LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಿ: ಅಕ್ಕಮ್ಮ 

Advertisement

ಮಾನ್ವಿ : ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಯಾಗಬೇಕಾದರೆ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಕಲ್ಯಾಣ ಕರ್ನಾಟಕ ಉತ್ಸವವನ್ನು ಪ್ರತಿಯೊಬ್ಬರೂ ವಿಜೃಂಭಣೆಯಿಂದ ಆಚರಿಸಬೇಕು ಎಂದು ವಿಶ್ವ ಚೇತನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು ಕರೆ ನೀಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಓಂ ಮಂಡಳಿ ಶಿವಶಕ್ತಿ ಸೇವಾ ಸಂಸ್ಥಾನದ ಮಾನ್ವಿ ಶಾಖೆಯ ಸಂಚಾಲಕರಾದ ಅಕ್ಕಮ್ಮನವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿ, ಪ್ರತಿಯೊಬ್ಬರೂ ದೇಶಪ್ರೇಮವನ್ನು ಬೆಳೆಸಿಕೊಳ್ಳಬೇಕು. ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವನ್ನು ಬೆಳೆಸಿಕೊಂಡು ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು ಎಂದು ತಿಳಿಸಿದರು.
ಶಿಕ್ಷಕಿ ಶಾರದಾ ವಿಶ್ವಕರ್ಮ ಮಾತನಾಡಿ, ವಿಶ್ವಕರ್ಮರು ವಿಶ್ವಕರ್ಮ ಸಮಾಜದ ಗುರುಗಳಾಗಿದ್ದು, ದೇವ ಶಿಲ್ಪಿಗಳಾಗಿ ಅವರು ಮಾಡಿದ ಮಹತ್ವದ ಕಾರ್ಯಗಳನ್ನು ಸ್ಮರಿಸಿದರು. ಶಿಕ್ಷಕಿ ಅಂಬುಜಾ ಅವರು ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸರ್ಕಾರದಿಂದ ದೊರೆತಿರುವ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಈ ಸೌಲಭ್ಯಗಳನ್ನು ಅರ್ಹರು ಸಮರ್ಪಕವಾಗಿ ಬಳಸಿಕೊಂಡು ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಹೇಳಿದರು.
ತಾಲೂಕು ಖಾಸಗಿ ಶಾಲಾ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ವತಿಯಿಂದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಶ್ರೀಮತಿ ಸುವರ್ಣ ಅವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ಶಿಕ್ಷಕಿ ಸುವರ್ಣ ಪ್ರಾರ್ಥನೆ ನೆರವೇರಿಸಿದರು. ಶಿಕ್ಷಕಿ ಆಯಿಷಾ ಸ್ವಾಗತಿಸಿದರು. ವೇದಿಕೆಯಲ್ಲಿ ಕಾರ್ಯದರ್ಶಿ ಗೀತಾ ಹಿರೇಮಠ ಹಾಗೂ ಸಂಸ್ಥಾಪಕ ಅಧ್ಯಕ್ಷ ಎಂ.ಎಂ. ಹಿರೇಮಠ ಉಪಸ್ಥಿತರಿದ್ದರು.
ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಶಿಕ್ಷಕಿ ಬೂಷಿರಾ ವಂದಿಸಿದರು.
ವರದಿ : ಆಂಜನೇಯ ನಸಲಾಪುರ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವುಬೆಳಗಾವಿಯಲ್ಲಿ ಅಕ್ರಮ ಪೆಟ್ರೋಲ್, ಡೀಸೆಲ್ ದಂಧೆ ಜಾಲ ಭೇದಿಸಿದ ಸಿಸಿಬಿ: ಇಬ್ಬರ ಬಂಧನ, ಲಕ್ಷಾಂತರ ರೂ. ಮೌಲ್ಯದ ಇಂಧನ ಜಪ್ತಿ!ಅವರಾದಿಯಲ್ಲಿ ಆಸ್ತಿಗಾಗಿ ತಂದೆ-ಮಗಳು ಕೊಲೆ , ಮೂವರು ಆರೋಪಿಗಳ ಬಂಧನಕಾರಾಗೃಹ ಇಲಾಖೆಯಲ್ಲಿ 576 ಹುದ್ದೆಗಳಿಗೆ ಅರ್ಜಿ ಆಹ್ವಾನ : ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ