LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಭೀಕರ ರಸ್ತೆ ಅಪಘಾತದಲ್ಲಿ ಹಳ್ಳಿ ಹೈದ ಪ್ಯಾಟೆಗೆ ಬಂದ' ಸ್ಪರ್ಧಿ ಬಾವತೀಶ್ ದುರ್ಮರಣ

Advertisement
ಕಾರವಾರ : ಖ್ಯಾತ ರಿಯಾಲಿಟಿ ಶೋ 'ಹಳ್ಳಿ ಹೈದ ಪ್ಯಾಟೆಗೆ ಬಂದ' ಸೀಸನ್-3ರ ಸ್ಪರ್ಧಿಯಾಗಿದ್ದ ಬಾವತೀಶ್ (28) ಅವರು ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕೋಳಿಕೆರೆ ಸಮೀಪ ಈ ದುರ್ಘಟನೆ ಸಂಭವಿಸಿದೆ.

ಹಳಿಯಾಳ ತಾಲೂಕಿನ ವಾಡಗರಡೊಳ್ಳಿ ನಿವಾಸಿಯಾದ ಬಾವತೀಶ್ ಅವರು ತಮ್ಮ ಟಿವಿಎಸ್ ಮೊಫೆಡ್ ವಾಹನದಲ್ಲಿ ಸಂಚರಿಸುತ್ತಿದ್ದರು. ಈ ವೇಳೆ ರಸ್ತೆ ಬದಿಯಲ್ಲಿ ನಿಂತಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್‌ಗೆ ಅತೀ ವೇಗವಾಗಿ ಬಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ.

ಡಿಕ್ಕಿಯ ರಭಸ ಎಷ್ಟಿತ್ತೆಂದರೆ, ಅಪಘಾತವಾದ ತಕ್ಷಣ ಅವರ ದ್ವಿಚಕ್ರ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದೆ. ತೀವ್ರವಾಗಿ ಗಾಯಗೊಂಡಿದ್ದ ಬಾವತೀಶ್ ಅವರು ರಸ್ತೆಯಲ್ಲೇ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.

ಬಾವತೀಶ್ ಅವರು ರಿಯಾಲಿಟಿ ಶೋ ಮೂಲಕ ಜನಪ್ರಿಯತೆ ಗಳಿಸಿದ್ದರು. ಅವರ ಅನಿರೀಕ್ಷಿತ ಸಾವು ಕುಟುಂಬಸ್ಥರು ಹಾಗೂ ಅಭಿಮಾನಿ ವಲಯದಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ. ಘಟನೆಗೆ ಸಂಬಂಧಿಸಿದಂತೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ