ಆಂಧ್ರಪ್ರದೇಶದ ತಿರುಮಲದಲ್ಲಿರುವ ಪ್ರಸಿದ್ಧ ತಿರುಮಲ ವೆಂಕಟೇಶ‍್ವರ ದೇವಾಲಯಕ್ಕೆ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿ ಶ್ರೀ ವೆಂಕಟೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಅವರೊಂದಿಗೆ ಪತ್ನಿ ಉಷಾ ಶಿವಕುಮಾರ್, ಅಳಿಯ, ಮಗ ಕೂಡ ಇದ್ದರು.
ಆಂಧ್ರ ಪ್ರದೇಶದ ಪ್ರಸಿದ್ಧ ತಿರುಪತಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಇಂದು ಬೆಳಿಗ್ಗೆ ಕುಟುಂಬ ಸಮೇತರಾಗಿ ಭೇಟಿ ನೀಡಿದ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ತಿಮ್ಮಪ್ಪನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಕುಟುಂಬ ಸಮೇತ ದೇವಾಲಯಕ್ಕೆ ಆಗಮಿಸಿದ ಡಿ.ಕೆ. ಶಿವಕುಮಾರ್, ಇತ್ತೀಚೆಗೆ ನಡೆದ ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ದೊರೆತ ರಾಜಕೀಯ ಯಶಸ್ಸಿನ ಹಿನ್ನೆಲೆಯಲ್ಲಿ ಶ್ರೀವಾರಿ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಈ ವೇಳೆ ರಾಜ್ಯದ ಅಭಿವೃದ್ಧಿ, ಜನರ ಸುಖ-ಶಾಂತಿ ಹಾಗೂ ಉತ್ತಮ ಮಳೆಯಾಗಲೆಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ ಅವರು, ದೇವಸ್ಥಾನದ ಆಡಳಿತ ಮತ್ತು ವ್ಯವಸ್ಥೆಯನ್ನು ಮೆಚ್ಚುಗೆ ವ್ಯಕ್ತಪಡಿಸಿದರು. ದೇವಾಲಯದ ಅಧಿಕಾರಿಗಳು ಡಿ.ಕೆ. ಶಿವಕುಮಾರ್ ದಂಪತಿಗೆ ಸಾಂಪ್ರದಾಯಿಕ ಗೌರವ ನೀಡಿ ಶ್ರೀವಾರಿ ತೀರ್ಥ-ಪ್ರಸಾದ ವಿತರಿಸಿದರು.


