Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರೋಗ್ಯ ಕೇಂದ್ರಕ್ಕೆ ದಿಢೀರ  ಭೇಟಿ ನೀಡಿದ ಡಿಸಿ

Advertisement
ವಿಜಯಪುರ: ಜಿಲ್ಲೆಯ ಚಡಚಣ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಮರ್ಪಕವಾಗಿ ಚಿಕಿತ್ಸೆ, ವೈದ್ಯಕೀಯ ಉಪಚಾರ ಒದಗಿಸುತ್ತಿರುವ ಕುರಿತು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ತಾಲೂಕಾ ಮಟ್ಟದ ಆಸ್ಪತ್ರೆ ಮೇಲ್ದರ್ಜೆಗೇರಿಸುವಂತೆ ಜಿಲ್ಲಾಧಿಕಾರಿಗಳಲ್ಲಿ ಮನವಿಯ ಕುರಿತು ಸರಕಾರಕ್ಕೆ ಗಮನಕ್ಕೆ ತಂದು ಕ್ರಮ ವಹಿಸಲಾಗುವುದು ಎಂದು ಹೇಳಿದರು.

ಬಿಸಿಎಂ ಹಾಸ್ಟೇಲ್‍ಗೆ ಭೇಟಿ ನೀಡಿ ವಸತಿ ನಿಲಯದಲ್ಲಿರುವ ಮಕ್ಕಳಿಗೆ ಸರಿಯಾದ ಸಮಯಕ್ಕೆ ನಿಗದಿತ ಆಹಾರ ಪೂರೈಕೆ, ಅಗತ್ಯ ಸೌಲಭ್ಯ ಒದಗಿಸುತ್ತಿರುವ ಕುರಿತು ಮಕ್ಕಳ ಪಾಲಕರಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಮಕ್ಕಳಿಗೆ ಗುಣಮಟ್ಟದ ಆಹಾರ, ಶುದ್ಧ ಕುಡಿಯುವ ನೀರು ಒದಗಿಸಬೇಕು. ಯಾವುದೇ ದೂರುಗಳಿಗೆ ಆಸ್ಪದ ನೀಡದೆ ಸಮರ್ಪಕವಾಗಿ ವಸತಿ ನಿಲಯ ನಿರ್ವಹಣೆ ಮಾಡುವಂತೆ ಅವರು ಸೂಚನೆ ನೀಡಿದರು.

ಚಡಚಣ ತಾಲೂಕಾ ಕಚೇರಿಯಲ್ಲಿ ಭೂಮಿ ಕೇಂದ್ರಕ್ಕೆ ಭೇಟಿ ನೀಡಿದ ಅವರು ಹಕ್ಕು ಬದಲಾವಣೆ, ಜೆ ನಮೂನೆಗಳು 8ದಿನಗಳಲ್ಲಿ ಮತ್ತು ನೋಟಿಸ್ ರಹಿತ ಹಕ್ಕು ಬದಲಾವಣೆಗಳು 3 ದಿನಗಳಲ್ಲಿ ಹಾಗೂ ಪೌತಿ ಖಾತೆಗಳು, ಇ-ಪೌತಿ ತಂತ್ರಾಂಶದಲ್ಲಿ ಅಳವಡಿಸಲಾಗಿರುವ ಕುರಿತು ಶಿರಸ್ತೇದಾರ ಆರ್.ಎಸ್.ಚವ್ಹಾಣ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.

ಚಡಚಣ ಪಟ್ಟಣದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಮಕ್ಕಳಿಗೆ ಪೌಷ್ಠಿಕ ಆಹಾರ ಸಮರ್ಪಕವಾಗಿ ಪೂರೈಕೆ ಮಾಡಬೇಕು. ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಕಾರ್ಯನಿರ್ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ನಂತರ ತಾಲೂಕಾ ತಹಶೀಲ್ದಾರ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಕಚೇರಿಯ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಿ ಸಾರ್ವಜನಿಕರಿಗೆ ನಿಗದಿತ ಸಮಯದಲ್ಲಿ ಕೆಲಸಗಳನ್ನು ಮಾಡಿಕೊಡಬೇಕು. ನಿಗದಿತ ಅವಧಿಯಲ್ಲಿ ಕಡತಗಳನ್ನು ವಿಲೇವಾರಿ ಮಾಡಬೇಕು. ಸಾರ್ವಜನಿಕರ ದೂರುಗಳಿಗೆ ಸ್ಪಂದಿಸಿ ಸಕಾಲದಲ್ಲಿ ಪರಿಹಾರ ಒದಗಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ