ನವದೆಹಲಿ: ಸಂಸತ್‌ನಲ್ಲಿ ಮಹಿಳಾ ಮೀಸಲಾತಿ ಬಿಲ್ ಸೋಲಲು ಕಾರಣರಾದ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ಹಾಗೂ ಡಿಎಂಕೆಗೆ ಜನ ತಕ್ಕ ಪಾಠ ಕಲಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪಂಚ ರಾಜ್ಯ ಚುನಾವಣೆಗಳ ಪೈಕಿ ಪಶ್ಚಿಮ ಬಂಗಾಳ, ಆಸ್ಸಾಮ ಹಾಗೂ ಪುದುಚೇರಿಗಳಲ್ಲಿ ಬಿಜೆಪಿ ಪ್ರಚಂಡ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದರು.
ಆಸ್ಸಾಮ್‌ನಲ್ಲಿ ನಾವು ಹ್ಯಾಟ್ರಿಕ್ ಸಾಧಿಸಿದ್ದೇವೆ. ಜನರು ಬಿಜೆಪಿಯ ಪಾರದರ್ಶಕ ಆಡಳಿತ ಮೆಚ್ಚಿ ಮತ ನೀಡಿದ್ದೇ ಇದಕ್ಕೆ ಕಾರಣ. ಪುದುಚೇರಿ ಹಾಗೂ ಪಶ್ಚಿಮ ಬಂಗಾಳಗಳಲ್ಲಿಯೂ ನಾವು ಅಲ್ಲಿನ ಜನರಿಗೆ ಭರವಸೆ ನೀಡಿದಂತೆ ಆ ರಾಜ್ಯಗಳ ಸಮಗ್ರ ಅಭಿವೃದ್ಧಿಗೆ ನಾವು ಸದಾ ಸಿದ್ದ ಎಂದು ಮೋದಿ ಹೇಳಿದರು.
ಪಶ್ಚಿಮ ಬಂಗಾಳದ ಗೆಲುವಿನ ಶ್ರೇಯಸ್ಸನ್ನು ಅಲ್ಲಿನ ಜನರಿಗೆ ಹಾಗೂ ಆ ರಾಜ್ಯದಲ್ಲಿ ತಮ್ಮ ಜೀವದ ಹಂಗು ತೊರೆದು ಹೋರಾಡಿದ ಕಾರ್ಯಕರ್ತರಿಗೆ ಸಲ್ಲಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು.

