Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೊಲೀಸ್  ಕಾನಸ್ಟೇಬಲ್ ನಿಂದ ಪ್ರಿತೀಯ ನಾಟಕವಾಡಿ ಅಪ್ರಾಪ್ತೆ ಮೇಲೆ ನಿರಂತರ ಲೈಂಗಿಕ ಸಂಪರ್ಕ ಆರೋಪ

Advertisement
ಯಾದಗಿರಿ : ಜನರಿಗೆ ಪೊಲೀಸರು ಅಂದರೆ ಭಯ, ಗೌರವ ಎರಡೂ ಇದೆ. ನಾಡಿನ ಗಡಿಯ ರಕ್ಷಣೆಗೆ ಸೈನಿಕನಂತೆ, ಸಮಾಜದ ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರು ಸದಾ ಮುಂದಿರುತ್ತಾರೆ. ತಮ್ಮ ಜೀವನವನ್ನು ಲೆಕ್ಕಿಸದೇ ಕರ್ತವ್ಯವನ್ನು ನಿರ್ವಹಿಸುತ್ತಾರೆ. ಆದರೆ ಇವರ ನಡುವೆಯೇ ಇರುವ ಕೆಲ ಪೊಲೀಸರಿಂದ ಇಡೀ ಇಲಾಖೆಗೆ ಕೆಟ್ಟ ಹೆಸರು ಬರುತ್ತದೆ. ಇದೀಗ ಓರ್ವ ಪೊಲೀಸ್ ಕಾನ್ಸ್​ಟೇಬಲ್​ಯಿಂದ ಇಲಾಖೆಗೆ ಕಳಂಕ ತರುವಂತಹ ಘಟನೆಯೊಂದು ನಡೆದಿದೆ.

ಪ್ರೀತಿಯ ನಾಟಕವಾಡಿ ಅಪ್ರಾಪ್ತೆ ಮೇಲೆ 2 ವರ್ಷ ನಿರಂತರ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಕೇಳಿಬಂದಿದೆ. ಜಿಲ್ಲೆಯ ಗುರುಮಠಕಲ್ ತಾಲೂಕಿನ ಗ್ರಾಮವೊಂದರಲ್ಲಿ ಘಟನೆ ನಡೆದಿದೆ.ಸೈದಾಪುರ ಠಾಣೆ ಕಾನ್ಸ್​ಟೇಬಲ್ ಬಲರಾಮನಿಂದ ಲೈಂಗಿಕ ದೌರ್ಜನ್ಯವೆಸಗಲಾಗಿದೆ. ಬಾಲಕಿಯು 16 ವರ್ಷದವಳಿದ್ದಾಗಲೇ ಪುಸಲಾಯಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡಿದ್ದ ಪೊಲೀಸ್ ಪೇದೆ, ಬಳಿಕ ಎರಡು ವರ್ಷ ನಿರಂತರ ಲೈಂಗಿಕ ಸಂಪರ್ಕ ಬೆಳೆಸಿದ್ದಾನೆ. ಬಳಿಕ ಗರ್ಭಿಣಿ ಆಗಿದ್ದ ಬಾಲಕಿಗೆ ಟ್ಯಾಬ್ಲೆಟ್ ಕೊಟ್ಟು ಮಗು ತೆಗೆಸಿದ ಆರೋಪ ಕೂಡ ಮಾಡಲಾಗಿದೆ.

ಬಾಲಕಿಗೆ 18 ವರ್ಷ ತುಂಬುತ್ತಿದ್ದಂತೆ 2024ರ ಡಿಸೆಂಬರ್​ನಲ್ಲಿ ಪಿಸಿ ಬಲರಾಮ ರಿಜಿಸ್ಟರ್ ‌ಮ್ಯಾರೇಜ್ ಆಗಿದ್ದಾರೆ. ಇತ್ತ ಬಲರಾಮ ಕುಟುಂಬ ಬಾಲಕಿಯನ್ನು ಮನೆಗೆ ಸೇರಿಸಿಕೊಳ್ಳಲು ನಿರಾಕರಿಸಿದ್ದಾರೆ. ಹೀಗಾಗಿ ಬಾಲಕಿಗೂ, ನನಗೂ ಸಂಬಂಧವಿಲ್ಲ ಎನ್ನುತ್ತಿದ್ದಾರೆ ಪಿಸಿ ಬಲರಾಮ. ಹೀಗಾಗಿ ಬಾಲಕಿ ಮತ್ತು ಕುಟುಂಬಸ್ಥರು ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಯಾದಗಿರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಬಲರಾಮ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ