LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಧಾರವಾಡದಲ್ಲಿ ಸಿಲಿಂಡರ್ ಸ್ಪೋಟ : ಸ್ಫೋಟದ ತೀವ್ರತೆಗೆ ರಸ್ತೆಗೆ ಬಿದ್ದ ಪಾತ್ರೆ-ಪಗಡೆಗಳು

Advertisement

ಧಾರವಾಡ: ಸಾಂಸ್ಕೃತಿಕ ನಗರಿ ಧಾರವಾಡದ (Dharwad) ಜನ್ನತ್ ನಗರದಲ್ಲಿ ತಡರಾತ್ರಿ ಭೀಕರ ದುರಂತವೊಂದು ಸಂಭವಿಸಿದ್ದು, ಗ್ಯಾಸ್ ಸಿಲಿಂಡರ್ (Cylinder blast) ಸ್ಫೋಟಗೊಂಡು ಇಡೀ ಗಲ್ಲಿಯೇ ಬೆಚ್ಚಿಬಿದ್ದಿದೆ.

ಮನೆಯೊಂದರಲ್ಲಿ ಗ್ಯಾಸ್ ಸೋರಿಕೆಯಾದ (Gas Leak) ಪರಿಣಾಮ ಈ ದುರಂತ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಮನೆಯಲ್ಲಿದ್ದ ಪೀಠೋಪಕರಣಗಳು ಹಾಗೂ ಪಾತ್ರೆ-ಪಗಡಗಳು ಛಿದ್ರಗೊಂಡು ರಸ್ತೆಗೆ ಬಿದ್ದಿವೆ.

ಸಿಲಿಂಡರ್ ಸ್ಫೋಟಗೊಂಡ ರಭಸ ಮತ್ತು ಅದರ ತೀವ್ರತೆ ಸಮೀಪದ ಮನೆಯ ಸಿಸಿಟಿವಿ (CCTV) ಕ್ಯಾಮರಾದಲ್ಲಿ ಸಲ್ಲಿಕೆಯಾಗಿದೆ.

ಬೆಂಕಿಯ ಜ್ವಾಲೆ ಹಾಗೂ ಶಬ್ದದ ತೀವ್ರತೆಗೆ ಜನ್ನತ್ ನಗರದ ನಿವಾಸಿಗಳು ಭಯಭೀತರಾಗಿ ರಸ್ತೆಗೆ ಓಡಿ ಬಂದಿದ್ದಾರೆ. ಗ್ಯಾಸ್ ಲೀಕ್ ಆಗಿದ್ದೇ ಈ ಭೀಕರ ಅವಘಡಕ್ಕೆ ಮೂಲ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಘಟನೆ ನಡೆದ ವೇಳೆ ರಾಜಾಸಾಬ್ ನೀರಲಕಟ್ಟಿ ಎಂಬ ಯುವಕ ಮನೆಯಲ್ಲಿ ಗಾಢ ನಿದ್ದೆಯಲ್ಲಿದ್ದ. ಏಕಾಏಕಿ ಸಂಭವಿಸಿದ ಸ್ಫೋಟದ ರಭಸಕ್ಕೆ ಯುವಕನಿಗೆ ತೀವ್ರ ಸ್ವರೂಪದ ಸುಟ್ಟ ಗಾಯಗಳಾಗಿದ್ದು, ದೇಹದ ಹಲವು ಭಾಗಗಳು ಜಖಂಗೊಂಡಿವೆ.

ಕಿಮ್ಸ್ ಆಸ್ಪತ್ರೆಗೆ ಗಾಯಾಳು ರವಾನೆ!

ಸ್ಫೋಟದ ಸದ್ದು ಕೇಳಿ ಧಾವಿಸಿ ಬಂದ ಸ್ಥಳೀಯರು, ಬೆಂಕಿಯ ನಡುವೆಯೂ ಸಾಹಸಸಿಂಹರಂತೆ ಕಾರ್ಯನಿರ್ವಹಿಸಿ ರಕ್ತಸ್ರಾವದಿಂದ ಬಳಲುತ್ತಿದ್ದ ರಾಜಾಸಾಬ್‌ನನ್ನು ರಕ್ಷಿಸಿದ್ದಾರೆ.

ಕೂಡಲೇ ಆತನನ್ನು ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಸ್ತುತ ಯುವಕನಿಗೆ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಿಳಾ ಏಸಿಯಾ ಕಪ್: ನಾಳೆ ಭಾರತ-ಪಾಕ್ ಪಂದ್ಯ ಸೆ. 9 ರಂದು ಪಾಕಿಸ್ತಾನ- ಇಂಗ್ಲೆಂಡ್ ತೃತೀಯ ಟೆಸ್ಟ್ ಶೀಘ್ರದಲ್ಲೇ ಬರಪೀಡಿತ ತಾಲೂಕುಗಳ 2ನೇ ಪಟ್ಟಿ ಘೋಷಣೆ: ಡಿ.ಕೆ.ಶಿವಕುಮಾರ್ ಶೀಘ್ರದಲ್ಲಿಯೇ ಬಸ್ ಟಿಕೆಟ್ ದರ ಏರಿಕೆ: ಸಚಿವ ಬೈರತಿ ಸುರೇಶ್ ಸುಳಿವು ಚೊಕ್ಕಸಂದ್ರದ ಶ್ರೀ ಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ, ದೇವರ ದರ್ಶನ ಪಡೆದ ನಾಗರಾಜ್ ಯಾದವ್ ದಂಪತಿಅಬ್ಬಿಗೆರೆಯಲ್ಲಿ ಶ್ರೀ ಕೃಷ್ಣ ಯಾದವ ಸೇವಾ ಸಮಿತಿ ವತಿಯಿಂದ  ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಗೃಹಲಕ್ಷ್ಮಿ ಬಡಾವಣೆಯಲ್ಲಿ ವಿವಿಧ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ:  ಶಾಸಕ ಎಸ್ ಮುನಿರಾಜುಕಿರಿಯ ಕ್ರಿಕೆಟ್ ಅಟಗಾರ್ ರೋಹಿತ್ ಯಾದವ್ ಗೆ 2 ವರ್ಷ ನಿಷೇಧ ಹೇರಿದ ಬಿಸಿಸಿಐ ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಡಿ ಕೆ ಶಿವಕುಮಾರದೌರ್ಜನ್ಯ ವಿರೋಧಿ ಸಂಘಟನೆಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಸಚಿವರಿಗೆ ಮನವಿ