LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಒಂಟಿ ಮಹಿಳೆಯರ ಸಂರಕ್ಷಣೆ ಹಾಗೂ ಪುನರ್ವಸತಿಗೆ ಒತ್ತಾಯ

Advertisement
ಸಿರುಗುಪ್ಪ : ನಗರದ ತಾಲೂಕು ಕಛೇರಿಯಲ್ಲಿ ಪೆ.11ರಂದು ಒಂಟಿ ಮಹಿಳೆಯರ ಪುನರ್ವಸತಿ ಹಾಗೂ ಸರಂಕ್ಷಣೆಗೆ ಕ್ರಮ ವಹಿಸುವಂತೆ ಕರ್ನಾಟಕ ರಾಜ್ಯ ಒಂಟಿ ಮಹಿಳೆಯರ ಸಂರಕ್ಷಣ ಸಂಘ ತಾಲೂಕು ಸಮಿತಿಯಿಂದ ಸಿರಸ್ಥೆದಾರ ಮಂಜುನಾಥಗೌಡ ಅವರ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ತಾಲೂಕು ಸಂಚಾಲಕರಾದ ಕೆ.ಈರಮ್ಮ ಅವರು ಮಾತನಾಡಿ ದೇವದಾಸಿಯೇತರ ಒಂಟಿ ಮಹಿಳೆಯರ ಗಣತಿ ಮಾಡಿ ಪುನರ್ವಸತಿ ಕಲ್ಪಿಸಬೇಕು. ಒಂಟಿ ಮಹಿಳೆಯರಿಗೆ ಮಾಸಿಕ ಸಹಾಯಧನ ಕನಿಷ್ಠ 6ಸಾವಿರ ನೀಡಬೇಕು. ಗಂಡ ಸತ್ತ ಅಥವಾ ಬಿಟ್ಟು ಒಂಟಿಯಾಗಿರುವ ಯುವತಿಯರು ಹಾಗೂ 50 ವರ್ಷದೊಳಗಿನ ಮಹಿಳೆಯರ ಸಾಮಾಜಿಕ ಬಹಿಷ್ಕಾರದ ಪರಿಹಾರವಾಗಿ 10ಲಕ್ಷ ರೂಪಾಯಿ ಇಡುಗಂಟು ಘೋಷಿಸಬೇಕು. ದೌರ್ಜನ್ಯಕ್ಕೊಳಗಾಗಿ ಗರ್ಭಿಣಿ ಹಾಗೂ ಬಾಣಂತಿಯರಾದ ಒಂಟಿ ಮಹಿಳೆಯರಿಗೆ 18 ತಿಂಗಳ ಕಾಲ ಮಾಸಿಕ 10 ಸಾವಿರ ರೂಪಾಯಿಗಳ ವಿಶೇಷ ನೆರವು ಹಾಗೂ ವೈದ್ಯಕೀಯ ರಕ್ಷಣೆ ರಕ್ಷಣೆ ಸಿಗಬೇಕು. ಅವರ ಮಕ್ಕಳಿಗೆ ಸೂಕ್ತ ಕಾನೂನು ರಚಿಸಿ ಶಿಕ್ಷಣ ಹಾಗೂ ಉದ್ಯೋಗಕ್ಕೆ ಅಗತ್ಯ ನೆರವು ನೀಡಬೇಕು.



ನಿವೇಶನ ಸಹಿತ ಉಚಿತ ಮನೆಯನ್ನು ನೀಡುವ ಮೂಲಕ ಇನ್ನಿತರ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು.
ಸ್ವಯಂ ಉದ್ಯೋಗ ತರಬೇತಿಗೆ ಶೇ.75ರ ಸಹಾಯಧನ, ಉಳಿದ ಶೇ.25ಕ್ಕೆ ಐದು ವರ್ಷಗಳ ಕಾಲ ಬಡ್ಡಿರಹಿತ ಸಾಲ ಒದಗಿಸುವಂತೆ ಒತ್ತಾಯಿಸಿದರು.

ಇದೇ ವೇಳೆ ಸಹ ಸಂಚಾಲಕರಾದ ಅಂಬಮ್ಮ, ಗಂಗಮ್ಮ, ಹಂಪಮ್ಮ, ಲಕ್ಷ್ಮಿ, ಹನುಮಂತಿ, ಮಾಳಮ್ಮ, ದುರುಗಮ್ಮ, ಈರಮ್ಮ, ಮುಖಂಡರಾದ ಹೆಚ್.ತಿಪ್ಪಯ್ಯ, ವಿ.ಮಾರುತಿ, ಬಿ.ಎಲ್.ಈರಣ್ಣ, ಸೇರಿದಂತೆ ಇನ್ನಿತರರಿದ್ದರು.

ವರದಿ : ಶ್ರೀನಿವಾಸ ನಾಯ್ಕ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು