಂಜನ್ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂದವಾಡಗಿ ಪೂಜ್ಯರುಕಟ್ಟಡವೊಂದರ ಚಾವಣಿ ಕುಸಿತ : ಇಬ್ಬರು ಸ್ಥಳದಲ್ಲೇ ಸಾವು, ಓರ್ವ ಗಂಭೀರ ಸ್ಕೈಡೈವಿಂಗ್ ರನ್ನ ಕರೆದುಕೊಂಡು ಹೋಗುತ್ತಿದ್ದ ವಿಮಾನ ಪತನ : 11 ಜನ ಸಾವುನಾಳೆಯಿಂದ ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಆರಂಭ