Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಲಾರಕೋಟ್ ಅಂಬೇಡ್ಕರ್ ಅವರ ಮೂರ್ತಿ ಹತ್ತಿರ ಅದ್ದೂರಿಯಾಗಿ ಸಂವಿಧಾನ ದಿನಾಚರಣೆ 

Advertisement
ಸೇಡಂ: ತಾಲೂಕಿನ ಸಿಲಾರಕೋಟ್ ಗ್ರಾಮದಲ್ಲಿ ಡಾ. ಬಿ. ಆರ್ ಅಂಬೇಡ್ಕರ್ ಅವರ ಪುತ್ಥಳಿ ಹತ್ತಿರ ಪತ್ರಕರ್ತರ ವೆಂಕಟಪ್ಪ ಕೆ ಸುಗ್ಗಾಲ್ ಮತ್ತು ಅಂಬೇಡ್ಕರ್ ಯುವಕರ ಸಂಘ ಅಧ್ಯಕ್ಷ ಸಾಬಪ್ಪ ಅಬ್ಬಗಳ ಅವರ ನೇತೃತ್ವದಲ್ಲಿ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.

ಈ ಕಾರ್ಯಕ್ರಮದ ಉಪಸ್ಥಿತಿಯನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಡಾ ಮಧುಸೂಧನ್ ರೆಡ್ಡಿ ಪಾಟೀಲ್, ಮಹಿಪಾಲ ರೆಡ್ಡಿ ಆಕುದೋಟ ವಹಿಸಿದರು ಹಾಗೂ ಈ ಕಾರ್ಯಕ್ರಮದ ಅತಿಥಿಸ್ಥಾನವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಗುರುಗಳಾದ ಶ್ರೀಮತಿ ಪುಷ್ಪ ಮತ್ತು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹರಿಜನವಾಡ ಶಾಲೆಯ ಮುಖ್ಯ ಗುರುಗಳಾದ ಈರಪ್ಪ ಅವರು ವಹಿಸಿದರು.

ಮುಖ್ಯ ಗುರುಗಳಾದ ಪುಷ್ಪ ಅವರು ಮತ್ತು ಈರಪ್ಪ ಪೂಜಾರಿ ಅವರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಡಾ ಮಧುಸೂಧನ್ ರೆಡ್ಡಿ ಪಾಟೀಲ್ ಮತ್ತು ಗ್ರಾಮದ ಮುಖಂಡರಾದ ಮಹಿಪಾಲ್ ರೆಡ್ಡಿ ಆಕುದೋಟ ಅವರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

ತದನಂತರ ಶಾಲೆಯ ವಿದ್ಯಾರ್ಥಿಗಳಾದ ಕುಮಾರಿ ಸಂಗೀತ ಮತ್ತು ಸಂಗಡಿಗರಿಂದ ಸಂವಿಧಾನ ಪೀಠಿಕೆ ಓದಿ ಕಾರ್ಯಕ್ರಮಕ್ಕೆ ಉತ್ಸಾಹ ತುಂಬಿದರು. ಈ ಕಾರ್ಯಕ್ರಮದ ನಿರೂಪಣೆ ಮತ್ತು ವಂದನಾರ್ಪಣೆ ಅಥಿತಿ ಶಿಕ್ಷಕರಾದ ನರಸಿಂಹ ಅವರು ನೆರವೇರಿಸಿದರು.

ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಡಾ ಮಧುಸೂಧನ್ ರೆಡ್ಡಿ ಪಾಟೀಲ್ ಅವರು ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸಹ ಶಿಕ್ಷಕರಾದ ಅಶೋಕ್ ಅವರು ಕಾರ್ಯಕ್ರಮದ ಕುರಿತು ಸವಿಸ್ತಾರವಾಗಿ ಮಾತನಾಡಿದರು.

ಮುಖ್ಯ ಗುರುಗಳಾದ ಈರಪ್ಪ ಪೂಜಾರಿ ಅವರು ಸಂವಿಧಾನ ದಿನಾಚರಣೆ ಮತ್ತು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವನ ಚರಿತ್ರೆ ಅವರು ನಡೆದು ಬಂದ ಹಾದಿ ಕುರಿತು ವಿವರವಾಗಿ ಹೇಳಿದರು. ಅಥಿತಿ ಶಿಕ್ಷಕರಾದ ನರಸಿಂಹ ಅವರು ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತು ಪ್ರೀತಿಪೂರ್ವಕ ಮಾತುಗಳು ಹೇಳಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ತಮ್ಮ ಪ್ರೀತಿಯ ಮಾತುಗಳನ್ನು ಹೇಳಿದರು.

ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಡಾ ಮಧುಸೂಧನ್ ರೆಡ್ಡಿ ಪಾಟೀಲ್, ಗ್ರಾಮದ ಹಿರಿಯ ಮುಖಂಡರಾದ ಮಹಿಪಾಲ್ ರೆಡ್ಡಿ, ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಯುವಕರ ಸಂಘ ಸಿಲಾರಕೋಟ್ ಅಧ್ಯಕ್ಷರಾದ ಸಾಬಪ್ಪ ಅಬ್ಬಗಳ, ಮುಖ್ಯ ಗುರುಗಳಾದ ಶ್ರೀಮತಿ ಪುಷ್ಪ, ಈರಪ್ಪ ಪೂಜಾರಿ,ಮಾದಿಗ ಸಮಾಜದ ಮುಖಂಡರಾದ ಸಾಯಿಲು ಡಬ್ಬು, ನರಸಿಂಹ ಕುರ್ಕು ಸೇರಿದಂತೆ ಶಾಲೆಯ ಮುದ್ದುಮಕ್ಕಳು ಮತ್ತು ಸಹ ಶಿಕ್ಷಕರುಗಳು ಮತ್ತು ಗ್ರಾಮದ ಎಲ್ಲಾ ಮುಖಂಡರು ಭಾಗಿಯಾಗಿದ್ದರು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ