Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹುಬ್ಬಳ್ಳಿಯಲ್ಲಿ ದತ್ತಾತ್ರೇಯ ಮೂರ್ತಿಯ ಕೈಗಳನ್ನು ಕತ್ತರಿಸಿ ದುಷ್ಕೃತ್ಯ : ಜೋಶಿ ಆಕ್ರೋಶ 

Advertisement
ಹುಬ್ಬಳ್ಳಿ : ಹುಬ್ಬಳ್ಳಿ ದೇಶಪಾಂಡೆ ನಗರದಲ್ಲಿ ದತ್ತಾತ್ರೇಯ ವಿಗ್ರಹ ಭಗ್ನಗೊಳಿಸಿದ ಕಿಡಿಗೇಡಿಗಳನ್ನು ಶೀಘ್ರ ಬಂಧಿಸುವಂತೆ ನಗರ ಪೊಲೀಸ್ ಕಮಿಷನರ್‌ಗೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಸೂಚಿಸಿದ್ದಾರೆ.

ದೇಶಪಾಂಡೆ ನಗರದ ದತ್ತಾತ್ರೇಯ ದೇವಸ್ಥಾನದಲ್ಲಿನ ಈ ಘಟನೆ ಅಕ್ಷಮ್ಯ ಅಪರಾಧ ಎಂದು ಖಂಡಿಸಿರುವ ಸಚಿವರು, ಇತ್ತೀಚೆಗೆ ಹಲವೆಡೆ ಹಿಂದೂಗಳ ನಂಬಿಕೆಗೆ ಧಕ್ಕೆ ತರುವಂಥ ದುಷ್ಕೃತ್ಯಗಳು ಘಟಿಸುತ್ತಲೇ ಇದ್ದು, ಸರ್ಕಾರದ ಬಿಗಿ ಆಡಳಿತ ಇಲ್ಲದಿರುವುದೇ ಇದಕ್ಕೆಲ್ಲ ಕಾರಣ ಆಕ್ರೋಶ ಹೊರ ಹಾಕಿದ್ದಾರೆ.

ದತ್ತಾತ್ರೇಯ ಮೂರ್ತಿಯ ಕೈಗಳನ್ನು ಕತ್ತರಿಸಿ ದುಷ್ಕೃತ್ಯ ಎಸಗಿರುವ ಸಮಾಜಘಾತಕರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮಕ್ಕೆ ಗುರಿಪಡಿಸಬೇಕು ಎಂದು ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹಿಸಿದ್ದಾರೆ.

ನಾಡಿನೆಲ್ಲೆಡೆ ದಸರಾ ಮಹೋತ್ಸವ ಆಚರಿಸುತ್ತಿದ್ದು, ಜನತೆ ವಿಶೇಷ ಪೂಜೆ-ಪುನಸ್ಕಾರ, ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತೊಡಗಿದ್ದಾರೆ. ಆದರೆ, ಕಿಡಿಗೇಡಿಗಳು ದುಷ್ಕೃತ್ಯ ನಡೆಸಿ ಹಬ್ಬಗಳಲ್ಲಿ ಧಾರ್ಮಿಕ ಆಚರಣೆಗೆ ಭಂಗ ತಂದು ಸಮಾಜದಲ್ಲಿ ಶಾಂತಿ ಕದಡುತ್ತಿದ್ದಾರೆ. ಸರ್ಕಾರ ಎಚ್ಚೆತ್ತುಕೊಳ್ಳಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ