Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

SSLC, ಪಿಯುಸಿ ಪರೀಕ್ಷಾ ಅಕ್ರಮದಲ್ಲಿ ಪಾಲ್ಗೊಳ್ಳುವ ಸಿಬ್ಬಂದಿ  ವಿರುದ್ಧ ಕ್ರಿಮಿನಲ್ ಮೊಕದ್ದಮೆ 

Advertisement
ಬೆಂಗಳೂರು: SSLC, ದ್ವಿತೀಯ ಪಿಯುಸಿ ಪರೀಕ್ಷಾ ಅಕ್ರಮದಲ್ಲಿ ಪಾಲ್ಗೊಳ್ಳುವ ಅಧಿಕಾರಿ, ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಮತ್ತು ಇಲಾಖಾ ವಿಚಾರಣೆ ನಡೆಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಈ ಸಂಬಂಧ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ನಿರ್ದೇಶಕರು (ಪರೀಕ್ಷೆಗಳು), ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮ೦ಡಳಿ, ಮಲ್ಲೇಶ್ವರಂ, ಬೆಂಗಳೂರು ಸಂಖ್ಯೆ:ಎ8/ಎಸ್‌ಎಸ್‌ಎಲ್ಸಿ/ಅಕ್ರಮ/44/2019-20ರಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಒಂದು ಅತ್ಯಂತ ಪ್ರಮುಖ ಘಟ್ಟವಾಗಿರುತ್ತದೆ.


 

ಸದರಿ ಪರೀಕ್ಷೆಯನ್ನು ಯಾವುದೇ ಅವ್ಯವಹಾರ ಆಗದಂತೆ ಪಾರದರ್ಶಕವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಸಲು ಮಂಡಳಿಯು ಎಲ್ಲಾ ರೀತಿಯ ಅಗತ್ಯ ಪೂರ್ವಸಿದ್ಧತೆಗಳೊಂದಿಗೆ ಪರೀಕ್ಷೆಯನ್ನು ನಡೆಸಲು ಕ್ರಮಕೈಗೊಳ್ಳುತ್ತದೆ. ಏತನ್ಮಧ್ಯೆ. ಕೆಲವು ಕಿಡಿಗೇಡಿಗಳು ಪರೀಕ್ಷಾ ಸಮಯದಲ್ಲಿ ಪ್ರಶ್ನೆಪತ್ರಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದು, ಪ್ರಶ್ನೆಪತ್ರಿಕೆಯನ್ನು ಸೋರಿಕೆ ಮಾಡಲು ಪ್ರಯತ್ನಪಡುವುದು ಈ ತರಹದ ಕಾನೂನು ಬಾಹಿರ ಕೃತ್ಯಗಳನ್ನು ನಡೆಸಲು ಪ್ರಯತ್ನಿಸುವ ಮೂಲಕ ವಿದ್ಯಾರ್ಥಿ/ಪೋಷಕರಲ್ಲಿ ಗೊಂದಲವುಂಟುಮಾಡುವುದು ಮತ್ತು ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುವುದು ಇವರ ಉದ್ದೇಶವಾಗಿರುತ್ತದೆ. ಇಂತಹ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಇಲಾಖೆಯು ಅತ್ಯಂತ ಗಂಭೀರವಾಗಿ ಪರಿಗಣಿಸಲೇಬೇಕಾಗುತ್ತದೆ ಎಂದಿದ್ದಾರೆ.


 

ಇದರನ್ವಯ ಕಾನೂನು ಬಾಹಿರವಾಗಿ ಪರೀಕ್ಷಾ ಅಕ್ರಮಗಳಲ್ಲಿ ಪಾಲ್ಗೊಳ್ಳುವವರು ಮತ್ತು ಇದಕ್ಕೆ ಸಹಕರಿಸುವವರು / ಪ್ರಚೋದಿಸುವವರು ವಿದ್ಯಾರ್ಥಿಗಳಾಗಿರಲಿ | ಶಿಕ್ಷಕರಾಗಿರಲಿ / ಬಾಹ್ಯ ವ್ಯಕ್ತಿಗಳಾಗಿರಲಿ ಇವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕಾನೂನಿನಲ್ಲಿರುವ ಅವಕಾಶಗಳನ್ನು ಬಳಸಿಕೊಂಡು ಕಟ್ಟುನಿಟ್ಟಿನ ನಿರ್ದಾಕ್ಷಿಣ್ಯ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಪರೀಕ್ಷಾ ಅಕ್ರಮದಲ್ಲಿ ಪಾಲ್ಗೊಳ್ಳುವ ಅಧಿಕಾರಿ/ಸಿಬ್ಬಂದಿ ವರ್ಗದವರು, ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿನ ಮುಖ್ಯೋಪಾಧ್ಯಾಯರು/ಶಿಕ್ಷಕರು/ಸಿಬ್ಬಂದಿಗಳ ವಿರುದ್ಧ ಕ್ರಿಮಿನಲ್ ಮೊಕ್ಕದ್ದಮೆ ದಾಖಲಿಸುವುದು.


 

ಅಲ್ಲದೆ ನಿಯಮಾನುಸಾರ ಇಲಾಖಾ ವಿಚಾರಣೆ ನಡೆಸಿ ತಪ್ಪಿತಸ್ಥರನ್ನು ಸೇವೆಯಿಂದ ವಜಾಗೊಳಿಸುವ ಬಗ್ಗೆ ಸೂಕ್ತ ಸರ್ಕಾರದ ಆದೇಶ ಹೊರಡಿಸಲು ಹಾಗೂ ಪರೀಕ್ಷಾ ಅಕ್ರಮದಲ್ಲಿ ಪಾಲ್ಗೊಳ್ಳವವರು ಬಾಹ್ಯ ವ್ಯಕ್ತಿಗಳಾಗಿದ್ದಲ್ಲಿ ಅವರ ವಿರುದ್ಧ ಕ್ರಿಮಿನಲ್ ಮೊಕ್ಕದ್ದಮೆ ದಾಖಲಿಸಲು ಸೂಕ್ತ ಸರ್ಕಾರದ ಆದೇಶ ಹೊರಡಿಸಬೇಕೆಂದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಇವರು ಏಕಕಡತದಲ್ಲಿ ಕೋರಿರುತ್ತಾರೆ. ಹಾಗೂ ಸದರಿ ಏಕಕಡತದ ಕಂಡಿಕೆ-7ರಲ್ಲಿ ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ ರವರು ಪರೀಕ್ಷಾ ಅಕ್ರಮದಲ್ಲಿ ಪಾಲ್ಗೊಳ್ಳುವ ಸರ್ಕಾರಿ ಹಾಗೂ ಅನುದಾನಿತ ಶಾಲೆಯ ಮತ್ತು ಇಲಾಖೆಯ ಅಧಿಕಾರಿ/ಸಿಬ್ಬಂದಿ ವರ್ಗದವರ ವಿರುದ್ಧ ನಿಯಮಾನುಸಾರ ಇಲಾಖಾ ವಿಚಾರಣೆ ನಡೆಸಿ ಸೇವೆಯಿಂದ ವಜಾಗೊಳಿಸುವಂತಹ ದಂಡನೆ ವಿಧಿಸಲು ಸೂಕ್ತವಾದ ಸರ್ಕಾರದ ಆದೇಶವನ್ನು ಜಾರಿಗೊಳಿಸಲು ಶಿಫಾರಸ್ಸು ಮಾಡಿ ಪ್ರಸ್ತಾವನೆ ಸಲ್ಲಿಸಿರುತ್ತಾರೆ ಎಂದಿದ್ದಾರೆ.


 

ಕರ್ನಾಟಕ ಶಿಕ್ಷಣ ಕಾಯ್ದೆ, Karnataka Act No.18 of 2017 The Karnataka Education (Amendment) Act, 2017 ಪ್ರಕಾರ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಸಮಯದಲ್ಲಿ ನಕಲು ಮಾಡುವುದು, ಪ್ರಶ್ನೆಪತ್ರಿಕೆಯ ಫೋಟೊ ತೆಗೆಯುವುದು ಮತ್ತು ಪ್ರಶ್ನೆ ಪತ್ರಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ವಾಟ್ಸಾಪ್ ಮುಖಾಂತರ ಹರಿಬಿಡುವುದು, ಪರೀಕ್ಷಾ ಕೇಂದ್ರಗಳಲ್ಲಿ ಚೀಟಿಗಳನ್ನು ಸರಬರಾಜು ಮಾಡುವುದು ಇನ್ನಿತರ ಯಾವುದೇ ಪರೀಕ್ಷಾ ಅವ್ಯವಹಾರದ ಅಪರಾಧಕೃತ್ಯದಲ್ಲಿ ಭಾಗಿಯಾದವರಿಗೆ 3 ರಿಂದ 5 ವರ್ಷ ಜೈಲು ಹಾಗೂ ಐದು ಲಕ್ಷದಂಡ ವಿಧಿಸುವ ಅವಕಾಶವಿರುತ್ತದೆ ಎಂದು ಹೇಳಿದ್ದಾರೆ.


 

ಪ್ರಸ್ತಾವನೆಯಲ್ಲಿನ ಅಂಶಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಗಿ, ಎಸ್.ಎಸ್.ಎಲ್.ಸಿ ಮತ್ತು ಪದವಿ ಪೂರ್ವ ಪರೀಕ್ಷಾ ಅಕ್ರಮದಲ್ಲಿ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಸಮಯದಲ್ಲಿ ನಕಲು ಮಾಡುವುದು, ಪ್ರಶ್ನೆಪತ್ರಿಕೆಯ ಫೋಟೊ ತೆಗೆಯುವುದು ಮತ್ತು ಪ್ರಶ್ನೆ ಪತ್ರಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ವಾಟ್ಸಾಪ್/ಹಲೋ ಆಪ್ ಅಥವಾ ಇನ್ನಿತರ ಯಾವುದೇ ಆಪ್‌ಗಳ ಮುಖಾಂತರ ಹರಿಬಿಡುವುದು, ಪರೀಕ್ಷಾ ಕೇಂದ್ರಗಳಲ್ಲಿ ಚೀಟಿಗಳನ್ನು ಸರಬರಾಜು ಮಾಡುವುದು, ಪರೀಕ್ಷಾ ದುರ್ವ್ಯವಹಾರಕ್ಕಾಗಿ ಪ್ರೇರೇಪಿಸುವುದು ಮತ್ತು ಅಧಿಕೃತ ಪ್ರಶ್ನೆಪತ್ರಿಕೆ ಅಲ್ಲದಿದ್ದರೂ, ಪ್ರಶ್ನೆಪತ್ರಿಕೆ ಹೆಸರಿನಲ್ಲಿ ಗೊಂದಲ ಸೃಷ್ಟಿಸುವುದರ ಮೂಲಕ ವಿದ್ಯಾರ್ಥಿಗಳು/ಪೋಷಕರಲ್ಲಿ ಆತಂಕವುಂಟುಮಾಡಿ ಇಡೀ ಪರೀಕ್ಷಾ ವ್ಯವಸ್ಥೆಯನ್ನು ಬುಡಮೇಲು ಮಾಡುವ ಕೃತ್ಯವೆಸಗುವುದು. ಅಲ್ಲದೆ, ಇಲಾಖೆಯ ಮೇಲೆ ಅನಾವಶ್ಯಕ ಸಂಶಯ ಹುಟ್ಟು ಹಾಕಲು ಕಾರಣವಾಗುವುದಲ್ಲದೆ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ಮಾರಕ ಉಂಟುಮಾಡುವುದು ಅಪರಾಧವೆಂದು ಪರಿಗಣಿಸಲ್ಪಡುತ್ತದೆ ಎಂದು ತಿಳಿಸಿದ್ದಾರೆ.


 

ಈ ಹಿನ್ನೆಲೆಯಲ್ಲಿ ಇಂತಹ ಪರೀಕ್ಷಾ ದುರ್ವ್ಯವಹಾರಗಳನ್ನು ತಡೆಗಟ್ಟುವ ಸಂಬಂಧ Karnataka Act No.18 of 2017 The Karnataka Education (Amendment) Act, 2017 ರಲ್ಲಿ ಕ್ರಿಮಿನಲ್ ಮೊಕದ್ದಮೆ ಹೂಡಲು ಅವಕಾಶವಿದ್ದಾಗ್ಯೂ ಇಂತಹ ಪ್ರಕರಣಗಳು ಮನರಾವರ್ತಿಯಾಗುತ್ತಿರುವುದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಇಂತಹ ಪರೀಕ್ಷಾ ಅವ್ಯವಹಾರವನ್ನು ತಡೆಗಟ್ಟಲು ಕಠಿಣ ಕ್ರಮವನ್ನು ಕೈಗೊಳ್ಳುವುದು ಸೂಕ್ತವೆಂದು ಪರಿಗಣಿಸಿ ಮೇಲ್ಕಂಡ ಅಧಿನಿಯಮದಲ್ಲಿನ ದಂಡನೆಯು ಕ್ರಿಮಿನಲ್ ಆರೋಪಕ್ಕೆ ಒಳಗಾಗುವುದನ್ನು ಬಿತ್ತರಿಸಿದ್ದು, ಇದರೊಂದಿಗೆ ಆಡಳಿತಾತ್ಮಕವಾಗಿ ಸೂಕ್ತ ಕ್ರಮವಹಿಸಿದಲ್ಲಿ ಇಂತಹ ದುವರ್ತನೆಗಳಿಗೆ ಕಡಿವಾಣ ಹಾಕಿದಂತಾಗುತ್ತದೆಯೆಂದು ಭಾವಿಸಿ • ಕ್ರಿಮಿನಲ್ ಮೊಕದ್ದಮೆಯ ಜೊತೆಗೆ ಇಲಾಖಾ ವಿಚಾರಣೆ ನಡೆಸಿ ಕಠಿಣ ದಂಡನೆ ವಿಧಿಸಲು ಸರ್ಕಾರವು ತೀರ್ಮಾನಿಸಿದೆ ಎಂದಿದ್ದಾರೆ.


 

ಪ್ರಸ್ತಾವನೆಯಲ್ಲಿ ವಿವರಿಸಿದ ಕಾರಣಗಳಿಂದಾಗಿ, ಎಸ್‌ಎಸ್‌ಎಲ್‌ಸಿ, ಪದವಿ ಪೂರ್ವ ಹಾಗೂ ಇಲಾಖೆ ಯಾವುದೇ ಪರೀಕ್ಷೆಗಳಲ್ಲಿನ ದುರ್ವ್ಯವಹಾರಗಳ ಪ್ರಕರಣಗಳಲ್ಲಿ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಪಾಲ್ಗೊಳ್ಳುವ ಮತ್ತು ಸಹಕರಿಸುವ ಯಾವುದೇ ವ್ಯಕ್ತಿಯ ವಿರುದ್ಧ ಕರ್ನಾಟಕ ಶಿಕ್ಷಣ ಕಾಯ್ದೆಯಲ್ಲಿ ವಿಧಿಸಿರುವ ಕ್ರಿಮಿನಲ್‌ ಆರೋಪ ಅಥವಾ ದಂಡ ವಿಧಿಸುವುದರ ಜೊತೆಗೆ ಈ ಕೆಳಕಂಡಂತೆ ಕ್ರಮವಹಿಸಲು ಸಹ ಆದೇಶಿಸಿದ್ದಾರೆ.


 

1.ಸರ್ಕಾರಿ ಇಲಾಖಾ ಅಧಿಕಾರಿ/ಸಿಬ್ಬಂದಿ ವರ್ಗದವರು ಮತ್ತು ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿನ ಬೋಧಕ/ಬೋಧಕೇತರ ಸಿಬ್ಬಂದಿಗಳು ಹಾಗೂ ಇನ್ನಿತರ ಯಾವುದೇ ಸರ್ಕಾರಿ ಸಂಸ್ಥೆಗಳಲ್ಲಿನ ಯಾವುದೇ ವ್ಯಕ್ತಿಯ ವಿರುದ್ಧ ಕರ್ನಾಟಕ ನಾಗರೀಕ ಸೇವಾ (ಅಫೀಲು,ವರ್ಗೀಕರಣ & ಮೇಲ್ಮನವಿ) ನಿಯಮಗಳು 1957ರ ನಿಯಮ 8ರ ಉಪನಿಯಮ (viii)ರಂತೆ ಸೇವೆಯಿಂದ ವಜಾಮಾಡುವ ದಂಡನೆಯನ್ನು ಸೂಕ್ತ ಇಲಾಖಾ ವಿಚಾರಣಾ ಪ್ರಕ್ರಿಯೆಯೊಂದಿಗೆ ಆಯಾ ಸಕ್ಷಮ ಪ್ರಾಧಿಕಾರಿಗಳು ವಿಧಿಸಲು ಕ್ರಮವಹಿಸತಕ್ಕದ್ದು.


 

2. ಉಳಿದಂತೆ ಮೇಲ್ಕಂಡ ರೀತ್ಯಾ ಪರೀಕ್ಷಾ ಅಕ್ರಮದಲ್ಲಿ ಪಾಲ್ಗೊಳ್ಳವವರು ಅನುದಾನ ರಹಿತ ಶಾಲೆಗಳಲ್ಲಿನ ಬೋಧಕ/ಬೋಧಕೇತರ ಸಿಬ್ಬಂದಿಗಳಾಗಿದ್ದಲ್ಲಿ ಅಥವಾ ಬಾಹ್ಯ ವ್ಯಕ್ತಿಗಳಾಗಿದ್ದಲ್ಲಿ ಅಂತಹವರ ವಿರುದ್ಧ Karnataka Act No.18 of 2017 The Karnataka Education (Amendment) Act, 2017 ರನ್ವಯ ಕ್ರಮವಹಿಸತಕ್ಕದ್ದು.


 

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ