Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಸುವನ್ನು 'ರಾಷ್ಟ್ರೀಯ ಪ್ರಾಣಿ' ಎಂದು ಘೋಷಿಸಿ : ಮುಸ್ಲಿಂ ಸಂಘಟನೆಗಳ ಆಗ್ರಹ

Advertisement

ಹಾವೇರಿ : ಹಸುವನ್ನು 'ರಾಷ್ಟ್ರೀಯ ಪ್ರಾಣಿ' ಎಂದು ಘೋಷಿಸಬೇಕೆಂದು ಮುಸ್ಲಿಂ ಸಂಘಟನೆಗಳು ಮತ್ತು ಮುಖಂಡರು ಪ್ರಬಲವಾಗಿ ಆಗ್ರಹಿಸಿದ್ದಾರೆ.

ಗೋಹತ್ಯೆ ತಡೆ ಮತ್ತು ಕೋಮು ಸೌಹಾರ್ದತೆಯನ್ನು ಕಾಪಾಡುವ ನಿಟ್ಟಿನಲ್ಲಿ, ಹಸುವನ್ನು 'ರಾಷ್ಟ್ರೀಯ ಪ್ರಾಣಿ' ಎಂದು ಘೋಷಿಸಬೇಕೆಂದು ಆಗ್ರಹಿಸಿ ಹಾನಗಲ್‌ನ ಮುಸ್ಲಿಂ ಸಂಘಟನೆಗಳು ಮತ್ತು ಮುಖಂಡರು ತಹಶೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಗೋರಕ್ಷಣೆ ಹೆಸರಿನಲ್ಲಿ ನಡೆಯುತ್ತಿರುವ ನೈತಿಕ ಪೊಲೀಸ್‌ಗಿರಿ ಮತ್ತು ಗುಂಪು ಹತ್ಯೆಗಳನ್ನು ತಡೆಯಲು ಈ ಕ್ರಮ ಅಗತ್ಯ ಎಂದು ಅವರು ಪ್ರತಿಪಾದಿಸಿದ್ದಾರೆ.

ಹಾವೇರಿ ಜಿಲ್ಲೆ ಹಾನಗಲ್ ನಲ್ಲಿ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿ ಹಾನಗಲ್ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಿದ್ದಾರೆ. ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿದರೆ ಕೋಮು ಸಂಘರ್ಷಗಳು ಹಾಗೂ ಗುಂಪು ಹತ್ಯೆಗಳನ್ನು ತಡೆಯಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಗೋರಕ್ಷಣೆ ಹೆಸರಿನಲ್ಲಿ ಹಿಂದೂ ಪರ ಸಂಘಟನೆಯಿಂದ ಹಲವು ಕಡೆ ನೈತಿಕ ಪೊಲೀಸ್ ಗಿರಿ ನಡೆಯುತ್ತಿದೆ. ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿದರೆ ಹೆಚ್ಚಿನ ಒತ್ತು ಸಿಗಲಿದೆ ಎಂದು ತಹಶೀಲ್ದಾರ್ ಮೂಲಕ ಮುಸ್ಲಿಂ ಮುಖಂಡರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಗೋಹತ್ಯೆ ನಿಷೇಧಿಸುವ ಯಾವುದೇ ಪ್ರಸ್ತಾವನೆ ಇಲ್ಲ

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವ ಅಥವಾ ದೇಶಾದ್ಯಂತ ಗೋಹತ್ಯೆಯನ್ನು ನಿಷೇಧಿಸುವ ಯಾವುದೇ ಪ್ರಸ್ತಾವನೆಯು ಕೇಂದ್ರ ಸರ್ಕಾರದ ಪರಿಗಣನೆಯಲ್ಲಿಲ್ಲ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಇತ್ತೀಚೆಗಷ್ಟೇ ಸ್ಪಷ್ಟಪಡಿಸಿದ್ದಾರೆ. 

ವಿವಿಧ ಸಂಘಟನೆಗಳು ಮತ್ತು ವ್ಯಕ್ತಿಗಳಿಂದ ಇಂತಹ ಬೇಡಿಕೆಗಳು ನಿರಂತರವಾಗಿ ಕೇಳಿಬರುತ್ತಿವೆ ಮತ್ತು ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗಳೂ ನಡೆಯುತ್ತಿವೆ ಎಂಬುದನ್ನು ಸಚಿವರು ಒಪ್ಪಿಕೊಂಡಿದ್ದಾರೆ.

ಆದರೆ, ಸದ್ಯಕ್ಕೆ ಅಂತಹ ಯಾವುದೇ ವಿಷಯವು ಕೇಂದ್ರ ಸಚಿವ ಸಂಪುಟದ ಮುಂದೆ ಬಾಕಿ ಇಲ್ಲ ಅಥವಾ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆ ಪ್ರಾರಂಭವಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ರಾಜ್ಯಗಳ ವ್ಯಾಪ್ತಿ: ಗೋಹತ್ಯೆಗೆ ಸಂಬಂಧಿಸಿದ ಕಾನೂನುಗಳು ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿರುತ್ತವೆ ಎಂದು ಸಚಿವರು ವಿವರಿಸಿದ್ದಾರೆ.

ರಾಜ್ಯಗಳು ತಮ್ಮದೇ ಆದ ಸಂದರ್ಭ ಮತ್ತು ಅವಶ್ಯಕತೆಗಳ ಆಧಾರದ ಮೇಲೆ ಅಂತಹ ವಿಷಯಗಳಲ್ಲಿ ಸ್ವತಂತ್ರವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತವೆ ಎಂದು ಅವರು ಹೇಳಿದ್ದಾರೆ.

ಗೋವಿಗೆ ರಾಷ್ಟ್ರೀಯ ಪ್ರಾಣಿಯ ಸ್ಥಾನಮಾನ ನೀಡಬೇಕು ಮತ್ತು ರಾಷ್ಟ್ರವ್ಯಾಪಿ ಗೋಹತ್ಯೆ ನಿಷೇಧ ಹೇರಬೇಕು ಎಂದು ಅನೇಕ ಹಿಂದೂ ಗುಂಪುಗಳು ಮತ್ತು ಇತ್ತೀಚೆಗೆ ಕೆಲವು ಮುಸ್ಲಿಂ ಸಂಘಟನೆಗಳೂ ಒತ್ತಾಯಿಸುತ್ತಿವೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಟೆಸ್ಟ್ ಕ್ರಿಕೆಟ್: ಬೃಹತ್ ಮೊತ್ತದತ್ತ ಭಾರತ ದಾಪುಗಾಲುಭಾರತ ಟ್ವೆಂಟಿ-೨೦ ತಂಡಕ್ಕೆ ವೈಭವ್ ಸೂರ್ಯವಂಶಿಹಸುವನ್ನು 'ರಾಷ್ಟ್ರೀಯ ಪ್ರಾಣಿ' ಎಂದು ಘೋಷಿಸಿ : ಮುಸ್ಲಿಂ ಸಂಘಟನೆಗಳ ಆಗ್ರಹಪಂಚಾಯಿತಿ ಚುನಾವಣೆಯಲ್ಲೂ ಸ್ಪರ್ಧಿಸದೇ ಇದ್ದ ಮೋದಿ ಸಿಎಂ ಮಾಡಿದ್ಯಾರು? : ಬಿ. ಕೆ ಹರಿಪ್ರಸಾದ್ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು ಬಿಹಾರದ ಪ್ಲಂಬರ್ ಅಕೌಂಟ್ ಗೆ ಬಂತು 294 ಕೋಟಿ ರೂಪಾಯಿಜಿಪಂ, ತಾಪಂ ಚುನಾವಣೆ : ಕ್ಷಮೆಯಾಚಿಸಿ, 8 ವಾರಗಳ ಹೆಚ್ಚುವರಿ ಕಾಲಾವಕಾಶ ಕೋರಿದ ರಾಜ್ಯ ಸರ್ಕಾರ ಪ್ರೇಯಸಿಯ ಅಗಲಿಕೆಯನ್ನು ತಡೆಯಲಾರದೆ, ಆಕೆಯ ಹುಟ್ಟು ಹಬ್ಬದಂದೇ ಯುವಕ ಆತ್ಮಹತ್ಯೆ ಒಂಟಿಯಾದ ಸಿದ್ದರಾಮಯ್ಯ : ಇತ್ತ ನಮಸ್ಕಾರ ಮಾಡಿ ದಾಟಿದ ಡಿ. ಕೆ ಶಿವಕುಮಾರ್ಬೆಂಗಳೂರಲ್ಲಿ ಈಶ್ವರ್ ಖಂಡ್ರೆಗೆ, ಪೂಜ್ಯರಿಂದ ಆಶಿರ್ವಾದ ಅಭಿಮಾನಿಗಳಿಂದ ಗೌರವ ಸನ್ಮಾನ