LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಧಾರವಾಡ ಮಹಾನಗರ ಪಾಲಿಕೆಯ ಮಾಜಿ ಸದಸ್ಯೆಯ ಮಗಳು ಅನುಮಾನಾಸ್ಪದವಾಗಿ ಸಾವು 

Advertisement
ಧಾರವಾಡ: ಧಾರವಾಡ ಮಹಾನಗರ ಪಾಲಿಕೆಯ ಮಾಜಿ ಸದಸ್ಯೆಯ ಮಗಳೊಬ್ಬರು ತಮ್ಮ ಮನೆಯಲ್ಲಿಯೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಮೃತ ಮಹಿಳೆಯನ್ನು ಸವಿತಾ ಹೊಂಗಲಮಠ (40) ಎಂದು ಗುರುತಿಸಲಾಗಿದ್ದು, ಈ ಸಾವು ಇದೀಗ ಕೊಲೆ ಎಂಬ ಗಂಭೀರ ಆರೋಪಕ್ಕೆ ಗುರಿಯಾಗಿದೆ.

ಘಟನೆಯ ವಿವರ:

ಸವಿತಾ ಹೊಂಗಲಮಠ ಅವರು ಕಳೆದ ಕೆಲವು ವರ್ಷಗಳಿಂದ ಸಂಸಾರ ನಡೆಸುತ್ತಿದ್ದು, ಗೃಹಿಣಿಯಾಗಿದ್ದರು. ಆದರೆ, ಇಂದು ಅವರ ಮನೆಯಲ್ಲಿಯೇ ಶವವಾಗಿ ಪತ್ತೆಯಾಗಿದ್ದಾರೆ.

ಮೇಲ್ನೋಟಕ್ಕೆ ಇದು ಆತ್ಮಹತ್ಯೆಯಂತೆ ಕಂಡರೂ, ಮೃತಳ ಕುಟುಂಬಸ್ಥರು ಇದನ್ನು ವ್ಯವಸ್ಥಿತವಾಗಿ ನಡೆದ ಕೊಲೆ ಎಂದು ದೂರಿದ್ದಾರೆ. ಸವಿತಾ ಅವರ ತಾಯಿ ಈ ಹಿಂದೆ ಮಹಾನಗರ ಪಾಲಿಕೆಯ ಸದಸ್ಯೆಯಾಗಿದ್ದು, ಇವರ ಕುಟುಂಬದ ಮೇಲೆ ನಡೆದಿರುವ ಈ ಆಘಾತಕಾರಿ ಘಟನೆ ಧಾರವಾಡದಲ್ಲಿ ಸಂಚಲನ ಮೂಡಿಸಿದೆ.

ಕೊಲೆ ಮಾಡಿ ನೇಣು ಹಾಕಲಾಗಿದೆ ಎಂಬ ಸಂಶಯ:

ಘಟನೆಯಲ್ಲಿ ಮತ್ತೊಂದು ಅನುಮಾನಾಸ್ಪದ ಅಂಶವೆಂದರೆ, ಪೊಲೀಸರು ಸ್ಥಳಕ್ಕೆ ಬರುವ ಮೊದಲೇ ಮನೆಯವರು ಸವಿತಾ ಅವರ ದೇಹವನ್ನು ಕೆಳಗಿಳಿಸಿದ್ದರು. "ಆಕೆಯನ್ನ ಕೊಲೆ ಮಾಡಿ ನಂತರ ಅದನ್ನು ಆತ್ಮ*ಹತ್ಯೆ ಎಂದು ಬಿಂಬಿಸಲು ಫ್ಯಾನಿಗೆ ನೇಣು ಹಾಕಲಾಗಿದೆ.

ಪೊಲೀಸರು ಬಂದು ಪರಿಶೀಲಿಸುವ ಮೊದಲೇ ಶವವನ್ನು ಯಾಕೆ ಇಳಿಸಲಾಯಿತು?" ಎಂಬುದು ಮೃತರ ಕುಟುಂಬಸ್ಥರ ಪ್ರಶ್ನೆಯಾಗಿದೆ. ಪತಿಯ ಕಿರುಕುಳವೇ ಸವಿತಾ ಸಾವಿಗೆ ನೇರ ಕಾರಣ ಎಂದು ಅವರು ದೂರಿದ್ದಾರೆ.

ಪೊಲೀಸ್ ತನಿಖೆ:

ವಿಷಯ ತಿಳಿಯುತ್ತಿದ್ದಂತೆಯೇ ಧಾರವಾಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿಯ ನಂತರ ಸಾವಿನ ಅಸಲಿ ಕಾರಣ ಹೊರಬೀಳಲಿದೆ.

ಸದ್ಯಕ್ಕೆ ಕುಟುಂಬಸ್ಥರ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ಪತಿಯನ್ನು ವಿಚಾರಣೆಗೊಳಪಡಿಸುವ ಸಾಧ್ಯತೆಯಿದೆ. ಜಯನಗರ ಕಾಲೋನಿಯ ನಿವಾಸಿಗಳು ಈ ಘಟನೆಯಿಂದ ಆತಂಕಗೊಂಡಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ