ಡೆಂಘೀ ರೋಗ ಲಕ್ಷಣಗಳು: ಮೈಬಿಸಿ (ತಾಪಮಾನ) ಹೆಚ್ಚಾಗುವುದು, ತೀವ್ರ ತಲೆನೋವು, ಕೀಲು ಮತ್ತು ಸ್ನಾಯು ನೋವು, ದದ್ದು ಮತ್ತು ಕೆಲವು ಸಲ ರಕ್ತಸ್ರಾವ, ವಾಂತಿ ಮತ್ತು ವಾಕರಿಕೆ ಕಾಣಿಸಿಕೊಳ್ಳಬಹುದು.
ಈ ಡೆಂಘೀ ಜ್ವರವೂ ವಿಶೇಷವಾಗಿ ಈಡಿಸ್ ಎಂಬ ಹೆಣ್ಣು ಸೊಳ್ಳೆಯ ಕಚ್ಚುವಿಕೆಯಿಂದ ಉಂಟಾಗುತ್ತದೆ. ಸೋಂಕಿತ ವ್ಯಕ್ತಿಯನ್ನು ಕಚ್ಚಿ ನಂತರ ಸೋಂಕಿಲ್ಲದ ವ್ಯಕ್ತಿಯನ್ನು ಕಚ್ಚಿದಾಗ ಈ ಕಾಯಿಲೆಯು ಬರುತ್ತದೆ. ಇದು ಪ್ರಪಂಚದಾದ್ಯಂತ ಉಷ್ಣವಲಯದ ಮತ್ತು ಉಪ ಉಷ್ಣವಲಯದ ಪ್ರದೇಶಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದೆ.

