LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ನಕಲಿ ಔಷಧ ತಯಾರಿಕಾ ಜಾಲ ಪತ್ತೆ: ಬರೋಬ್ಬರಿ 5 ಕೋಟಿ ರೂ. ಮೌಲ್ಯದ ಔಷಧ ವಶಕ್ಕೆ

Advertisement

ರಾಮನಗರ: ಬೆಂಗಳೂರು ದಕ್ಷಿಣ ತಾಲೂಕಿನ ಸಿ.ಕೆ.ತಾಂಡ್ಯ ಸಮೀಪದ ಫಾರ್ಮ್‌ಹೌಸ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ನಡೆಯುತ್ತಿದ್ದ ಭಾರೀ ನಕಲಿ ಔಷಧಿ ಮರುಪ್ಯಾಕಿಂಗ್ ಜಾಲವನ್ನು ಅಧಿಕಾರಿಗಳು ಭೇದಿಸಿದ್ದಾರೆ. 

ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತ ಇಲಾಖೆ ಹಾಗೂ ಪೊಲೀಸರ ಜಂಟಿ ತಂಡ ನಡೆಸಿದ ಈ ಮೆಗಾ ಕಾರ್ಯಾಚರಣೆಯಲ್ಲಿ ಬರೋಬ್ಬರಿ ₹5 ಕೋಟಿ ಮೌಲ್ಯದ ಔಷಧಿಗಳು ಹಾಗೂ ಸಲಕರಣೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಶಾಂತ್ ಎಂಬಾತ ಸ್ಥಳೀಯರಿಂದ ಫಾರ್ಮ್‌ಹೌಸ್ ಅನ್ನು ಗುತ್ತಿಗೆಗೆ (ಲೀಸ್) ಪಡೆದು, ಕಳೆದೊಂದು ವರ್ಷದಿಂದ ಈ ಕೃತ್ಯ ನಡೆಸುತ್ತಿದ್ದನು. 

ತೆಲಂಗಾಣ ಹಾಗೂ ಹಿಮಾಚಲ ಪ್ರದೇಶದಿಂದ ಅತ್ಯಂತ ಕಡಿಮೆ ಬೆಲೆಯ ಔಷಧಿಗಳನ್ನು ತರಿಸಿಕೊಳ್ಳುತ್ತಿದ್ದ ಈತ, ಪ್ರಸಿದ್ಧ ಬಹುರಾಷ್ಟ್ರೀಯ ಕಂಪನಿಗಳ (MNC) ನಕಲಿ ಲೇಬಲ್‌ಗಳನ್ನು ಅಂಟಿಸಿ ಮರುಪ್ಯಾಕಿಂಗ್ ಮಾಡುತ್ತಿದ್ದ. ಕೇವಲ ₹600 ಮೌಲ್ಯದ ಸಾಮಾನ್ಯ ಔಷಧಿಗೆ ಬರೋಬ್ಬರಿ ₹6,000 ಬೆಲೆಯ ಕಂಪನಿ ಲೇಬಲ್ ಹಾಕಿ ಮಾರುಕಟ್ಟೆಗೆ ಬಿಟ್ಟು ದುಪ್ಪಟ್ಟು ಲಾಭ ಗಳಿಸುತ್ತಿದ್ದ ಎಂಬುದು ತನಿಖೆಯಿಂದ ಬೆಳಕಿಗೆ ಬಂದಿದೆ.

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST