Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಈದಗಾ ಗಣೇಶನಿಗೆ ಅದ್ಧೂರಿ ವಿದಾಯ ಮೆರವಣಿಗೆಗೆ ಸಿ.ಟಿ.ರವಿ ಚಾಲನೆ - ಬಿಗಿ ಪೊಲೀಸ್ ಬಂದೋಬಸ್ತ

Advertisement
ಹುಬ್ಬಳ್ಳಿ: -ನಗರದ ಈದಗಾ ( ರಾಣಿ ಚೆನ್ನಮ್ಮ) ಮೈದಾನದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶನ ಮೂರ್ತಿಯ ವಿಸರ್ಜನೆಯ ಅದ್ಧೂರಿ ಮೆರವಣಿಗೆ ಇಂದು ಬೆಳಿಗ್ಗೆ ಆರಂಭವಾಯಿತು.



 

ರಾಣಿ ಚೆನ್ನಮ್ಮ ಮೈದಾನ ಗಜಾನನೋತ್ಸವ ಮಹಾಮಂಡಳ ಅಧ್ಯಕ್ಷ ಸಂಜು ಬಡಸ್ಕರ, ಸ್ವಾಗತ ಸಮಿತಿ ಅಧ್ಯಕ್ಷ ಡಾ.ಚಿಗರುಪಾಟಿ ವಿ.ಎಸ್.ವಿ.ಪ್ರಸಾದ ನೇತೃತ್ವದಲ್ಲಿ ವಿಶೇಷ ಪೂಜಾ ವಿಧಿ ವಿಧಾನಗಳು ಜರುಗಿ ವಿಸರ್ಜನಾ ಮೆರವಣಿಗೆಗೆ ವಿಧಾನ ಪರಿಷತ್ ಸದಸ್ಯ ಮತ್ತುಬಿಜೆಪಿ ಹಿರಿಯ ಮುಖಂಡ ಸಿ.ಟಿ.ರವಿ ಗಣೇಶ ಮೂರ್ತಿಗೆ ಮಾಲಾರ್ಪಣೆ ಮಾಡಿ ಚಾಲನೆ ನೀಡಿದರು. ಶಾಸಕರಾದ ಮಹೇಶ ಟೆಂಗಿನಕಾಯಿ,ಪ್ರದೀಪ ಶೆಟ್ಟರ್, ಮೇಯರ್ ರಾಮಣ್ಣ ಬಡಿಗೇರ, ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಪಾಲಿಕೆ ಸದಸ್ಯರಾದ ರಾಜಣ್ಣ ಕೊರವಿ, ಸಂತೋಷ ಚವ್ಹಾಣ, ಶಿವು ಮೆಣಸಿನಕಾಯಿ, ಮಾಜಿ ಶಾಸಕ ಅಶೋಕ ಕಾಟವೆ, ಮುಖಂಡರಾದ ಮಹೇಂದ್ರ ಕೌತಾಳ ಮುಂತಾದವರು ಇದ್ದರು.

ಪಂಚವಾದ್ಯ, ಡೋಲು, ಜಾಂಝ್, ಡಿಜೆ ಮೇಳಗಳು ಮೆರವಣಿಗೆ ಮೆರಗು ನೀಡಿದ್ದು, ಗಣೇಶ ಮಹಾರಾಜ, ಜೈ ಶ್ರೀರಾಮ, ಜೈ ಜೈ ಶ್ರೀರಾಮ, ಹನುಮಾನ ಮಹಾರಾಜಕೀ ಜೈ ಎಂಬ ಘೋಷಣೆ ಮುಗಿಲು ಮುಟ್ಟಿದವು. ಕಿತ್ತೂರ ರಾಣಿ ಚನ್ನಮ್ಮ ವೃತ್ತ, ರಾಣಿ ಚನ್ನಮ್ಮ ಮೈದಾನ ಭಗವಾಧ್ವಜ, ಕೇಸರಿ ಬಾವುಟಗಳು ಹಾರಾಡುತ್ತಿದ್ದರೆ,ವಿಸರ್ಜನೆ ಹಿನ್ನೆಲೆಯಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ತ ಏರ್ಪಡಿಸಲಾಗಿತ್ತು.

ಬಿಜೆಪಿ, ಆರ್‌ಎಸ್‌ಎಸ್, ಹಿಂದೂ ಜಾಗರಣ ವೇದಿಕೆ, ಶ್ರೀರಾಮ ಸೇನೆ, ವಿಹೆಚ್‌ಪಿ ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳ ಕಾರ್ಯಕರ್ತರು ಹಾಗೂ ಭಕ್ತರು ಪಾಲ್ಗೊಂಡಿದ್ದಾರೆ. ನಗರದ ಪ್ರದೇಶ ಅಷ್ಟೇ ಅಲ್ಲದೆ ಸುತ್ತಮುತ್ತಲಿನ ವಿವಿಧ ಜಿಲ್ಲೆಯ ನೂರಾರ ಜನರು ಭಾಗವಹಿಸಿದ್ದಾರೆ.
ಬೆಳಿಗ್ಗೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ ಸೇರಿ ಅನೇಕ ಗಣ್ಯರು ಈದಗಾ ಗಣೇಶನ ದರ್ಶನ ಪಡೆದು ಮೆರವಣಿಗೆಯಲ್ಲಿ ಪಾಲ್ಗೊಂಡರು. ಶನಿವಾರ ಬೆಳಿಗ್ಗೆ ಬೃಹತ್ ಮೆರವಣಿಗೆಯಲ್ಲಿ ಮೂರುಸಾವಿರಮಠದಿಂದ ಗಣೇಶನ ವಿಗ್ರಹವನ್ನು ತಂದು ಸ್ಥಾಪಿಸಲಾಗಿತ್ತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಹಿತ ಅನೇಕ ಗಣ್ಯರು ಪಾಲ್ಗೊಂಡಿದ್ದರು.

ಮೈದಾನದಿಂದ ಹೊರ ಬಂದ ಗಣೇಶ ಮೂರ್ತಿಯ ಮೆರವಣಿಗೆ ಇಂದಿರಾಗಾಜಿನ ಮನೆಯ ವಿಸರ್ಜನೆ ಬಾವಿಗೆ ತೆರಳಲು ಮೂರು ಗಂಟೆಗೂ ಹೆಚ್ಚು ಕಾಲ ತೆಗೆದುಕೊಳ್ಳಲಿದ್ದು ಸಂಜೆ ೪ರೊಳಗೆ ವಿಸರ್ಜನೆ ಕಾರ್ಯ ನಡೆಯಬಹುದಾಗಿದೆ.ಮೆರವಣಿಗೆಯ ಹಿನ್ನೆಲೆಯಲ್ಲಿ ನಗರದ ಮುಖ್ಯ ರಸ್ತೆಗಳಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು.

 ವರದಿ:- ಸುಧೀರ್ ಕುಲಕರ್ಣಿ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ