ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ, ನಾಳೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್ ಬೆಂಗಳೂರಿನಲ್ಲಿ ಘೋಷಿಸಿದ್ದಾರೆ.
ವಾಲ್ಮೀಕಿ ನಿಗಮದ ಹಣ ಲೂಟಿಯಾಗಿರುವುದು ಜಗಜ್ಜಾಹೀರಾಗಿದ್ದು, ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಈಗಾಗಲೇ ಅಗತ್ಯ ದಾಖಲೆಗಳನ್ನು ಒದಗಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಅಕ್ರಮದ ವಿರುದ್ಧ ಜನ ಧ್ವನಿ ಎತ್ತಿದ್ದಕ್ಕಾಗಿ ಆಡಳಿತರೂಢ ಕಾಂಗ್ರೆಸ್ ನಾಯಕರು ಪ್ರತಿಯಾಗಿ ಧರಣಿ ನಡೆಸುತ್ತಿರುವುದನ್ನು ಅವರು ತೀವ್ರವಾಗಿ ಖಂಡಿಸಿದರು.
ಈ ಹಗರಣದ ವಿರುದ್ಧದ ಹೋರಾಟದ ಭಾಗವಾಗಿ ನಾಳೆ ಬೆಳಿಗ್ಗೆ 9:30ಕ್ಕೆ ಫ್ರೀಡಂ ಪಾರ್ಕ್‌ನಿಂದ ಬೃಹತ್ ಪ್ರತಿಭಟನಾ ರ‍್ಯಾಲಿ ಹಮ್ಮಿಕೊಳ್ಳಲಾಗಿದ್ದು, ರ‍್ಯಾಲಿಯ ಮೂಲಕ ತೆರಳಿ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.


