ಚಿಕ್ಕೋಡಿ : : ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ನ್ಯಾ. ವೀರಪ್ಪ ಅವರು ಗುರುವಾರ(ಸೆ.24) ಚಿಕ್ಕೋಡಿಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಇಲಾಖೆ ವತಿಯಿಂದ ಕೈಗೊಳ್ಳಲಾದ ಜಲ ಜೀವನ ಮಿಷನ್ ಯೋಜನೆಯಡಿ ಕೈಗೊಳ್ಳಲಾದ ಕಾಮಗಾರಿಗಳು ಹಾಗೂ ಪೂರ್ಣ ಕೈಗೊಂಡ ಕಾಮಗಾರಿಗಳನ್ನು ಗ್ರಾಮ ಪಂಚಾಯತಗಳಿಗೆ ಹಸ್ತಾಂತರಿಸಿದರ ಮಾಹಿತಿ ಪಡೆದು ಕರೋಶಿಯಲ್ಲಿ ಕುಡಿಯುವ ನೀರಿನ ಕಾಮಗಾರಿ ಪೂರ್ಣಗೊಳಿಸದೆ ಎರಡು ಕೋಟಿ ರೂ. ಅನುದಾನ ಬಿಡುಗಡೆ ಮಾಡಿರುವ ಕುರಿತ ದೂರಿಗೆ ವಿವರಣೆ ಪಡೆದು ಅಸಮಾಧಾನ ವ್ಯಕ್ತ ಪಡಿಸಿ, ಕಾಮಗಾರಿ ಪೂರ್ಣಗೊಳಸದೆ ಇರುವ ಗುತ್ತಿಗೆದಾರರ ವಿರುದ್ಧ ಹಾಗೂ ಕಾಮಗಾರಿ ನೀಡಿದ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು ತಿಳಿಸಿದರು.
ತದನಂತರ ಪಂಚಾಯತರಾಜ್ ಇಂಜಿನಿಯರಿಂಗ್ ವಿಭಾಗಕ್ಕೆ ಭೇಟಿ ನೀಡಿ ಕಚೇರಿ ಸಿಬ್ಬಂದಿಗಳ ಹಾಜರಾತಿ ವಿವರ ಪಡೆದುಕೊಂಡರು. ಇಲಾಖೆ ವತಿಯಿಂದ ವಿವಿಧ ಕಾಮಗಾರಿಗಳ ಮಾಹಿತಿ ಪಡೆದು ದಾಖಲಾತಿಗಳನ್ನು ಪರಿಶೀಲಿಸಿ ಕಾಮಗಾರಿಗಳ ಸ್ಥಳ ಪರಿಶೀಲನೆ ಮಾಡಿದರ ಹಾಗೂ ದಾಖಲಾತಿಗಳಲ್ಲಿನ ಹಸ್ತಾಕ್ಷರಗಳನ್ನು ಪರಿಶೀಲಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಕಾರ್ಯದರ್ಶಿಗಳಾದ ಅರವಿಂದ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಎನ್. ಶಿವಕುಮಾರ, ಲೋಕಾಯುಕ್ತ ಎಸ್.ಪಿ. ಪ್ರಸನ್ ದೇಸಾಯಿ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಉಪ ವಿಭಾಗಾಧಿಕಾರಿ ಎಸ್.ಎಸ್.ಸಂಪಗಾವಿ, ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ, ತಹಶೀಲ್ದಾರ ಆರ್.ಆರ್.ಬುರ್ಲಿ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು
ವರದಿ ರಾಜು ಮುಂಡೆ


