Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬರಪೀಡಿತ ಪ್ರದೇಶಗಳನ್ನು ಘೋಷಿಸಿ, ತುರ್ತು ಪರಿಸ್ಥಿತಿ ಯೋಜನೆ ಜಾರಿಗೊಳಿಸಿ : ಆರ್. ಅಶೋಕ್ 

Advertisement

ಬೆಂಗಳೂರು: ರಾಜ್ಯದಲ್ಲಿ ತೀವ್ರಗೊಳ್ಳುತ್ತಿರುವ ಬರ ಪರಿಸ್ಥಿತಿಯನ್ನು ನಿರ್ವಹಣೆ ಮಾಡಲು ಯುದ್ಧೋಪಾದಿಯಲ್ಲಿ ಮುನ್ನೆಚ್ಚರಿಕೆ ಮತ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಆಗ್ರಹಿಸಿ ವಿಪಕ್ಷ ನಾಯಕ ಆರ್‌.ಅಶೋಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಪತ್ರ ಬರೆದಿದ್ದಾರೆ.

ಮುಂಗಾರು ಮಳೆಯ ತೀವ್ರ ಕೊರತೆಯಿಂದಾಗಿ ರಾಜ್ಯದ ಹಲವು ಭಾಗಗಳಲ್ಲಿ ರೈತರು, ಕೃಷಿ ಕಾರ್ಮಿಕರು ಹಾಗೂ ಗ್ರಾಮೀಣ ಜನತೆ ಸಂಕಷ್ಟ ಎದುರಿಸುತ್ತಿದ್ದಾರೆ.

 ಬಿತ್ತನೆ ಕಾರ್ಯಗಳು ಹಿನ್ನಡೆ ಕಂಡಿದ್ದು, ಬೆಳೆಗಳು ಒಣಗುವ ಭೀತಿ ಎದುರಾಗಿದೆ. ಜಲಾಶಯಗಳ ನೀರಿನ ಮಟ್ಟವೂ ನಿರಂತರವಾಗಿ ಕುಸಿಯುತ್ತಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯೂ ಗಂಭೀರ ಸ್ವರೂಪ ಪಡೆಯುವ ಆತಂಕ ಎದುರಾಗಿದೆ. 

ಸದ್ಯದ ಮಾಹಿತಿ ಪ್ರಕಾರ 150 ಕ್ಕೂ ಅಧಿಕ ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಹಲವೆಡೆ ಸಾಮಾನ್ಯಕ್ಕಿಂತ ಕಡಿಮೆ ಪ್ರಮಾಣದಲ್ಲಿ ಮಳೆ ಸುರಿದಿದೆ. ಈಗಾಗಲೇ ಬಿತ್ತನೆಯಾದ ಬೆಳೆಗಳು ತೇವಾಂಶದ ಕೊರತೆಯಿಂದ ಒಣಗುವ ಸ್ಥಿತಿಗೆ ತಲುಪಿದೆ. 

ಇದು ಕೃಷಿ ಉತ್ಪಾದನೆಯ ಮೇಲೆ ಹಾಗೂ ಉದ್ಯೋಗದ ಮೇಲೆ ನೇರ ಪರಿಣಾಮ ಬೀರುತ್ತಿದೆ.

 ಕೃಷಿ ಕಾರ್ಮಿಕರು ನಗರಗಳತ್ತ ಹಾಗೂ ನೆರೆ ರಾಜ್ಯಗಳತ್ತ ವಲಸೆ ಹೋಗುತ್ತಿದ್ದಾರೆ ಎಂದು ಅವರು ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ, ಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಜಲಾಶಯಗಳ ನೀರಿನ ಮಟ್ಟ ಅಪಾಯಕಾರಿಯಾಗಿ ಕುಸಿದಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ. ಇದು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಮೇಲೂ ಪರಿಣಾಮ ಬೀರಿದೆ. ಮುಂದೆ ಕುಡಿಯುವ ನೀರಿನ ಸಮಸ್ಯೆ ಯಾವ ಮಟ್ಟಿಗೆ ತೀವ್ರವಾಗಬಹುದು ಎಂಬುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಿದೆ. 

ಬಹುತೇಕ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಕುರಿತು ಸಮಗ್ರ ಪರಿಶೀಲನಾ ಸಭೆ ನಡೆಸಿಲ್ಲ, ತಾಲೂಕುಗಳಿಗೆ ಭೇಟಿ ನೀಡಿಲ್ಲ ಎಂಬುದು ದುರದೃಷ್ಟಕರ. ಕೃಷಿ ಇಲಾಖೆಗೆ ಪೂರ್ಣಾವಧಿ ಸಚಿವರೇ ಇಲ್ಲದೆ ಕಾರ್ಯನಿರ್ವಹಿಸುತ್ತಿದೆ.

 ಲಕ್ಷಾಂತರ ರೈತರ ಬದುಕಿನ ಪ್ರಶ್ನೆ ಎದುರಾಗಿರುವಾಗ, ಕೃಷಿ ಇಲಾಖೆಗೆ ನಾಯಕತ್ವ ಇಲ್ಲವಾಗಿರುವುದು ಆಡಳಿತದ ಆದ್ಯತೆಗಳ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ಅವರು ದೂರಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಿಂಗಳಿಗೆ 2 ದಿನ ಮಂತ್ರಿಗಳು ಜನರ ಬಳಿ ಹೋಗುವುದು ಕಡ್ಡಾಯ : ಡಿ. ಕೆ ಶಿವಕುಮಾರ್ ರಾಜ್ಯದ ವಿವಿಧೆಡೆ ಬಾಂಬ್ ಸ್ಫೋಟದ ಸರಣಿ ಬೆದರಿಕೆ : ಕೋರ್ಟ್, ಇಸ್ರೋ ಹಲವೆಡೆ ಬೆದರಿಕೆ ಬರಪೀಡಿತ ಪ್ರದೇಶಗಳನ್ನು ಘೋಷಿಸಿ, ತುರ್ತು ಪರಿಸ್ಥಿತಿ ಯೋಜನೆ ಜಾರಿಗೊಳಿಸಿ : ಆರ್. ಅಶೋಕ್ ಪಿಎಂ, ಸಿಎಂ ಹಾಗೂ ಸಚಿವರು 30 ದಿನ ನ್ಯಾಯಾಂಗ ಬಂಧನದಲ್ಲಿದ್ದರೆ ಅಧಿಕಾರದಿಂದ ವಜಾ 52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ತಡೆಯಾಜ್ಞೆ ರೈತರ ಸಮಸ್ಯೆಗಳಿಗೆ ಸುದ್ದಿ ಮೂಲಕ ಸಹಕಾರ:ಸಂಜೀವಕುಮಾರ ಜುನ್ನಾಬಾಗೇಪಲ್ಲಿ ತಾಲ್ಲೂಕು ಕಂಚೀಪುರಂ ಸೀರೆ ವ್ಯಾಪಾರಿಯ ತೆಲುಗು ಬ್ಯಾನರ್ ಕರವೇ ಕಾರ್ಯಕರ್ತರಿಂದ ಚಿಂದಿ ಚಿಂದಿ ಏಷ್ಯಾ ಇಂಟರ್ ನ್ಯಾಷನಲ್  ಕಲ್ಚರ್ ಅಕಾಡೆಮಿ ಯುನಿವರ್ಸಿಟಿಯಿಂದ  ಕಾಳೇಗೌಡರಿಗೆ, ಚೆನ್ನಕೇಶವ ಗೌರವ ಡಾಕ್ಟರೇಟ್ ಪದವಿಗೆ ಅಭಿನಂದಿಸಿದ : ಚಿಂತಕ ಡಾ.  ಸಂಗನ ಬಸಪ್ಪ ಬಿರಾದಾರ್ಹನಿಟ್ರ್ಯಾಪ್ ಮೂಲಕ ಸಹೋದ್ಯೋಗಿಯನ್ನೇ ಕಿಡ್ನ್ಯಾಪ್ : 8 ಜನ ಅರೆಸ್ಟ್ ರಾಯಚೂರು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಲು ಕೆಆರ್‌ಎಸ್‌ ಆಗ್ರಹ!