ಬೆಂಗಳೂರು: ಅಪಾರ ದೈವ ಭಕ್ತರಾಗಿರುವ ಡಿ.ಕೆ ಶಿವಕುಮಾರ್ ಅವರು ಬೆಂಗಳೂರಿನ ಅಣ್ಣಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮೇಲೆ ಪೂಜಾ ಕಾರ್ಯಕ್ರಮಗಳಲ್ಲಿ ಡಿಕೆಶಿ ಅವರು ಹೆಚ್ಚು ಬ್ಯುಸಿ ಆಗುತ್ತಿದ್ದಾರೆ.
ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮೆಜೆಸ್ಟಿಕ್‌ನಲ್ಲಿರುವ ಬೆಂಗಳೂರಿನ ನಗರದೇವತೆ ಅಣ್ಣಮ್ಮ ದೇವಿಗೆ ಜೂನ್ 5ರ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಸಣ್ಣ ಚೀಲವೊಂದರಲ್ಲಿ ದಕ್ಷಿಣೆ ತಂದು, ದೇವರಿಗೆ ಅರ್ಪಿಸಿದರು. ಜೊತೆಗೆ 500 ರೂ. ನೋಟನ್ನೂ ಇಟ್ಟರು, ವಿಶೇಷ ಪೂಜೆ ಸಲ್ಲಿಸಿದರು. ಇದೀಗ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ರಾಜ್ಯದ ಮುಖ್ಯಮಂತ್ರಿಯಾದರೆ, ಅಣ್ಣಮ್ಮದೇವಿ ಸನ್ನಿಧಾನಕ್ಕೆ ಬಂದು ಹರಕೆ ತೀರಿಸುವುದಾಗಿ ಡಿ.ಕೆ ಶಿವಕುಮಾರ್ ಅವರು ಹರಕೆ ಹೊತ್ತುಕೊಂಡಿದ್ದರು. ಅದರಂತೆ ಇಂದು ಡಿ.ಕೆ ಶಿವಕುಮಾರ್ ಅವರು ಹರಕೆ ತೀರಿಸಿದ್ದಾರೆ.
ಉಪ್ಪು, ಮೊಸರು ಹಾಕಿ, ಸುಃಖ, ಶಾಂತಿ, ನೆಮ್ಮದಿ ನೀಡುವಂತೆ ದೇವರಲ್ಲಿ ಪ್ರಾರ್ಥಿಸಿದ್ದಾರೆ. ತಾಯಿ ಅಣ್ಣಮ್ಮನಿಗೆ ನಮಿಸಿ ಆಶೀರ್ವಾದ ಪಡೆದುಕೊಂಡರು. ಇದೇ ಸಂದರ್ಭದಲ್ಲಿ ಇಲ್ಲಿನ ಬಿಸಿಲು ಮಾರಮ್ಮನಿಗೂ ಉಪ್ಪು, ಮೊಸರು ಹಾಕಿ ಡಿ.ಕೆ ಶಿವಕುಮಾರ್ ಅವರು ನಮಿಸಿದ್ದಾರೆ.


