ಧಾರವಾಡ : ತಾಲೂಕಿನ ಮರೇವಾಡ ಗ್ರಾಮ ಪಂಚಾಯತಿಗೆ 2021-2022 ರಿಂದ 2022-2023 ಮತ್ತು 2024-2025 ರವರಿಗೆನ
ಅವಧಿಯಲ್ಲಿ ಸರ್ಕಾರದಿಂದ ಮಂಜೂರಾದ ಎಸ್ ಸಿ ಎಸ್ ಪಿ/ಟಿಎಸ್‌ಪಿ ಅನುದಾನವನ್ನು ದಲಿತರ ಶ್ರೇಯೋಭಿವೃದ್ಧಿಗಾಗಿ ಬಳಸದೇ ಅನ್ಯ ಕಾರ್ಯಗಳಿಗೆ ವಿನಿಯೋಗಿಸಿದ್ದು ಅನುದಾನ ದುರ್ಬಳಕೆಯ ಬಗ್ಗೆ ತನಿಖೆ ನಡೆಸಿ ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರು ಕರೆಪ್ಪ ಮಾದರ ಉಪ ವಿಭಾಗ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರು ಬಸವರಾಜ ಮಾದರ ಹಾಗೂ ಕರ್ನಾಟಕ ಬಹುಜನ ಚಳುವಳಿ ಸಂಘಟನೆಯ ಯುವ ಘಟಕದ ರಾಜ್ಯಾಧ್ಯಕ್ಷರು ಸಿ ಎಮ್ ದೊಡಮನಿ ಉಪಸ್ಥಿತರಿದ್ದರು
ಗ್ರಾಮ ಪಂಚಾಯತಿ ಪಿಡಿಓ ಅಧ್ಯಕ್ಷರು ಹಾಗೂ ಮಾನ್ಯ ಕಾರ್ಯನಿರ್ವಾಹಕ ಅಭಿಯಂತರರು ಪಂಚಾಯತ್ ರಾಜ್ಯ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಸೇರಿದಂತೆ ಜನಪ್ರತಿನಿಧಿಗಳು ದಲಿತರಿಗೆ ಮೀಸಲಿಟ್ಟ ಅನುದಾನವನ್ನು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಈ ಕಾಮಗಾರಿಯ ಬಗ್ಗೆ ತನಿಖೆ ನಡಿಸಿ ಇವರೆಲ್ಲರ ವಿರುದ್ಧ ಎಸ್ ಸಿ ಎಸ್ ಪಿ/ಟಿಎಸ್‌ಪಿ ಕಾಯ್ದೆ 2013 ಪ್ರಕರಣ 25 ಮತ್ತು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿ ಪ್ರಕಾರ ಕ್ರಮ ಜರುಗಿಸಬೇಕು ಎಂದು ಮಾನ್ಯ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಸಿದರು. ಈ ಮನವಿ ಸ್ವೀಕರಿಸಿದ ಜಂಟಿ ನಿರ್ದೇಶಕರು ಇಲಾಖೆಯ ಮೇಲಾಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ಜರುಗಿಸುವುದಾಗಿ ತಿಳಿಸಿದರು
ವರದಿ : ನಿತೀಶಗೌಡ ತಡಸ ಪಾಟೀಲ್


