ಬೆಂಗಳೂರು: ದೀಪಕ್ ತಿಮ್ಮಯ್ಯ ಅವರನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮುಖ್ಯಮಂತ್ರಿಗಳ ಸಂಪರ್ಕ ಸಲಹೆಗಾರರಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿಗಳ ಪದಾವಧಿ ಅಥವಾ ಮುಂದಿನ ಆದೇಶದವರೆಗೆ ಈ ನೇಮಕಾತಿ ಜಾರಿಯಲ್ಲಿರಲಿದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.
ದೀಪಕ್ ತಿಮ್ಮಯ್ಯ ಅವರು ಮುಖ್ಯಮಂತ್ರಿಗಳೊಂದಿಗೆ ಸಂಬಂಧಿಸಿದ ಪತ್ರ ವ್ಯವಹಾರ ಹಾಗೂ ನಿಬಂಧನೆಗಳನ್ನು ಪ್ರತ್ಯೇಕವಾಗಿ ನಿರ್ವಹಿಸಲಿದ್ದಾರೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಮುಖ್ಯಮಂತ್ರಿಗಳ ಕಚೇರಿ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.


