LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಅಖಿಲಾ ದಾಂಪತ್ಯದಲ್ಲಿ ಬಿರುಕು

Advertisement

ಕನ್ನಡ ಕೋಗಿಲೆ ರಿಯಾಲಿಟಿ ಶೋ ಮೂಲಕ ಗುರುತಿಸಿಕೊಂಡ ಅಖಿಲಾ ಅವರ ದಾಂಪತ್ಯದಲ್ಲಿ ಬಿರುಕು ಮೂಡಿದೆ. ವಿಚ್ಛೇದನಕ್ಕಾಗಿ ಅವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.


3 ವರ್ಷಗಳ ಹಿಂದೆ ಅಮೆರಿಕ ನಿವಾಸಿ ಧನಂಜಯ್ ಶರ್ಮ ಜೊತೆ ಅಖಿಲಾ ಪಜಿಮಣ್ಣು ವಿವಾಹ ನೆರವೇರಿತ್ತು. ಆದರೆ ಅವರ ಸಂಸಾರದಲ್ಲಿ ಸಾಮರಸ್ಯ ಮಾಯವಾಗಿದೆ. ಧನಂಜಯ್ ಶರ್ಮಾ ಮತ್ತು ಅಖಿಲಾ ಪಜಿಮಣ್ಣು ಅವರು ಬೇರಾಗಲು ನಿರ್ಧರಿಸಿದ್ದಾರೆ.


ಅಖಿಲಾ ಅವರು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನವರು. ಕಿರುತೆರೆ ಹಾಗೂ ಸೋಶಿಯಲ್ ಮೀಡಿಯಾ ಮೂಲಕ ಅವರು ಖ್ಯಾತಿ ಗಳಿಸಿದ್ದಾರೆ. ಸುಮಧುರ ಗಾಯನದ ಮೂಲಕ ಅವರು ಜನಮನ ಗೆದ್ದಿದ್ದಾರೆ. ಅವರು ಈಗ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವುದು ಅಚ್ಚರಿ ಮೂಡಿಸಿದೆ.


ಗಾಯಕಿ ಅಖಿಲಾ ಪಜಿಮಣ್ಣು ಮತ್ತು ಪತಿ ಟಿ.ಆರ್ ಧನರಾಜ್ ಶರ್ಮಾ ಪರಸ್ಪರ ಒಪ್ಪಿ ಇದೇ ಜೂನ್ 12 ರಂದು ಪುತ್ತೂರು ಕೋರ್ಟ್ನಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪುತ್ತೂರಿನ ವಕೀಲ ಮಹೇಶ್ ಕಜೆ ಮೂಲಕ ಅರ್ಜಿ ಸಲ್ಲಿಸಿದ್ದಾರೆ.


ಅಖಿಲಾ ಪಜಿಮಣ್ಣು ಮತ್ತು ಧನಂಜಯ್ ಶರ್ಮಾ ನಡುವೆ ಮಧ್ಯಸ್ಥಿಕೆಗೆ ಕಳೆದ ಆರು ತಿಂಗಳಿಂದ ಕೋರ್ಟ್ ಅವಕಾಶ ನೀಡಿತ್ತು. ಬುಧವಾರ (ಜೂನ್ 18) ದಂಪತಿ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಮ್ಯೂಚುಯಲ್ಡಿವೋರ್ಸ್ ಪಡೆಯಲು ಇಬ್ಬರೂ ಒಪ್ಪಿಗೆ ಸೂಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ